ರಾಜ್ಯ ಸರ್ಕಾರವು ಪೋಷಕರು, ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, 1 ನೇ ತರಗತಿ ಪ್ರವೇಶಕ್ಕೆ 6 ವರ್ಷ ಕಡ್ಡಾಯವಲ್ಲ, 5 ವರ್ಷ 5 ತಿಂಗಳು ತುಂಬಿದರೆ 1 ನೇ ತರಗತಿಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಶ್ರೀ ಮಧು ಬಂಗಾರಪ್ಪ ತಿಳಿಸಿದರು.
ರಾಜ್ಯದಲ್ಲಿ 1 ನೇ ತರಗತಿಗೆ 6 ವರ್ಷ ಪೂರ್ಣ ಕಡ್ಡಾಯ ಎಂಬ ನಿಯಮವನ್ನು ಶಿಕ್ಷಣ ಇಲಾಖೆ ಸಡಿಲಗೊಳಿಸಿದ್ದು, ಶಾಲಾ ವಯೋಮಿತಿ ಸಡಿಲಿಕೆಗೆ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ.
ರಾಜ್ಯ ಶಿಕ್ಷಣ ನೀತಿ ಆಯೋಗವು ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ವಯೋಮಿತಿ ಸಡಿಲಗೊಳಿಸುವ ಕುರಿತ ಶಿಫಾರಸು ಒಳಗೊಂಡ ತಾತ್ಕಾಲಿಕ ವರದಿಯನ್ನು ಸಲ್ಲಿಸಿತ್ತು. ಇದನ್ನು ಪರಿಶೀಲಿಸಿರುವ ಶಾಲಾ ಶಿಕ್ಷಣ ಇಲಾಖೆಯು ಈ ನಿರ್ಧಾರವನ್ನು ಪ್ರಕಟಿಸಿದೆ. ಶಾಲಾ ಶಿಕ್ಷಣ ಇಲಾಖೆಯು 2022ರಲ್ಲಿ ಹೊರಡಿಸಿದ್ದ ಆದೇಶದ ಪ್ರಕಾರ 2025ರ ಜೂನ್ 1ರೊಳಗೆ 6 ವರ್ಷಗಳನ್ನು ಪೂರ್ಣಗೊಳಿಸಿದ ಮಕ್ಕಳು ಮಾತ್ರವೇ 2025-26ನೇ ಶೈಕ್ಷಣಿಕ ವರ್ಷಕ್ಕೆ ಒಂದನೇ ತರಗತಿಗೆ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ ಎಂದು ಹೇಳಲಾಗಿತ್ತು. ಇದರಿಂದ ಮಕ್ಕಳ ಪ್ರವೇಶಕ್ಕೆ ಭಾರಿ ಸಮಸ್ಯೆ ಎದುರಾದ ಕಾರಣ ಮೊದಲಿನಂತೆಯೇ ಇಚ್ಛೆಯನುಸಾರ ಪ್ರವೇಶಾತಿಗೆ ವಯೋಮಿತಿ ಸಡಿಲಿಸುವಂತೆ ಪೋಷಕರು ಕೋರಿದ್ದರು. ಈ ಬೇಡಿಕೆ ಈಡೇರಿದ್ದು, ಮಕ್ಕಳ ಪ್ರವೇಶಕ್ಕೆ ಇದ್ದ ಗೊಂದಲಗಳಿಗೆ ರಿಲೀಫ್ ಸಿಕ್ಕಿದೆ.
ಒಂದನೇ ತರಗತಿಗೆ ಪ್ರವೇಶ ಪಡೆಯಲು ವಯೋಮಿತಿ ಸಡಿಲ
By kspstadk.com
Updated On:
