5,8,9 ನೇ ತರಗತಿ ಮೌಲ್ಯಾಂಕನದ ಕುರಿತು ಪ್ರಮುಖ ಮಾಹಿತಿ

WhatsApp Group Join Now
Telegram Group Join Now

2023-24ನೇ ಸಾಲಿನ 5, 8 ಮತ್ತು 9ನೇ ತರಗತಿ SA-2 ಮೌಲ್ಯಾಂಕನ ಕಾರ್ಯ ಮುಗಿದಿದ್ದು, ಉಲ್ಲೇಖ-2ರಂತೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ದಿನಾಂಕ: 08-04-2024ರಂದು ಫಲಿತಾಂಶವನ್ನು ಪ್ರಕಟಿಸಲು ತಿಳಿಸಲಾಗಿರುತ್ತದೆ. ತದನಂತರದಲ್ಲಿ ಫಲಿತಾಂಶವನ್ನು ಪ್ರಕಟಿಸಲು ಘನ ಸರ್ವೋಚ್ಛ ನ್ಯಾಯಾಲಯವು ತಡೆಯಾಜ್ಞೆಯನ್ನು ನೀಡಿದ್ರು, ಅಂತಿಮ ತೀರ್ಪು ಬಾಕಿ ಇರುತ್ತದೆ.


ಪ್ರಸ್ತುತ 2023-24ನೇ ಸಾಲಿನ ಶೈಕ್ಷಣಿಕ ವರ್ಷ ಅಂತ್ಯಗೊಳ್ಳುತ್ತಿದ್ದು, ದಿನಾಂಕ: 29-05-2024 ರಿಂದ 2024- 25ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. 2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸದೇ ಇರುವುದರಿಂದ ಅವರನ್ನು ಮುಂದಿನ ಶೈಕ್ಷಣಿಕ ವರ್ಷಕ್ಕೆ/ತರಗತಿಗೆ ಶಾಲಾ ಪ್ರವೇಶ/ದಾಖಲಾತಿ ಮಾಡಲು, ಪ್ರವೇಶ ಶುಲ್ಕ ಪಾವತಿಸಲು ಹಾಗೂ ಬೇರೆ ಸ್ಥಳಗಳಿಗೆ
ವರ್ಗಾವಣೆ ಹೊಂದಿರುವ ಪ್ರಯುಕ್ತ ಮಕ್ಕಳ ವರ್ಗಾವಣೆ ಪ್ರಮಾಣಪತ್ರ ಪ್ರಗತಿ ಪತ್ರ ಮತ್ತು ವ್ಯಾಸಂಗ ಪ್ರಮಾಣಪತ್ರಗಳನ್ನು ವಿತರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಉಲ್ಲೇಖ-3 ರನ್ವಯ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಅಗತ್ಯ ಕ್ರಮ ವಹಿಸುವಂತೆ ಕೋರಿರುತ್ತಾರೆ. ಅದರಂತೆ ಮಕ್ಕಳ ಶೈಕ್ಷಣಿಕ ಭವಿಷ ಸುಗಮಗೊಳಿಸಲು ಈ ಕೆಳಕಂಡಂತೆ ಕ್ರಮವಹಿಸುವುದು.


ಘನ ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣ ಸಂಖ್ಯೆ:8142/2024, 8136/2024 ಮತ್ತು 8127/2024ರ ಮಧ್ಯಂತರ ತೀರ್ಪಿನಂತೆ, 2023-24ನೇ ಸಾಲಿನ 5, 8 ಮತ್ತು 9ನೇ ತರಗತಿ SA-2 ಮೌಲ್ಯಾಂಕನವನ್ನು ತಡೆಹಿಡಿದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈಗಾಗಲೇ ಶಾಲೆಗಳಲ್ಲಿ ನಡೆದಿರುವ FA- 1, FA-2, FA-3, FA-4 ಮತ್ತು SA-1 ಗಳ ಮೌಲ್ಯಾಂಕನದ ಆಧಾರದ ಮೇಲೆ ಮಕ್ಕಳನ್ನು ಮುಂದಿನ ಶೈಕ್ಷಣಿಕ
ತರಗತಿಗೆ ಮುಂದುವರೆಸಲು ಅವಕಾಶ ಕಲ್ಪಿಸುವುದು.

IMG 20240520 WA0185
WhatsApp Group Join Now
Telegram Group Join Now
Sharing Is Caring:

Leave a Comment