ಮಂಡಲಿ ವತಿಯಿಂದ ಮೌಲ್ಯಾಂಕನ ನಡೆಸುವ ವಿಷಯಗಳನ್ನು ಹೊರತುಪಡಿಸಿ ಉಳಿದೆಲ್ಲಾ ವಿಷಯಗಳಿಗೂ ಮಂಡಲಿಯಿಂದ ನಿಗದಿಪಡಿಸಿರುವ ದಿನಾಂಕಕ್ಕಿಂತ ಮೊದಲೇ ತಮ್ಮ ಶಾಲಾ ಹಂತದಲ್ಲಿಯೇ ಮೌಲ್ಯಾಂಕನ ನಡೆಸುವುದು.
(ಉದಾ: ದೈಹಿಕ ಶಿಕ್ಷಣ, ಇತರೆ ವಿಷಯಗಳು)
8ನೇ ತರಗತಿಯಲ್ಲಿ ಪ್ರಥಮ ಭಾಷೆ – ಇಂಗ್ಲೀಷ್ (NCERT) ಮತ್ತು ತೃತೀಯ ಭಾಷೆ ಹಿಂದಿ (NCERT) ವಿಷಯಗಳು ಆದರ್ಶ ವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗುತ್ತವೆ.
ವಿಶೇಷ ಶಾಲೆಗಳ ವಿದ್ಯಾರ್ಥಿಗಳಿಗೆ ಮಂಡಲಿಯಿಂದ ಸರಬರಾಜು ಮಾಡುವ ಪ್ರಶೋತ್ತರ ಪತ್ರಿಕೆಗಳನ್ನೇ ಬಳಸಿ ಶಾಲಾ ಹಂತದಲ್ಲಿ ಹಿಂದಿನ ಸಾಲುಗಳಲ್ಲಿ ನಡೆಸಿದಂತೆ ಮೌಲ್ಯಾಂಕನ ನಡೆಸುವುದು.
ದಿನಾಂಕ: 30.03.2023 ರಂದು ನಡೆಯುವ ಗಣಿತ ವಿಷಯದ ಮೌಲ್ಯಾಂಕನದ ಅವಧಿಯನ್ನು ಬೆಳಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ನಿಗದಿಪಡಿಸಲಾಗಿದೆ ಹಾಗೂ ಉಳಿದ ಎಲ್ಲಾ ದಿನಗಳ ಮೌಲ್ಯಾಂಕನವು ಮಧ್ಯಾಹ್ನ 2.30 ರಿಂದ 4.30 ರವರೆಗೆ
ನಡೆಯಲಿದೆ. ಈ ವಿಷಯವನ್ನು ಶಾಲಾ ಮುಖ್ಯ ಶಿಕ್ಷಕರು ಎಲ್ಲಾ ವಿದ್ಯಾರ್ಥಿಗಳಿಗೆ ತಿಳಿಸುವುದು.
ಪ್ರಶ್ನೆಪತ್ರಿಕೆ ಸ್ವರೂಪ
* 5 ಮತ್ತು 8 ನೇ ತರಗತಿಯ ವಿದ್ಯಾರ್ಥಿಗಳಿಗೆ ದಿನವೊಂದಕ್ಕೆ ಒಂದು ವಿಷಯದಂತೆ ಮೌಲ್ಯಾಂಕನ ನಡೆಸಲಾಗುತ್ತಿದೆ.
* ಪ್ರತಿ ವಿಷಯದ ಮೌಲ್ಯಾಂಕನಕ್ಕೆ 2 ಗಂಟೆಗಳ ಅವಧಿಯನ್ನು ನಿಗದಿಪಡಿಸಲಾಗಿದೆ.
* ತರಗತಿವಾರು ಪ್ರತಿ ವಿಷಯಕ್ಕೆ 40 ಅಂಕಗಳ ಲಿಖಿತ ಮೌಲ್ಯಾಂಕನಕ್ಕೆ 28 ಪ್ರಶ್ನೆಗಳನ್ನೊಳಗೊಂಡ (1 ಅಂಕದ 20 ಬಹುಆಯ್ಕೆ ಪ್ರಶ್ನೆಗಳು, 2 ಅಂಕಗಳ 5, 3 ಅಂಕಗಳ 2 ಹಾಗೂ 4 ಅಂಕಗಳ 1 ವಿವರಣಾತ್ಮಕ ಪ್ರಶ್ನೆಗಳು) ಪ್ರತ್ಯೇಕ ಪ್ರಶೋತ್ತರ ಪತ್ರಿಕೆಯನ್ನು ನೀಡಲಾಗುತ್ತದೆ.
* 10 ಅಂಕಗಳ ಮೌಖಿಕ ಮೌಲ್ಯಾಂಕನವನ್ನು ಶಾಲಾ ಹಂತದಲ್ಲಿಯೇ ನಿರ್ವಹಿಸಲು ತಿಳಿಸಲಾಗಿದೆ.
* 40 ಅಂಕಗಳ ಲಿಖಿತ ಮೌಲ್ಯಾಂಕನ ಮತ್ತು 10 ಅಂಕಗಳ ಮೌಖಿಕ ಮೌಲ್ಯಾಂಕನದಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳನ್ನು
20 ಅಂಕಗಳಿಗೆ ಪರಿವರ್ತಿಸುವುದು.
* ವಿದ್ಯಾರ್ಥಿಗಳನ್ನು ಮೌಲ್ಯಾಂಕನಕ್ಕೆ ಸಿದ್ಧಗೊಳಿಸಲು ಮಾದರಿ ಪ್ರಶೋತ್ತರ ಪತ್ರಿಕೆಗಳನ್ನು ಮತ್ತು ಮೌಲ್ಯಾಂಕನಕ್ಕೆ
ಒಳಪಡಿಸಿರುವ ಪಠ್ಯಪುಸ್ತಕದಲ್ಲಿನ ಘಟಕಗಳ ವಿವರಗಳನ್ನು ಮಂಡಲಿಯ ವೆಬ್‌ಸೈಟ್‌ನಲ್ಲಿ ಈಗಾಗಲೇ ಪ್ರಕಟಿಸಲಾಗಿದೆ.
5 ಮತ್ತು 8ನೇ ತರಗತಿ ಮೌಲ್ಯಾಂಕನ ಪರಿಷ್ಕೃತ ವೇಳಾಪಟ್ಟಿ
ಪರೀಕ್ಷೆಯ ಕುರಿತು ಹೆಚ್ಚಿನ ಮಾಹಿತಿ
2022-23ನೇ ಸಾಲಿನ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಾಂಕನನಕ್ಕೆ ಸಂಬಂಧಿಸಿದಂತೆ ಪರಿಷ್ಕೃತ ಪ್ರವೇಶ ಪತ್ರವನ್ನು ಲಭ್ಯ ಮಾಡಿರುವ ಬಗ್ಗೆ.