ಸರಕಾರಿ ನೌಕರರಿಗೆ Good news

IMG 20221120 WA0029
IMG 20221120 WA0028

ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಪರಿಶೀಲಿಸಲು ವೇತನ ಆಯೋಗವನ್ನು ರಚಿಸುವ ಬಗ್ಗೆ ಮಾನ್ಯ ಮುಖ್ಯ ಮಂತ್ರಿಗಳು ಘೋಷಿಸಿರುತ್ತಾರೆ.

2. ಘೋಷಣೆಯ ಅನುಸಾರ ರಾಜ್ಯ ಸರ್ಕಾರವು ಈ ಕೆಳಕಂಡ ಸದಸ್ಯರನ್ನೊಳಗೊಂಡ 7ನೇರಾಜ್ಯ ವೇತನ ಆಯೋಗವನ್ನು ರಚಿಸಲು ಸರ್ಕಾರವು ಹರ್ಷಿಸುತ್ತದೆ:

(1) ಶ್ರೀ ಸುಧಾಕರ್ ರಾವ್, ಭಾ.ಆ.ಸೇ. (ನಿ)ಅಧ್ಯಕ್ಷರು(2) ಶ್ರೀ ಪಿ.ಬಿ.ರಾಮಮೂರ್ತಿ, ಭಾ.ಆ.ಸೇ. (ನಿ)ಸದಸ್ಯರು(3) ಶ್ರೀ ಶ್ರೀಕಾಂತ್ ಬಿ.ವನಹಳ್ಳಿ, ಸದಸ್ಯರುಪ್ರಧಾನ ನಿರ್ದೇಶಕರು (ನಿ), ರಾಜ್ಯ ಲೆಕ್ಕಪತ್ರ ಇಲಾಖೆ(4) ಶ್ರೀಮತಿ ಹಪ್ಪಿಬಾ ರಾಣಿ ಕೊರ್ಲಪಾಟಿ, ಭಾ.ಆ.ಸೇ.ಜಂಟಿ ಕಾರ್ಯದರ್ಶಿ, ಮೂಲಸೌಲಭ್ಯ ಅಭಿ

ವೃದ್ಧಿ ಇಲಾಖೆ ಕಾರ್ಯದರ್ಶಿ

3. ವೇತನ ಆಯೋಗದ ಪರಿಶೀಲನಾರ್ಹ ಅಂಶಗಳು ಈ ಕೆಳಕಂಡಂತಿವೆ:

(ಎ) ರಾಜ್ಯ ಸರ್ಕಾರಿ ನೌಕರರ (ಯುಜಿಸಿ/ಎಐಸಿಟಿಇ/ಐಸಿಎಆರ್/ಎನ್‌ಜೆಪಿಸಿವೇತನ ಶ್ರೇಣಿ ಹೊಂದಿರುವವರನ್ನು ಹೊರತುಪಡಿಸಿ) ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು,ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳಬೋಧಕೇತರ ಸಿಬ್ಬಂದಿಗಳಿಗೆ ಮರಣ ಹಾಗೂ ನಿವೃತ್ತಿ ಉಪದಾನ ಸೌಲಭ್ಯಗಳನ್ನೊಳಗೊಂಡಂತೆ ಲಭ್ಯವಿರುವ ಎಲ್ಲಾ ಕ್ರೋಢೀಕೃತ ಸೌಲಭ್ಯಗಳನ್ನುಗಣನೆಗೆ ತೆಗೆದುಕೊಂಡು, ಈ ಸಿಬ್ಬಂದಿಗಳ ಪ್ರಸ್ತುತ ವೇತನ ರಚನೆಯನ್ನು ಪರಿಶೀಲಿಸುವುದು ಹಾಗೂ ಅಪೇಕ್ಷಣೀಯವಾದ ಹಾಗೂ ಕಾರ್ಯಸಾಧ್ಯವಿರುವನೂತನ ವೇತನ ರಚನೆಯನ್ನು ರೂಪಿಸುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ವೃಂದದ ಹುದ್ದೆಗಳನ್ನು ಸಮೀಕರಿಸಿಕೇಂದ್ರ ಸರ್ಕಾರದ ವೇತನ ರಚನೆಯನ್ನು ಅಳವಡಿಸಿಕೊಳ್ಳುವಕಾರ್ಯಸಾಧ್ಯತೆಗಳನ್ನು ಪರಿಶೀಲಿಸುವುದು.

(ಸಿ) ರಾಜ್ಯ ಸರ್ಕಾರವು ಅಳವಡಿಸಿಕೊಳ್ಳಬಹುದಾದ ತುಟ್ಟಿಭತ್ಯೆಯ ಸೂತ್ರವನ್ನುನಿರ್ಧರಿಸಿ ಪರಿಶೀಲಿಸುವುದು.

ಡಿ ) ಮನೆ ಬಾಡಿಗೆ ಭತ್ಯೆ ಮತ್ತು ನಗರ ಪರಿಹಾರ ಭತ್ಯೆ, ವಿಶೇಷ ಭತ್ಯೆಗಳು ಇತ್ಯಾದಿಮತ್ತು ರಜೆ ಪ್ರಯಾಣ ರಿಯಾಯಿತಿ ಮತ್ತು ವೈದ್ಯಕೀಯ ಮರುಪಾವತಿಸೌಲಭ್ಯಗಳನ್ನೊಳಗೊಂಡಂತ ವಿವಿಧ ಭತ್ಯಗಳ ಪ್ರಮಾಣವನ್ನುಪರಿಶೀಲಿಸುವುದು ಹಾಗೂ ಅಪೇಕ್ಷಣೀಯವಾದ ಹಾಗೂ ಕಾರ್ಯಸಾಧ್ಯವಿರುವಬದಲಾವಣೆಗಳನ್ನು ಸಲಹೆ ಮಾಡುವುದು.

(ಇ) ನಿವೃತ್ತಿ ವೇತನ ಮತ್ತು ನಿವೃತ್ತಿ ಸೌಲಭ್ಯಗಳನ್ನು ಪರಿಶೀಲಿಸುವುದು
(ಈ) ರಾಜ್ಯ ಸರ್ಕಾರದಿಂದ ವಹಿಸಲ್ಪಡುವ/ಸೂಚಿಸಬಹುದಾದ ಇತರ ವಿಷಯಗಳನ್ನುಪರಿಶೀಲಿಸುವುದು.ಆಯೋಗವು ತನ್ನ ಶಿಫಾರಸ್ಸುಗಳನ್ನು ಮಾಡುವಲ್ಲಿ, ರಾಜ್ಯ ಸಂಪನ್ಮೂಲಗಳು ಹಾಗೂ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಯೋಜನೆಗಳ ಕುರಿತಾಗಿ ರಾಜ್ಯ ಸರ್ಕಾರದ ಹೊಣೆಗಳು, ಶಾಸನಬದ್ಧ ಹಾಗೂ ಕ್ರಮಬದ್ಧ ಕಾರ್ಯಗಳು, ಋಣಸೇವಾ ನಿರ್ವಹಣೆಗಳು ಮತ್ತುಇತರ ಅಭಿವೃದ್ಧಿಯೇತರ ಅಗತ್ಯಗಳನ್ನು ಹಾಗೂ ವಿತ್ತೀಯ ಹೊಣೆಗಾರಿಕೆ ನಿರ್ವಹಣೆ ಅಧಿನಿಯ 2002ರ ಅಧ್ಯಾದೇಶದ ಅವಕಾಶಗಳ ಪರಿಮಿತಿಯನ್ನು ಗಮನದಲ್ಲಿರಿಸಿಕೊಳ್ಳುವುದು.

5. ಆಯೋಗವು ತನ್ನದೇ ಆದ ಕಾರ್ಯವಿಧಾನಗಳನ್ನು ರೂಪಿಸಿಕೊಳ್ಳುವುದು ಹಾಗೂಪರಿಶೀಲನಾರ್ಹ ಅಂಶಗಳಿಗೆ ಅಗತ್ಯವೆನಿಸಿದ ಮಾಹಿತಿಗಳನ್ನು ವಿವಿಧ ಇಲಾಖೆಗಳಿಂದಪಡೆಯಬಹುದಾಗಿರುತ್ತದೆ.

6. ಸರ್ಕಾರದ ಎಲ್ಲಾ ಇಲಾಖೆಗಳು ಆಯೋಗವು ಅಪೇಕ್ಷಿಸುವ ಎಲ್ಲಾ ಮಾಹಿತಿ, ದಾಖಲೆ ಹಾಗೂ ಇನ್ನಿತರ ಸಹಕಾರವನ್ನು ಒದಗಿಸತಕ್ಕದ್ದು. ಎಲ್ಲಾ ಸೇವಾ ಸಂಘಟನೆಗಳು, ಸ್ಥಳೀಯ ಸಂಸ್ಥೆಗಳು, ಅನುದಾನಿತ ಸಂಸ್ಥೆಗಳು ಮತ್ತು ಇತರ ಸಂಬಂಧಪಟ್ಟವರು ಆಯೋಗಕ್ಕೆ ಅವುಗಳಸಂಪೂರ್ಣ ಸಹಕಾರ ಮತ್ತು ನೆರವನ್ನು ನೀಡುತ್ತವೆ ಎಂದು ಸರ್ಕಾರವು ಭಾವಿಸುತ್ತದೆ.

7. ವೇತನ ಆಯೋಗವು ತನ್ನ ವರದಿಯನ್ನು ಆರು ತಿಂಗಳೊಳಗೆ ಸಲ್ಲಿಸತಕ್ಕದ್ದು.

Sharing Is Caring:

Leave a Comment