5 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ನೋಂದಣಿ
ರಸ ಪ್ರಶ್ನೆಯಲ್ಲಿ ಭಾಗವಹಿಸುವ ಕುರಿತು ಮಾಹಿತಿ
ಪರಿಷ್ಕೃತ ವೇಳಾಪಟ್ಟಿ
2022-23 ನೇ ಸಾಲಿನ ಸರ್ಕಾರಿ ಶಾಲೆಗಳಲ್ಲಿ 5 ರಿಂದ 10ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಗಣಿತ, ವಿಜ್ಞಾನ, ತಂತ್ರಜ್ಞಾನ, ಭಾಷೆ, ದೇಶದಸಂಸ್ಕೃತಿ, ಪರಂಪರೆ, ಸಾಮಾನ್ಯ ಜ್ಞಾನ ಹಾಗೂ ಇತರ ವಿಷಯಗಳಲ್ಲಿ ಅರಿವಿನ ಮಟ್ಟವನ್ನು ಹೆಚ್ಚಿಸಲು ವಿದ್ಯಾರ್ಥಿಗಳಿಗೆ ಕಿರಿಯ ಹಾಗೂ ಹಿರಿಯರ ವಿಭಾಗ ಮಟ್ಟದಲ್ಲಿ ರಸಪ್ರಶ್ನೆ ಸ್ಪರ್ಧೆಯನ್ನು (Quiz Competition)ಆನ್ ಲೈನ್ ಮೂಲಕ ಆಯೋಜಿಸುವ ಸಂಬಂಧ ಉಲ್ಲೇಖಿತ ಪತ್ರದ ಸುತ್ತೋಲೆಯಲ್ಲಿ ವಿವರವಾಗಿ ಮಾಹಿತಿ ನೀಡಲಾಗಿತ್ತು. ಆದರೆ ಕೆಲವು ಜಿಲ್ಲೆಗಳಲ್ಲಿ ಶಾಲಾ ಹಂತದಲ್ಲಿ ಶಿಕ್ಷಕರು ವೇಳಾಪಟ್ಟಿಯಂತೆ ರಸಪ್ರಶ್ನೆಸ್ಪರ್ಧೆಯನ್ನು ನಡೆಸಿ ವಿಜೇತ ವಿದ್ಯಾರ್ಥಿಗಳ ಮಾಹಿತಿಯನ್ನು ವಿದ್ಯಾವಾಹಿನಿ ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಿರುವುದಿಲ್ಲ. ಈ ಹಿನ್ನೆಲೆಯಲ್ಲಿ ರಸಪ್ರಶ್ನೆ ಸ್ಫರ್ಧೆ ಕಾರ್ಯಕ್ರಮದ ವೇಳಾಪಟ್ಟಿಯನ್ನು ಮರು ನಿಗದಿಗೊಳಿಸಲಾಗಿದೆ.
ಪ್ರೌಢ ಹಾಗೂ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗಾಗಿ “ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ಕಾರ್ಯಕ್ರಮದಡಿ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಸಪ್ರಶ್ನೆ (Qult Competition) ಸ್ಪರ್ಧೆಯನ್ನು ಆಯೋಜಿಸಲು ಅನುಮೋದನೆಯಾಗಿರುತ್ತದೆ. ವಿದ್ಯಾರ್ಥಿಗಳಿಗೆ ಈ ಸ್ಪರ್ಧೆಯನ್ನು ಆಯೋಜಿಸುವ ಮೂಲಕ ಅವರಲ್ಲಿ ಗಣಿತ, ವಿಜ್ಞಾನ, ತಂತ್ರಜ್ಞಾನ, ಸಾಮಾನ್ಯ ಜ್ಞಾನ, ಭಾಷೆ, ಭಾರತ ದೇಶದ ಪರಂಪರೆ ಹಾಗೂ ವಿವಿಧ ಇತರ ವಿಷಯಗಳಲ್ಲಿ ಅರಿವಿನ ಮಟ್ಟವನ್ನು ಹೆಚ್ಚಿಸಲು ಹಾಗೂ ಕಲಿಕೆಯಲ್ಲಿ ಆಸಕ್ತಿಯನ್ನು ಮೂಡಿಸಲು ಈ ಕಾರ್ಯಕ್ರಮವು ಪೂರಕವಾಗಿದೆ.
ಈ ರಸಪ್ರಶ್ನೆಯ ಉದ್ದೇಶಗಳು ಹೀಗಿವೆ :
ವಿದ್ಯಾರ್ಥಿಗಳಲ್ಲಿ ಹೊಸ ವಿಷಯಗಳ ಬಗ್ಗೆ ತಿಳಿಯುವ ಕುತೂಹಲ ಹಾಗೂ ಸಾಮಾನ್ಯ ಜ್ಞಾನವನ್ನು ಬೆಳೆಸುವುದು.
ವಿದ್ಯಾರ್ಥಿಗಳಲ್ಲಿ ಚಿಂತಿಸುವ, ವಿಶ್ಲೇಷಿಸುವ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವುದು. ಭಾರತವು ವಿವಿಧ ಕ್ಷೇತ್ರದಲ್ಲಿ ಸಾಧಿಸಿರುವ ಸಾಧನೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು.
ವಿದ್ಯಾರ್ಥಿಗಳನ್ನು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸಿ ಅವರಲ್ಲಿ ಸ್ಪರ್ಧಾ ಮನೋಭಾವನೆಯನ್ನು ಬೆಳೆಸುವುದು.
ಭಾರತದ ಶ್ರೀಮಂತ ಪರಂಪರೆಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿ, ಅವರಲ್ಲಿ ದೇಶದ ಬಗ್ಗೆ ಹೆಮ್ಮೆ ಹಾಗೂ ದೇಶಪ್ರೇಮ ಬೆಳೆಸುವುದು.
ರಾಷ್ಟ್ರೀಯ ಶಿಕ್ಷಣ ನೀತಿ 2020 ನ್ನು ಕಾರ್ಯಗತಗೊಳಿಸುವಲ್ಲಿ ಕರ್ನಾಟಕವು ಕಾರ್ಯ ಪುವೃತ್ತವಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಮುಖ ಸೂಚಕಗಳಲ್ಲಿ ಒಂದಾದ ಭಾರತ ಕೇಂದ್ರಿತ ಶಿಕ್ಷಣ ಹಾಗೂ ನಮ್ಮ ಶಾಲಾ ಮಕ್ಕಳಲ್ಲಿ ಭಾರತದ ದೇಶದ ಬಗ್ಗೆ ಹಮ್ಮ, ಸಂಸ್ಕೃತಿ ಪರಂಪರೆಯ ಕುರಿತು ಜಾಗೃತಿ ಮೂಡಿಸುವ ಪ್ರಾಮುಖ್ಯತೆಯನ್ನು ನಿರ್ಧಿಪ್ರವಾಗಿ “ಭಾರತದ ಜ್ಞಾನ” (Knowledge of INDIA ) ಎಂದು ಕರೆಯಲಾಗುತ್ತದೆ. ಭಾರತದ ಸ್ವಾತಂತ್ರದ 75 ವರ್ಷಗಳ ಸಂಭ್ರಮಾಚರಣೆಯ “ಆಜಾದಿ ಕಾ ಅಮೃತ್ ಮಹೋತ್ಸವ ” ಕಾರ್ಯಕ್ರಮದಡಿಯಲ್ಲಿ ಶಾಲೆ, ತಾಲೂಕು, ಜಿಲ್ಲೆ, ವಿಭಾಗ ಹಾಗೂ ರಾಜ್ಯ ಮಟ್ಟದಲ್ಲಿ ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಸ್ಪರ್ಧೆಯ ಹಂತಗಳು:
ಶಾಲೆ, ತಾಲ್ಲೂಕು, ಜಿಲ್ಲೆ ವಿಭಾಗ ಹಾಗೂ ರಾಜ್ಯ ಹಂತಗಳಲ್ಲಿ ಈ ಸ್ಪರ್ಧೆಯನ್ನು ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಓದುತ್ತಿರುವ 5 ರಿಂದ 10 ನೇ ತರಗತಿಗಳ ವಿದ್ಯಾರ್ಥಿಗಳಿಗೆ 2 ಹಂತಗಳಲ್ಲಿ ಆಯೋಜಿಸಲಾಗಿದೆ.
- ಕಿರಿಯರ ವಿಭಾಗ /ಜೂನಿಯರ್ ವಿಭಾಗ (5ರಿಂದ 7 ತರಗತಿಯ ವಿದ್ಯಾರ್ಥಿಗಳಿಗಾಗಿ)
- ಹಿರಿಯರ ವಿಭಾಗ /ಸೀನಿಯರ್ ವಿಭಾಗ (8ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗಾಗಿ)