ಸರ್ಕಾರದ ಆದೇಶ
ಸಂಖ್ಯೆ: ಇಪಿ 166 ಎಸ್ಇಎಸ್
2023,
ದಿನಾಂಕ: 18/08/2023
2023-24 ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ
ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರುಗಳ ಹುದ್ದೆಗಳಿಗೆದುರಾಗಿ ಈ ಕೆಳಕಂಡಂತೆ
ಒಟ್ಟು 10,000 ಅತಿಥಿ ಶಿಕ್ಷಕರುಗಳನ್ನು ಹೆಚ್ಚುವರಿಯಾಗಿ ನೇಮಕಾತಿ ಮಾಡಿಕೊಳ್ಳಲು ಸರ್ಕಾರದ
ಮಂಜೂರಾತಿ ನೀಡಿ ಆದೇಶಿಸಿದೆ.
ಕ್ರ.ಸಂ | ಶಾಲೆಗಳ ವಿವರ | ಶಿಕ್ಷಕರಸಂಖ್ಯೆ |
1 | ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ. | 8000 |
2 | ಸರ್ಕಾರಿ ಪ್ರೌಢಶಾಲೆಗಳಲ್ಲಿ. | 2000 |
3 | ಒಟ್ಟು | 10,000 |
ರಾಜ್ಯದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರುಗಳು ಕೌನ್ಸಿಲಿಂಗ್ ಮೂಲಕ
ಹುದ್ದೆಗಳನ್ನು ಆಯ್ಕೆ ಮಾಡಿಕೊಂಡಿದ್ದು, ಕೌನ್ಸಿಲಿಂಗ್ ಮುಖಾಂತರ ಖಾಲಿಯಾಗಿರುವ ಹುದ್ದೆಗಳನ್ನು
ಹಾಗೂ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಆದ್ಯತೆ ಮೇರೆಗೆ ಪೂರ್ಣ
ಪ್ರಮಾಣದಲ್ಲಿ ಅತಿಥಿ ಶಿಕ್ಷಕರಿಂದ ಭರ್ತಿ ಮಾಡಲು ಕ್ರಮವಹಿಸುವುದು.
ಮೇಲ್ಕಂಡಂತೆ 2023-24 ನೇ ಶೈಕ್ಷಣಿಕ ಸಾಲಿಗೆ ನೇಮಕಾತಿ ಮಾಡಿಕೊಳ್ಳಲಾಗುವ ಒಟ್ಟು 10000 ಅತಿಥಿ ಶಿಕ್ಷಕರ ಗೌರವಧನ ಪಾವತಿಗಾಗಿ ಅವಶ್ಯವಿರುವ ಅನುದಾನದ ವಿವರ ಹಾಗೂ ಅತಿಥಿ ಶಿಕ್ಷಕರ ಜಿಲ್ಲಾ /ತಾಲ್ಲೂಕುವಾರು ವಿವರಗಳೊಂದಿಗೆಪ್ರಸ್ತಾವನೆಯನ್ನು ಸಲ್ಲಿಸುವಂತೆ ಸೂಚಿಸಿದೆ.