ಡೆಂಗ್ಯೂ ಪ್ರಕರಣ ತಡೆಗಟ್ಟಲು ಯೂಟ್ಯೂಬ್ ಆಧಾರಿತ ತರಬೇತಿ

WhatsApp Group Join Now
Telegram Group Join Now

ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಗ್ರಾಮ ಪಂಚಾಯತಿ ಕಾರ್ಯಪಡೆ (GPTF) ಸದಸ್ಯರಿಗೆ ಯೂಟ್ಯೂಬ್ ಆಧಾರಿತ ತರಬೇತಿಯನ್ನು ದಿನಾಂಕ 16/07/2024ರಂದು ಪೂರ್ವಾಹ್ನ 11.00 ಗಂಟೆಯಿಂದ ಅಪರಾಹ್ನ 1.00 ಗಂಟೆಯವರೆಗೆ ಆಯೋಜಿಸಲಾಗಿದೆ.
ಈ ತರಬೇತಿಯನ್ನು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ನಿರ್ದೇಶನದ ಮೇರೆಗೆ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಮೈಸೂರಿನಿಂದ ಹಮ್ಮಿಕೊಳ್ಳಲಾಗಿದೆ. ಸದರಿ ಸಭೆಗೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಗಳ ಗ್ರಾಮ ಪಂಚಾಯತಿ ಕಾರ್ಯಪಡೆಯ ಸದಸ್ಯರು, ಗ್ರಾಮ ಪಂಚಾಯತಿ ಅಧ್ಯಕ್ಷರು , ಉಪಾಧ್ಯಕ್ಷರು, ಸದಸ್ಯರು ಮತ್ತು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಶಾಲೆಗಳ ಮುಖ್ಯೋಪಾಧ್ಯಾಯರು ಹೀಗೆ ಎಲ್ಲಾ ಸದಸ್ಯರು ತಪ್ಪದೆ ಹಾಜರಾಗುವಂತೆ ಕೋರಿದೆ.

WhatsApp Group Join Now
Telegram Group Join Now
Sharing Is Caring:

Leave a Comment