ಮುಖ್ಯ ವೇತನ ಶ್ರೇಣಿ ಮತ್ತು ಸ್ಥಾಯಿ ವೇತನ ಶ್ರೇಣಿಗಳ ಪರಿಷ್ಕರಣೆ ಬಗ್ಗೆ 7ನೇ ರಾಜ್ಯವೇತನ ಆಯೋಗ ಶಿಫಾರಸ್ಸುಗಳನ್ನು ಸರ್ಕಾರವು ಅಂಗೀಕರಿಸಿರುತ್ತದೆ. ಅದರಂತೆ ಏಳನೇ ರಾಜ್ಯವೇತನ ಆಯೋಗವು ಶಿಫಾರಸ್ಸು ಮಾಡಿರುವ ಮುಖ್ಯ ವೇತನ ಶ್ರೇಣಿ ಮತ್ತು ಪರಿಷ್ಕೃತ 25 ಸ್ಥಾಯಿ ವೇತನ ಶ್ರೇಣಿ ಗಳನ್ನು ದಿನಾಂಕ 1.7.2022 ರಿಂದ ಜಾರಿಗೆ ಬರುವಂತೆ ಸರ್ಕಾರವು ಅನುಷ್ಠಾನಗೊಳಿಸಿರುತ್ತದೆ.
ಪರಿಷ್ಕೃತ ವೇತನ ಶ್ರೇಣಿಗಳ ಅನುಷ್ಠಾನದ ಆರ್ಥಿಕ ಸೌಲಭ್ಯವು ಒಂದನೇ ಆಗಸ್ಟ್ 2024 ರಿಂದ ಪ್ರಾಪ್ತವಾಗತಕ್ಕದ್ದು ಎಂದು ಸರಕಾರವು ಆದೇಶದಲ್ಲಿ ತಿಳಿಸಿದೆ. ಪಿಂಚಣಿ ಹಾಗೂ ಪಿಂಚಣಿ ಸೌಲಭ್ಯಗಳ ಪರಿಷ್ಕರಣೆ, ನಿವೃತ್ತಿ ವೇತನ, ಕುಟುಂಬದ ನಿವೃತ್ತಿ ವೇತನ ಮನೆ ಬಾಡಿಗೆ ಭತ್ಯೆ, ನಗರ ಪರಿಹಾರ ಭತ್ಯೆ, ವೈದ್ಯಕೀಯ ಭತ್ಯೆ, ನೌಕರರ ಸಾಮೂಹಿಕ ವಿಮಾ ಯೋಜನೆಗೆ ನೌಕರರ ವಂತಿಗೆ ಹೆಚ್ಚಳ ಕುರಿತಂತೆ ರಾಜ್ಯವೇತನ ಆಯೋಗದ ಶಿಫಾರಸ್ಸುಗಳನ್ನು ಸರಕಾರವು ಅಂಗೀಕರಿಸಿದೆ. ಪ್ರಭಾರ ಭತ್ಯೆ ಮಂಜೂರಾತಿಯ ಪ್ರಸ್ತುತ ದರಗಳು ಪರಿಷ್ಕೃತ ವೇತನ ಶ್ರೇಣಿಯಲ್ಲಿ ಯಾವುದೇ ಬದಲಾವಣೆ ಇಲ್ಲದೆ ಮುಂದುವರೆಯುತ್ತದೆ.
ಅನ್ವಯಿಸುವ ಬದಲಾವಣೆಯೊಂದಿಗೆ ಎಲ್ಲಾ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳ ನೌಕರರು, ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೂ ಸಹ ವಿಸ್ತರಿಸಿ ಸರಕಾರವು ಆದೇಶ ಹೊರಡಿಸಿರುತ್ತದೆ. ವೇತನ ಶ್ರೇಣಿಯ ಪರಿಷ್ಕರಣೆಯ ಕಾರಣದಿಂದಾಗಿ ಉಂಟಾಗುವ ವೇತನ ಮತ್ತು ಭತ್ಯೆಗಳ ಹೆಚ್ಚಳವನ್ನು ದಿನಾಂಕ 01/08/2024ರಿಂದ ನಗದಾಗಿ ಪಾವತಿ ಮಾಡತಕ್ಕದ್ದು. ದಿನಾಂಕ 01/07/2022 ರಿಂದ 31/07/2024 ರ ಅವಧಿಯಲ್ಲಿ ಸೇವೆಯಿಂದ ನಿವೃತ್ತರಾದ ಅಥವಾ ಸೇವೆಯಲ್ಲಿರುವಾಗಲೇ ಮರಣ ಹೊಂದಿದ ಅಥವಾ ಸೇವೆಯಲ್ಲಿರುವುದು ಸಮಾಪ್ತಿಗೊಂಡ ಸರ್ಕಾರಿ ನೌಕರರ ಪ್ರಕರಣಗಳಲ್ಲಿ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ನಿಗದಿಪಡಿಸಿದ ಕಾಲ್ಪನಿಕ ವೇತನವನ್ನು ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಲೆಕ್ಕ ಹಾಕುವ ಉದ್ದೇಶಗಳಿಗಾಗಿ ಪರಿಗಣಿಸತಕ್ಕದ್ದು.
ಏಳನೇ ರಾಜ್ಯವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವ ಕುರಿತು,
By kspstadk.com
Updated On: