ಸರಕಾರಿ ನೌಕರರು ಕಡ್ಡಾಯವಾಗಿ ಕೆಂಪು -ಹಳದಿ ಬಣ್ಣದ ಟ್ಯಾಗ್ ಇರುವ ಗುರುತಿನ ಚೀಟಿ ಹಾಕಿಕೊಳ್ಳುವ ಕುರಿತು ಮಾಹಿತಿ.

WhatsApp Group Join Now
Telegram Group Join Now

ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷ ಪೂರೈಸಿರುವ ಸುಸಂದರ್ಭದಲ್ಲಿ “ಹೆಸರಾಯಿತು ಕನ್ನಡ ಉಸಿರಾಗಲಿ ಕನ್ನಡ” ಅಭಿಯಾನದಡಿ ಸರ್ಕಾರಿ ನೌಕರರು ಕೆಂಪು – ಹಳದಿ ಬಣ್ಣಗಳನ್ನು ಒಳಗೊಂಡಿರುವ ಕೊರಳು ದಾರ (ಟ್ಯಾಗ್ ಹೊಂದಿದ) ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ಸರಕಾರವು ನಿರ್ಣಯಿಸಿದೆ.
ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ ,ಮಂಡಳಿ ನಿರ್ದೇಶನಾಲಯ,ಆಯುಕ್ತಾಲಯ ಇತ್ಯಾದಿ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ತಮ್ಮ ಇಲಾಖೆಯ/ಸಂಸ್ಥೆಯ ಗುರುತಿನ ಚೀಟಿಯನ್ನು ಧರಿಸಲು ಅನುವಾಗುವಂತೆ ಹಳದಿ ಮತ್ತು ಕೆಂಪು ಬಣ್ಣದ ಕೊರಳು ದಾರವನ್ನು ಒದಗಿಸಲು ತಮ್ಮ ಸಂಸ್ಥೆ/ಇಲಾಖೆಯ ಸಕ್ಷಮ ಪ್ರಾಧಿಕಾರಗಳು ಕೂಡಲೇ ನಿಯಮಾನುಸಾರ ಕ್ರಮವಹಿಸುವಂತೆ ತಿಳಿಸಿದೆ. ನೂತನ ಕೊರಳು ದಾರದ ವಿನ್ಯಾಸವನ್ನು ನೀಡಿರುವ ಆನ್ಲೈನ್ ವಿಳಾಸದಿಂದ ಡೌನ್ಲೋಡ್ ಮಾಡಿಕೊಳ್ಳ ಬಹುದು.

WhatsApp Group Join Now
Telegram Group Join Now
Sharing Is Caring:

Leave a Comment