ಶಾಂತಿ ಹಾಗೂ ಸಹೋದರತ್ವವನ್ನು ಸಮಾಜದಲ್ಲಿ ಸಾರುವ ಹಿನ್ನಲೆಯಲ್ಲಿ, ವೈಜ್ಞಾನಿಕ ಮನೋಭಾವನೆಯನ್ನು ನಾಗರಿಕರಲ್ಲಿ ಬೆಳೆಸುವುದು ಬಹುಮುಖ್ಯ ಕಾರ್ಯವಾಗಿದೆ. ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವವನ್ನು ಬೆಳೆಸಿಕೊಳ್ಳುವುದು ನಮ್ಮ ಭಾರತೀಯ ಸಂವಿಧಾನದ ಮೂಲಭೂತ ಕರ್ತವ್ಯಗಳಲ್ಲಿ ಒಂದಾಗಿದೆ (ಪರಿಚ್ಛೇದ 51A (h)).

ಈ ನಿಟ್ಟಿನಲ್ಲಿ, ಫೆಬ್ರವರಿ 28ರಂದು ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ಯ ಸಂದರ್ಭದಲ್ಲಿ, ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಏಕ ಕಾಲದಲ್ಲಿ ವೈಜ್ಞಾನಿಕ ಮನೋಭಾವನೆ ಹಾಗೂ ಮಾನವೀಯ ಮೌಲ್ಯಗಳನ್ನು, ಮನೋಭಾವಗಳನ್ನು ಸ್ರಷ್ಟಿಸಲು, ಮೂಲಭೂತ ಕರ್ತವ್ಯಗಳನ್ನು ಪಾಲಿಸುವ ಮೂಲಕ ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು’ ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರಿಸಲಾಗಿದೆ.
ಆದರಿಂದ, ಎಲ್ಲಾ ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಲು ತಿಳಿಸಲಾಗಿದೆ
ಪ್ರತೀಜ್ಞಾ ವಿಧಿಯನ್ನು, ದಿನಾಂಕ: 28.02.2025, ಶುಕ್ರವಾರದಂದು ಪ್ರಾತಃಕಾಲ 10.30 ಕ್ಕೆ.