ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಣೆಗೆ ದಿನಾಂಕ ನಿಗದಿಪಡಿಸಿದೆ.
ಏಪ್ರಿಲ್ 9, 2026ರಂದು ಮಧ್ಯಾಹ್ನ 3:00 ಗಂಟೆಗೆ ಅಧಿಕೃತವಾಗಿ ಫಲಿತಾಂಶ ಹೊರಬೀಳಲಿದೆ ಎಂದು ಮಂಡಳಿಯು ತಿಳಿಸಿದೆ.
ಫಲಿತಾಂಶ ವೀಕ್ಷಿಸುವುದು ಹೇಗೆ?
ವಿದ್ಯಾರ್ಥಿಗಳು ಈ ಕೆಳಗಿನ ವಿಧಾನಗಳ ಮೂಲಕ ತಮ್ಮ ಅಂಕಪಟ್ಟಿಯನ್ನು ಪಡೆಯಬಹುದು:
ಅಧಿಕೃತ ವೆಬ್‌ಸೈಟ್: https://karresults.nic.in ಲಿಂಕ್ ಮೂಲಕ ಫಲಿತಾಂಶ ನೋಡಬಹುದು.
ಮೊಬೈಲ್ ಆಪ್: ‘KarnatakaOne’ ಮೊಬೈಲ್ ಅಪ್ಲಿಕೇಶನ್‌ನಲ್ಲಿಯೂ ಫಲಿತಾಂಶ ಲಭ್ಯವಿರುತ್ತದೆ.
ನೇರ ಸಂದೇಶ (SMS/WhatsApp): ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗೆ ಮಂಡಳಿಯ ವತಿಯಿಂದ ನೇರವಾಗಿ ಫಲಿತಾಂಶದ ಮಾಹಿತಿಯನ್ನು ಕಳುಹಿಸಲಾಗುತ್ತದೆ.
ಡಿಜಿಲಾಕರ್ (DigiLocker) ಸೌಲಭ್ಯ:
ಈ ವರ್ಷ ವಿಶೇಷವಾಗಿ, ವಿದ್ಯಾರ್ಥಿಗಳ ಡಿಜಿಟಲ್ ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕವೂ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಏಪ್ರಿಲ್ 9ರ ಮಧ್ಯಾಹ್ನ 3:00 ಗಂಟೆಯಿಂದಲೇ https://www.digilocker.gov.in ವೆಬ್‌ಸೈಟ್‌ನಲ್ಲಿ ಅಂಕಪಟ್ಟಿ ಲಭ್ಯವಿರಲಿದೆ.