5 ಮತ್ತು 8 ನೇ ತರಗತಿ ಪರೀಕ್ಷೆಯನ್ನು ಮುಂದೂಡಿರುವ ಕುರಿತು
2022-23ನೇ ಸಾಲಿನಲ್ಲಿ 5 ಮತ್ತು 8 ನೇ ತರಗತಿಯ ವಿದ್ಯಾರ್ಥಿಗಳಿಗೆ
ದಿನಾಂಕ:13.03.2023 ರಿಂದ ನಿಗದಿಪಡಿಸಲಾಗಿದ್ದ ಮೌಲ್ಯಾಂಕನವನ್ನು ಮಾನ್ಯ ಉಚ್ಚ ನ್ಯಾಯಾಲಯದ ಆದೇಶದಂತೆ ಮುಂದೂಡಲಾಗಿದೆ. ನ್ಯಾಯಾಲಯವು ಅನುಮತಿಸಿದಲ್ಲಿ ಈ ಮೌಲ್ಯಾಂಕನವನ್ನು ನಡೆಸುವ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.ಮುಂದುವರೆದು, ಈ ಮೌಲ್ಯಾಂಕನವು ವಿದ್ಯಾರ್ಥಿಗಳ ಕಲಿಕಾ ಮಟ್ಟ ಕಲಿಕಾ ನ್ಯೂನ್ಯತೆಗಳು ಹಾಗೂ ಯಾವ ಹಿನ್ನಡೆಯುಂಟಾಗಿದೆ ಎಂಬುದನ್ನು ತಿಳಿಯುವುದಾಗಿದೆ. ಯಾವುದೇ ವಿದ್ಯಾರ್ಥಿಯನ್ನು ವಿಷಯದಲ್ಲಿ ಅನುತ್ತೀರ್ಣಗೊಳಿಸುವುದು ಈ ಮೌಲ್ಯಾಂಕನದ ಉದ್ದೇಶವಾಗಿರುವುದಿಲ್ಲ.
2022-23ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿನ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿರುವ ಮೌಲ್ಯಾಂಕನವನ್ನು ಮುಂದೂಡಿರುವ ಹಿನ್ನೆಲೆಯಲ್ಲಿ ಸ್ವೀಕರಿಸಲಾಗಿರುವ ಗೌಪ್ಯ ಸಾಮಗ್ರಿಗಳನ್ನು ತಾಲ್ಲೂಕುಗಳ ಭದ್ರತಾ ಕೊಠಡಿಯಲ್ಲಿ ಸಂರಕ್ಷಿಸಲು ತಿಳಿಸಲಾಗಿದೆ
2022-23ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5 ನೇ ತರಗತಿ ವಿದ್ಯಾರ್ಥಿಗಳಿಗೆ ದಿನಾಂಕ:15.03.2023 ರಿಂದ 18.03.2023 ರವರೆಗೆ ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ದಿನಾಂಕ: 13.03.2023 ರಿಂದ 18.03.2023 ರವರೆಗೆ ಮೌಲ್ಯಾಂಕನವನ್ನು (SA-2) ನಡೆಸುವಂತೆ ಉಲ್ಲೇಖ (2) ರಲ್ಲಿ ತಿಳಿಸಲಾಗಿತ್ತು. ಆದರೆ ಉಲ್ಲೇಖ(3) ರನ್ವಯ ಮಾನ್ಯ ಉಚ್ಛ ನ್ಯಾಯಾಲಯದ ಆದೇಶದ ಮೇರೆಗೆ ಸದರಿ ಮೌಲ್ಯಾಂಕನವನ್ನು ಮುಂದೂಡಲಾಗಿದೆ.ಮುಂದುವರೆದು, ಸದರಿ ಮೌಲ್ಯಾಂಕನಕ್ಕೆ ಸಂಬಂಧಿಸಿದಂತೆ ಪ್ರಶೋತ್ತರ ಪತ್ರಿಕೆಗಳು ಈಗಾಗಲೇ ಬ್ಲಾಕ್ ಹಂತಕ್ಕೆ ಸರಬರಾಜಾಗುತ್ತಿದ್ದು, ಗೌಪ್ಯ ಸಾಮಗ್ರಿಗಳನ್ನು ಸಂಬಂಧಿಸಿದ ಕ್ಷೇತ್ರಶಿಕ್ಷಣಾಧಿಕಾರಿಗಳು ಸ್ವೀಕರಿಸಿ, ಮುಂದಿನ ಆದೇಶದವರೆಗೆ ಭದ್ರತಾ ಕೊಠಡಿಯಲ್ಲಿ ಸುರಕ್ಷಿತವಾಗಿ ಸಂರಕ್ಷಿಸಲು ಈ ಮೂಲಕ ತಿಳಿಸಿದೆ. ಸುರಕ್ಷಿತವಾಗಿ ಸಂರಕ್ಷಿಸಿರುವ ಬಗ್ಗೆ ಸಂಬಂಧಿಸಿದ ಜಿಲ್ಲಾ ಉಪನಿರ್ದೇಶಕರು (ಆಡಳಿತ ಮತ್ತು ಅಭಿವೃದ್ಧಿ) ರವರು ಪರಿಶೀಲಿಸಿ ಖಾತ್ರಿಪಡಿಸಿಕೊಂಡು ಈ ಕಛೇರಿಗೆ ಮಾಹಿತಿ ನೀಡಲು ತಿಳಿಸಿರುತ್ತಾರೆ.