ಆದರ್ಶ ವಿದ್ಯಾಲಯ ಪ್ರವೇಶಾತಿ ಪ್ರಾರಂಭ ಸಂಪೂರ್ಣ ವಿವರ ಇಲ್ಲಿದೆ

2023-24ನೇ ಸಾಲಿನ ಪ್ರತಿ ಆದರ್ಶ ವಿದ್ಯಾಲಯದ 6ನೇ ತರಗತಿಗೆ 120 ವಿದ್ಯಾರ್ಥಿಗಳನ್ನುದಾಖಲಾತಿ ಮಾಡಿಕೊಳ್ಳಲು ಆಯ್ಕೆ ಪರೀಕ್ಷೆ ನಡೆಸಬೇಕಾಗಿರುತ್ತದೆ. ಈ ಪ್ರವೇಶ ಪರೀಕ್ಷೆಯ ಪ್ರಕ್ರಿಯೆಯನ್ನುಸಮಗ್ರ ಶಿಕ್ಷಣ-ಕರ್ನಾಟಕ ಹಾಗೂ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣಪರಿಷತ್ತಿನ ವತಿಯಿಂದ ಜಂಟಿಯಾಗಿ ನಡೆಸಲು ತೀರ್ಮಾನಿಸಲಾಗಿದ್ದು, ಆಯ್ಕೆ ಪರೀಕ್ಷೆಯನ್ನು ನಡೆಸಲು ಜಿಲ್ಲಾಉಪನಿರ್ದೇಶಕರು(ಆಡಳಿತ), ಉಪನಿರ್ದೇಶಕರು ಅಭಿವೃದ್ಧಿ), ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಆದರ್ಶವಿದ್ಯಾಲಯಗಳ ಮುಖ್ಯ ಶಿಕ್ಷಕರು ಮತ್ತು ಐದನೆಯ ತರಗತಿಗಳು ನಡೆಯುತ್ತಿರುವ ಎಲ್ಲಾ ಶಾಲೆಗಳಮುಖ್ಯೋಪಾಧ್ಯಾಯರು ಅಗತ್ಯ ಕ್ರಮವಹಿಸಬೇಕಾಗುತ್ತದೆ.

ಪ್ರಸಕ್ತ ಸಾಲಿನ ಪರೀಕ್ಷಾ ನೊಂದಣಿ ಬಗ್ಗೆ ಸ್ಥಳೀಯವಾಗಿ ಸಾಕಷ್ಟು ಪ್ರಚಾರ ನೀಡಲು ತಿಳಿಸಿದೆ ಹಾಗೂ ಜನಪ್ರತಿನಿದಿಗಳಿಗೆ ಮಾಹಿತಿ ನೀಡಲು ಕ್ರಮ ಕೈಗೊಳ್ಳುವುದು, ದಾಖಲಾತಿ ಪ್ರಕ್ರಿಯೆಯನ್ನು online ಮೂಲಕ ನಡೆಸುತ್ತಿರುವುದರಿಂದ, ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಮಾರ್ಗಸೂಚಿ ಸುತ್ತೋಲೆಯನ್ನು ಅತ್ಯಂತ ಸೂಕ್ಷ್ಮವಾಗಿ ಅವಲೋಕಿಸಿ, ಸೂಚನೆಗಳನ್ನು ಅನುಸರಿಸಿ ಕಾರ್ಯನಿರ್ವಹಿಸುವುದರೊಂದಿಗೆ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ತಿಳಿಸಿದೆ.

ಅರ್ಜಿ ಸಲ್ಲಿಸಲು ಅರ್ಹತೆ:

> 2022-23ನೇ ಸಾಲಿನಲ್ಲಿ ಆಯಾ ತಾಲ್ಲೂಕಿನ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿಐದನೆಯ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅದೇ ತಾಲ್ಲೂಕಿನಲ್ಲಿ ಅರ್ಜಿಯನ್ನುಸಲ್ಲಿಸಬಹುದಾಗಿದೆ.

> ಆಯಾ ತಾಲ್ಲೂಕಿನ ಖಾಯಂ ನಿವಾಸಿಗಳ ಮಕ್ಕಳು ಬೇರೆ ತಾಲ್ಲೂಕು/ಜಿಲ್ಲೆ ರಾಜ್ಯಗಳಲ್ಲಿ ವಿದ್ಯಾಭ್ಯಾಸಮಾಡುತ್ತಿದ್ದರೂ ಸಹ 6ನೇ ತರಗತಿಗೆ ಮೂಲ ತಾಲ್ಲೂಕಿನಲ್ಲಿ ವ್ಯಾಸಂಗ ಮಾಡಲು ಇಚ್ಛಿಸಿದಲ್ಲಿ ಅರ್ಜಿಸಲ್ಲಿಸಬಹುದಾಗಿದೆ

ಪರೀಕ್ಷೆಯ ವಿವರಗಳು:

> ಆಯ್ಕೆ ಪರೀಕ್ಷೆಗೆ 5ನೇ ತರಗತಿಯ ಪಠ್ಯ ಪುಸ್ತಕ/ ಕಲಿಕಾ (16%),ಸಾಮಾನ್ಯಇವುಗಳನ್ನು ಚೇತರಿಕೆ ಕಲಿಕಾಂಶಗಳನ್ನು ಆಧರಿಸಿ ಕನ್ನಡ ಆಂಗ್ಲಭಾಷೆ (16%), ಗಣಿತ(16%), ಪರಿಸರ ಅಧ್ಯಯನ(16), ಸಮಾಜ ವಿಜ್ಞಾನ(16%),ಜ್ಞಾನ (ಜನರಲ್ಸಾಮಾನ್ಯ ಬೌದ್ಧಿಕ ಸಾಮರ್ಥ್ಯ (10%)ಪರಿಗಣಿಸಲಾಗುವುದು,ನಾಲೆಡ್) (10) ಮತ್ತುಪ್ರಶ್ನೆ ಪತ್ರಿಕೆಯು ವಸ್ತುನಿಷ್ಟ (objective type) ಪ್ರಶ್ನೆಗಳನ್ನುಹೊಂದಿದ್ದು, ಆಂಗ್ಲ ಮತ್ತು ಕನ್ನಡ ಮಾಧ್ಯಮಗಳಲ್ಲಿರುತ್ತವೆ. ಪರೀಕ್ಷೆಯಲ್ಲಿ ಒಂದು ಪ್ರಶ್ನೆಗೆ ತಲಾ 01ಅಂಕದಂತೆ ಇದ್ದು 100 ಪ್ರಶ್ನೆಗಳಿರುತ್ತವೆ.ಪರೀಕ್ಷಾ ದಿನಾಂಕ: 26-03-2023.

> ಪರೀಕ್ಷೆಯ ಅವಧಿ 2 ಗಂಟೆ 30 ನಿಮಿಷಗಳು, ವಿದ್ಯಾರ್ಥಿಗಳು ಪರೀಕ್ಷೆ ಪ್ರಾರಂಭವಾಗುವ 30 ನಿಮಿಷಗಳುಮುಂಚಿತವಾಗಿ ಪರೀಕ್ಷಾ ಕೇಂದ್ರದಲ್ಲಿನ ಕೊಠಡಿಗಳಲ್ಲಿ ಹಾಜರಿರಬೇಕು

ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು/ಪೋಷಕರಿಗೆ ಸೂಚನೆಗಳು:

* ದಿನಾಂಕ 18/02/2023 ರಿಂದ 04/03/2023 ರವರೆಗೂ www.schooleducation.kar.nic.in ಮತ್ತು www.vidyavahini.karnataka.gov.in ವೆಬ್ ಪುಟಗಳ ಮೂಲಕ ಪೋಷಕರು onlineಅರ್ಜಿ ಸಲ್ಲಿಸಬಹುದಾಗಿದೆ.

* ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆ), ಉಪನಿರ್ದೇಶಕರು (ಅಭಿವೃದ್ಧಿ), ಕ್ಷೇತ್ರಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಛೇರಿ ಹಾಗೂ ಆದರ್ಶವಿದ್ಯಾಲಯಗಳಲ್ಲಿ ಪೋಷಕರು ಈ ಸೌಲಭ್ಯವನ್ನು ಬಳಸಿಕೊಂಡು ಉಚಿತವಾಗಿ ಅರ್ಜಿಗಳನ್ನು ಆನ್‌ಲೈನ್ಮುಖಾಂತರ ಸಲ್ಲಿಸಬಹುದು.

* ಆಯಾ ತಾಲ್ಲೂಕಿನ ಖಾಯಂ ನಿವಾಸಿಗಳ ಮಕ್ಕಳು ಹೊರರಾಜ್ಯ/ಜಿಲ್ಲೆ/ತಾಲ್ಲೂಕುಗಳಲ್ಲಿ ವ್ಯಾಸಂಗಮಾಡುತ್ತಿದ್ದಲ್ಲಿ, ವ್ಯಾಸಂಗ ಪ್ರಮಾಣಪತ್ರವನ್ನು ಪಡೆದು online ಮೂಲಕ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಈ ವ್ಯಾಸಂಗ ಪ್ರಮಾಣ ಪತ್ರ ಅಳವಡಿಸುವುದನ್ನು (upload) ಕಡ್ಡಾಯಗೊಳಿಸಲಾಗಿದೆ.ಇದಕ್ಕೆ ಪೂರಕವಾಗಿ ವಿದ್ಯಾರ್ಥಿಯು ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದು ಶಾಲೆಗೆದಾಖಲಾಗುವ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರದಿಂದ ಪಡೆದಿರುವ ವಾಸಸ್ಥಳ ದೃಢೀಕರಣ ಪ್ರಮಾಣಪತ್ರವನ್ನು ಸಲ್ಲಿಸಬೇಕು.

* ಮೀಸಲಾತಿಯನ್ನು ಪಡೆಯುವ ಮಕ್ಕಳು ಜಾತಿ ಪ್ರಮಾಣಪತ್ರದ ಆರ್.ಡಿ ಸಂಖ್ಯೆಯನ್ನು ಅರ್ಜಿ ಸಲ್ಲಿಸುವಸಂದರ್ಭದಲ್ಲಿ ನಮೂದಿಸಬೇಕು. ಇದಕ್ಕೆ ಪೂರಕವಾಗಿ ವಿದ್ಯಾರ್ಥಿಯು ಪ್ರವೇಶ ಪರೀಕ್ಷೆಯಲ್ಲಿಅರ್ಹತೆಯನ್ನು ಪಡೆದು ಶಾಲೆಗೆ ದಾಖಲಾಗುವ ಸಂದರ್ಭದಲ್ಲಿ ಪ್ರಮಾಣಪತ್ರದ ಮೂಲ ಪ್ರತಿಯನ್ನುಸಲ್ಲಿಸಬೇಕು.

* ವಿಶೇಷ ಚೇತನ ಮಕ್ಕಳು ಮೀಸಲಾತಿಯನ್ನು ಪಡೆಯಲು ಸಕ್ಷಮ ಪ್ರಾಧಿಕಾರಗಳಿಂದ ಪಡೆದಿರುವಪ್ರಮಾಣಪತ್ರವನ್ನು online ಮೂಲಕ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಳವಡಿಸುವುದನ್ನು (upload)ಕಡ್ಡಾಯಗೊಳಿಸಲಾಗಿದೆ. ವಿದ್ಯಾರ್ಥಿಯು ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದು ಶಾಲೆಗೆದಾಖಲಾಗುವ ಸಂದರ್ಭದಲ್ಲಿ ಪ್ರಮಾಣಪತ್ರದ ಮೂಲ ಪ್ರತಿಯನ್ನು ಸಲ್ಲಿಸಬೇಕು.

* ಅರ್ಜಿಯನ್ನು ಸಲ್ಲಿಸಲು ಅಗತ್ಯವಾದ ಸೂಚನೆಗಳನ್ನು www.vidyavahini.karnataka.gov.in ರಲ್ಲಿನೀಡಲಾಗಿದೆ.

Sharing Is Caring:

Leave a Comment