ಜನವರಿ 26ರ ಗಣರಾಜ್ಯ ದಿನದೊಂದಿಗೆ ಆಗಸ್ಟ್ 15ರ ಸ್ವಾತಂತ್ರ್ಯದಿನಾಚರಣೆಯ ಸಂದರ್ಭದಲ್ಲಿ ಕೂಡ ರಾಜ್ಯದ ಎಲ್ಲಾ ಸರಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜುಗಳು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನ ಪಿತಾಮಹ ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ಕರ್ನಾಟಕ ಸರ್ಕಾರದ ಸಚಿವಾಲಯದಿಂದ ಹೊರಡಿಸಿದ ಆದೇಶದಲ್ಲಿ ಸೂಚಿಸಿದೆ.
ಹಾಗೆಯೇ ನವೆಂಬರ್ 26ರ ಸಂವಿಧಾನ ದಿನಾಚರಣೆ ಸಂದರ್ಭದಲ್ಲಿ ಮೇಲ್ಕಂಡ ಎಲ್ಲಾ ಸಂಸ್ಥೆಗಳು, ಶಾಲಾ ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನದ ಪಿತಾಮಹ ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರ ಕಡ್ಡಾಯವಾಗಿ ಇಡುವಂತೆ ಕರ್ನಾಟಕ ಸರ್ಕಾರದ ಅಧೀನ ಕಾರ್ಯದರ್ಶಿಯವರು ತಮ್ಮ ಸುತ್ತೋಲೆಯಲ್ಲಿ ತಿಳಿಸಿದ್ದಾರೆ