ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು 2022 ರಲ್ಲಿ ಜೂನ್ 12ನೇ ದಿನವನ್ನು ವಿಶ್ವ ಬಾಲಕಾರ್ಮಿಕ ವಿರೋಧಿ ದಿನ ಎಂದು ಘೋಷಣೆ ಮಾಡಿರುತ್ತದೆ. ಅಂದಿನಿಂದ ಪ್ರತಿ ವರ್ಷ ಜೂನ್ 12ರಂದು ವಿಶ್ವ ಬಾಲಕಾರ್ಮಿಕ ವಿರೋಧಿ ದಿನವನ್ನು ಆಚರಿಸಲಾಗುತ್ತಿದ್ದು, ವಿಶ್ವಸಂಸ್ಥೆಯ ಎಲ್ಲಾ ಮಿತ್ರ ರಾಷ್ಟ್ರಗಳು ಪ್ರತಿವರ್ಷ ಜೂನ್ 12ರಂದು “ವಿಶ್ವ ಬಾಲಕಾರ್ಮಿಕ ವಿರೋಧಿ ದಿನ”ವನ್ನಾಗಿ ಆಚರಿಸುತ್ತಾ ಬರುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರದ ಎಲ್ಲಾ ಇಲಾಖೆ/ ನಿಗಮ /ಮಂಡಳಿ /ಪ್ರಾಧಿಕಾರ /ಸಂಸ್ಥೆ/ ನಿರ್ದೇಶನಾಲಯ ಶಾಲಾ/ ಕಾಲೇಜು ಕಚೇರಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರುಗಳಿಗೆ 12ನೇ ಜೂನ್ 2025 ರಂದು “ಬಾಲ ಹಾಗೂ ಕಿಶೋರ ಕಾರ್ಮಿಕರಿಂದ ದುಡಿಮೆಯನ್ನು ಬಯಸುವುದಿಲ್ಲ”ವೆಂಬ ಪ್ರಮಾಣವಚನ ವನ್ನು ಬೋಧಿಸಲು ರಾಜ್ಯದ ಎಲ್ಲಾ ಇಲಾಖೆಯ ಮುಖ್ಯಸ್ಥರುಗಳಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಆದೇಶದಲ್ಲಿ ತಿಳಿಸಿರುತ್ತಾರೆ.
ಪ್ರತಿಜ್ಞೆ

