2024-25 ನೇ ಸಾಲಿನ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 5 ಸೆಪ್ಟೆಂಬರ್ 2024 ರಂದು ನೀಡಲಾಗುವ ಜಿಲ್ಲಾ ” ಅತ್ಯುತ್ತಮ ಶಿಕ್ಷಕ ” ಪ್ರಶಸ್ತಿ ಬಗ್ಗೆ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ.
ವಾರ್ಷಿಕ ವೇಳಾಪಟ್ಟಿ
- ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ತಾಲೂಕು ಹಂತದ ಅತ್ಯುತ್ತಮ ಶಿಕ್ಷಕರನ್ನು ಗುರುತಿಸಿ ಅರ್ಹರಾದ ಶಿಕ್ಷಕರ ಪಟ್ಟಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಜಿಲ್ಲಾ ಒಬ್ಬ ನಿರ್ದೇಶಕರುಗಳಿಗೆ ಕಳುಹಿಸಿ ಕೊಡುವ ಕೊನೆಯ ದಿನಾಂಕ 7.8.2024.
- ತಾಲೂಕು ಹಂತದಿಂದ ಬಂದ ಪ್ರಸ್ತಾವನೆಗಳನ್ನು ಜಿಲ್ಲಾ ಹಂತದ ಆಯ್ಕೆ ಸಮಿತಿ ಪರಿಶೀಲಿಸಿ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡುವುದು.
- ಆಯ್ಕೆಯಾದ ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಪಟ್ಟಿ ಸಂಬಂಧಿಸಿದ ಉಪ ನಿರ್ದೇಶಕರುಗಳು ನಿಧಿಯ ಕಚೇರಿಗೆ ಕಳುಹಿಸಿಕೊಡಲು ಕೊನೆಯ ದಿನಾಂಕ 2.09.2024.
- ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಶಿಕ್ಷಕರ ಆಯ್ಕೆ ಕಾರ್ಯವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ದಿನಾಂಕ 5.9.2024 ರಂದು ಜಿಲ್ಲಾ ಹಂತದಲ್ಲಿ ನಡೆಯುವ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪಡೆದಂತಹ ಶಿಕ್ಷಕರನ್ನು ಗೌರವಿಸಲು ತಿಳಿಸಿದೆ.
- ಆಯ್ಕೆ ಪ್ರಕ್ರಿಯೆಯು ಕಾಲಮಿತಿ ಪ್ರಕರಣವಾಗಿದ್ದು ವೇಳಾಪಟ್ಟಿಯಂತೆ ಮಾರ್ಗಸೂಚಿಯನ್ನು ಅನುಸರಿಸಿ ಅರ್ಹ ಮತ್ತು ಉತ್ತಮ ಶಿಕ್ಷಕರನ್ನು ಆಯ್ಕೆ ಮಾಡಿ ಅವರಿಗೆ ಜಿಲ್ಲಾ ಹಂತದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲು ಸೂಚಿಸಿದೆ.
- ತಾಲೂಕು ಮಟ್ಟದ ಆಯ್ಕೆ ಸಮಿತಿ ಶಿಫಾರಸು ಮಾಡಿರುವ ಶಿಕ್ಷಕರ ಪ್ರಸ್ತಾವನೆಯನ್ನು ಜಿಲ್ಲಾ ಆಯ್ಕೆ ಸಮಿತಿ ಪರಿಶೀಲಿಸಿ, ಶಿಕ್ಷಕರ ಶೈಕ್ಷಣಿಕ ಹಾಗೂ ಇತರೆ ಸಾಧನೆಗಳನ್ನು ನಿಖರವಾಗಿ ಮೌಲ್ಯಮಾಪನ ಮಾಡಿ ಪ್ರಶಸ್ತಿಗೆ ಅರ್ಹರಾದಂತಹ ಶಿಕ್ಷಕರನ್ನು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡುವುದು.
- ಒಂದು ತಾಲೂಕಿನಿಂದ ಕನಿಷ್ಠ ಆರು ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ನಾಲ್ಕು ಪ್ರೌಢಶಾಲಾ ಶಿಕ್ಷಕರನ್ನು ಜಿಲ್ಲಾ ಹಂತದ ಪ್ರಶಸ್ತಿಗೆ ಶಿಫಾರಸ್ಸು ಮಾಡಬೇಕು. ಇದರಲ್ಲಿ ಶೇಕಡ 50 ಮಹಿಳಾ ಶಿಕ್ಷಕರನ್ನು ಒಳಗೊಂಡಿರಬೇಕು
- ಪ್ರಶಸ್ತಿಗೆ ಅರ್ಹರಾದಂತಹ ಶಿಕ್ಷಕರ ಒಟ್ಟಾರೆ ಸೇವೆಯಲ್ಲಿ ತರಗತಿಯಲ್ಲಿ ಬೋಧಕರಾಗಿ ಕನಿಷ್ಠ ಹತ್ತು ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿರಬೇಕು. ಅದರಲ್ಲಿ ಗ್ರಾಮೀಣ ಶಾಲೆಗಳಲ್ಲಿ ಕನಿಷ್ಠ ಐದು ವರ್ಷ ಸೇವೆ ಸಲ್ಲಿಸಿರಬೇಕು.
- ಪ್ರಶಸ್ತಿಗೆ ಆಯ್ಕೆ ಮಾಡುವಾಗ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ರಲ್ಲಿ ತರಗತಿಗೆ ಬೋಧನೆ ಮಾಡುವ ಹಾಗೂ ಶಾಲೆಗೆ ಪೂರಕವಾದ ಕಾರ್ಯಗಳಲ್ಲಿ ತೊಡಗಿಸಿಕೊಂಡ ಶಿಕ್ಷಕರನ್ನು ಮಾತ್ರ ಪರಿಗಣಿಸತಕ್ಕದ್ದು.
- ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡುವಾಗ ಮಹಿಳಾ ಅಭ್ಯರ್ಥಿಗಳಿಗೆ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಹೆಚ್ಚು ಸೇವೆ ಸಲ್ಲಿಸಿದ ಶಿಕ್ಷಕರಿಗೆ ಆದ್ಯತೆ ನೀಡುವುದು.
- ಹಿಂದಿನ ಸಾಲುಗಳಲ್ಲಿ ಪ್ರಶಸ್ತಿ ಪಡೆದ ಶಿಕ್ಷಕರನ್ನು ಮತ್ತೆ ಮರು ಆಯ್ಕೆ ಮಾಡಬಾರದು.
- ಆಯ್ಕೆ ಮಾಡಿರುವ ಶಿಕ್ಷಕರು ಸಮಾಜದ ಮತ್ತು ಇಲಾಖೆಯ ಗೌರವಗಳಿಗೆ ಪಾತ್ರರಾಗಿರಬೇಕು.
- ಶಿಕ್ಷಕರ ಆಯ್ಕೆ ಸಂಪೂರ್ಣವಾಗಿ ಮೌಲ್ಯಾಧಾರಿತವಾಗಿರಬೇಕು.
- ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕರು ಸಚ್ಚಾರಿತ್ರ್ಯವನ್ನು ಹೊಂದಿರಬೇಕು. ಅವರ ಬಗ್ಗೆ ಯಾವುದೇ ದೂರ ವಿಚಾರಣೆ ಹಾಗೂ ನ್ಯಾಯಾಲಯದಲ್ಲಿ ಪ್ರಕರಣಗಳು ಇರಬಾರದು.
- ತಾಲೂಕು ಆಯ್ಕೆ ಸಮಿತಿಯವರು ಅರ್ಹರಾದಂತಹ ಶಿಕ್ಷಕರ ಕಾರ್ಯಕ್ಷೇತ್ರಕ್ಕೆ ಭೇಟಿ, ಮಾಹಿತಿ ಸಂಗ್ರಹಿಸುವುದು.
- ಅಂತಿಮವಾಗಿ ಜಿಲ್ಲಾ ಪ್ರಶಸ್ತಿಗೆ ಆಯ್ಕೆಯಾದಂತಹ ಶಿಕ್ಷಕರ ಕಾರ್ಯಕ್ಷೇತ್ರಕ್ಕೆ ಜಿಲ್ಲಾ ಸಮಿತಿಯವರು ಭೇಟಿ ನೀಡಿ ತಾಲೂಕು ಆಯ್ಕೆ ಸಮಿತಿಯವರು ಶಿಫಾರಸ್ಸು ಮಾಡಿರುವಂತಹ ಅಂಶಗಳನ್ನು ಪರಿಶೀಲಿಸಿದ ನಂತರ ಪ್ರಶಸ್ತಿಗೆ ಅರ್ಹರಾಗಿದ್ದರೆ ಮಾತ್ರ ಆಯ್ಕೆ ಮಾಡತಕ್ಕದ್ದು.
- ಪ್ರಶಸ್ತಿಗೆ ಆಯ್ಕೆಯಾದಂತಹ ಪ್ರತಿಯೊಬ್ಬ ಶಿಕ್ಷಕರ ಶೈಕ್ಷಣಿಕ ಚಟುವಟಿಕೆ ಮತ್ತು ಇಲಾಕ ಪ್ರೋತ್ಸಾಹದಾಯಕ ಕಾರ್ಯಕ್ರಮಗಳಾದ ಮಕ್ಕಳನ್ನು ಶಾಲೆಗೆ ಕರೆತರುವುದು, ಸಮುದಾಯದತ್ತ ಶಾಲೆ ವಿಶೇಷ ದಾಖಲಾತಿ ಆಂದೋಲನ, ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ದಾಖಲು ಮಾಡಿಕೊಳ್ಳುವುದು, ಇತ್ಯಾದಿ ಕಾರ್ಯಕ್ರಮಗಳಲ್ಲಿ ಸಮರ್ಪಕ ನಿರ್ವಹಣೆ, ಬಗ್ಗೆ ಪೂರ್ಣ ಮಾಹಿತಿಯೊಂದಿಗೆ ಪ್ರಸ್ತಾವನೆಯನ್ನು ತಾಲೂಕು ಆಯ್ಕೆ ಸಮಿತಿ, ಜಿಲ್ಲಾ ಆಯ್ಕೆ ಸಮಿತಿಗೆ ಕಳುಹಿಸಿಕೊಡಬೇಕು.
- ಜಿಲ್ಲಾ ಪ್ರಶಸ್ತಿಗೆ ಶಿಫಾರಸು ಮಾಡಿರುವ ಪಟ್ಟಿಯನ್ನು ಆಯ್ಕೆ ಸಮಿತಿಯ ಎಲ್ಲಾ ಸದಸ್ಯರು ತಮ್ಮ ಅಭಿಪ್ರಾಯಗಳನ್ನು ದ್ವಿಪ್ರತಿಯಲ್ಲಿ ಸಲ್ಲಿಸಬೇಕು.
ತಾಲೂಕು ಮಟ್ಟದ ಆಯ್ಕೆ ಸಮಿತಿ
- ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು- ಅಧ್ಯಕ್ಷರು
- ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಹಿರಿಯ ಉಪನ್ಯಾಸಕರು – ಗೌರವಾಧ್ಯಕ್ಷರು
ಸದಸ್ಯರುಗಳು - ಮೂವರು ಶಿಕ್ಷಣ ತಜ್ಞರು.
- ಕ್ಷೇತ್ರ ಸಮನ್ವಯಾಧಿಕಾರಿಗಳು
- ತಾಲೂಕು ಮಟ್ಟದ ಪ್ರೌಢಶಾಲಾ ಮುಖ್ಯಗುರುಗಳು ಹಾಗೂ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರು.
- ಪ್ರೌಢಶಾಲಾ ಸಹಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರು
- ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು
- ತಾಲೂಕಿನ ಅನುಭವಿ ಸರ್ಕಾರಿ ಪದವಿಪೂರ್ವ ಕಾಲೇಜು ಉಪಪ್ರಾಂಶುಪಾಲರು
ಜಿಲ್ಲಾ ಮಟ್ಟದ ಸಮಿತಿ
- ಜಿಲ್ಲಾ ಉಪನಿರ್ದೇಶಕರು ( ಆಡಳಿತ)- ಅಧ್ಯಕ್ಷರು
- ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಹಿರಿಯ ಉಪನ್ಯಾಸಕರು – ಗೌರವಾಧ್ಯಕ್ಷರು
ಸದಸ್ಯರು - ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರತಿನಿಧಿಗಳು
- ಇಬ್ಬರು ಶಿಕ್ಷಣ ತಜ್ಞರು
- ಜಿಲ್ಲಾ ಪ್ರೌಢಶಾಲಾ ಮುಖ್ಯಗುರುಗಳು ಹಾಗೂ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರು.
- ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷರು
- ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು
- ರಾಜ್ಯ ಅಥವಾ ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆದ ಒಬ್ಬ ಶಿಕ್ಷಕರು