---Advertisement---

ಕರ್ನಾಟಕ ರಾಜ್ಯ ಮಟ್ಟದ ‘ಉತ್ತಮ ಶಿಕ್ಷಕ ಪ್ರಶಸ್ತಿ 2026-27’: ಆನ್‌ಲೈನ್ ಅರ್ಜಿ ಆಹ್ವಾನ – ಜುಲೈ 10ರಿಂದ ಅರ್ಜಿ ಸಲ್ಲಿಕೆ ಆರಂಭ

By kspstadk.com

Published On:

Follow Us
Best Teacher Award 2026–27
---Advertisement---
WhatsApp Group Join Now
Telegram Group Join Now

ಬೆಂಗಳೂರು, ಜುಲೈ 6: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯು 2026-27ನೇ ಸಾಲಿನ ರಾಜ್ಯ ಮಟ್ಟದ “ಉತ್ತಮ ಶಿಕ್ಷಕ ಪ್ರಶಸ್ತಿ”ಗೆ ಅರ್ಹ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಶಿಕ್ಷಕರು, ವಿಶೇಷ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದ ವಿಕಾಸ್ ಕಿಶೋರ್ ಸುರಳ್ಕರ್ (ಭಾ.ಆ.ಸೇ.) ಅಧಿಕೃತ ಸುತ್ತೋಲೆ ಹೊರಡಿಸಿದ್ದಾರೆ.

ಕಳೆದ ಎಂಟು ವರ್ಷಗಳಿಂದ ರಾಷ್ಟ್ರ ಮಟ್ಟದ ಶಿಕ್ಷಕರ ಪ್ರಶಸ್ತಿ ಆಯ್ಕೆ ಮಾದರಿಯಂತೆ ರಾಜ್ಯದಲ್ಲಿಯೂ ಸಂಪೂರ್ಣ ಆನ್‌ಲೈನ್ ವ್ಯವಸ್ಥೆಯ ಮೂಲಕ ಪ್ರಶಸ್ತಿ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದ್ದು, ಈ ಬಾರಿಯೂ ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಆಯ್ಕೆ ಪ್ರಕ್ರಿಯೆ ಸಂಪೂರ್ಣ ಡಿಜಿಟಲ್ ವ್ಯವಸ್ಥೆಯಲ್ಲೇ ನಡೆಯಲಿದೆ.

Google Drive PDF Viewer “`0

ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಶಿಕ್ಷಕರು ಈ ಕೆಳಗಿನ ಅರ್ಹತೆಗಳನ್ನು ಹೊಂದಿರಬೇಕು:

  • ಕಳೆದ 5 ವರ್ಷಗಳಿಂದ ನಿರಂತರವಾಗಿ ಬೋಧನಾ ಕಾರ್ಯದಲ್ಲಿ ತೊಡಗಿಸಿಕೊಂಡಿರಬೇಕು.

ಅರ್ಹ ಶಿಕ್ಷಕರು ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ “ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ” ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು.

ಲಾಗಿನ್ ಮಾಡಲು KGID/LIC ಸಂಖ್ಯೆ ಹಾಗೂ OTP ಬಳಸಬೇಕು. ಅರ್ಜಿಯೊಂದಿಗೆ ಸಾಧನೆಗಳಿಗೆ ಸಂಬಂಧಿಸಿದ ದಾಖಲೆಗಳು, ಫೋಟೋಗಳು, ಆಡಿಯೋ/ವೀಡಿಯೋ ಲಿಂಕ್‌ಗಳು ಹಾಗೂ ಗರಿಷ್ಠ 2 MB ಗಾತ್ರದ PDF ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು.

ಅದರ ಜೊತೆಗೆ ಸ್ವಯಂ ದೃಢೀಕರಣ ಪತ್ರ ಹಾಗೂ ಮುಖ್ಯ ಶಿಕ್ಷಕರು ಅಥವಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ದೃಢೀಕರಣ ಪತ್ರವನ್ನು ಕಡ್ಡಾಯವಾಗಿ ಅಪ್‌ಲೋಡ್ ಮಾಡಬೇಕು.

ತಾಂತ್ರಿಕ ಸಹಾಯಕ್ಕಾಗಿ teacheraward2025@gmail.com ಇ-ಮೇಲ್ ವಿಳಾಸವನ್ನು ಸಂಪರ್ಕಿಸಬಹುದು.

100 ಅಂಕಗಳ ಮೌಲ್ಯಮಾಪನ ವ್ಯವಸ್ಥೆ

31 ಶಿಕ್ಷಕರಿಗೆ ರಾಜ್ಯ ಮಟ್ಟದ ಗೌರವ

ರಾಜ್ಯ ಮಟ್ಟದಲ್ಲಿ ಒಟ್ಟು 31 ಅತ್ಯುತ್ತಮ ಪ್ರಸ್ತಾವನೆಗಳನ್ನು ಅಂತಿಮವಾಗಿ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ. ಇದರಲ್ಲಿ:

ಗ್ರಾಮೀಣ ಪ್ರದೇಶದ ಶಿಕ್ಷಕರು ಹಾಗೂ ಮಹಿಳಾ ಶಿಕ್ಷಕರಿಗೆ ಆಯ್ಕೆ ಪ್ರಕ್ರಿಯೆಯಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆಯು ತಿಳಿಸಿದೆ.

WhatsApp Group Join Now
Telegram Group Join Now

Join WhatsApp

Join Now

Join Telegram

Join Now

Leave a Comment