ಸರ್ಕಾರಿ ನೌಕರರಿಗೆ ನಗದುರಹಿತ ಚಿಕಿತ್ಸೆ (KASS)
✒️ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನೂತನ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಶೀಘ್ರ ಜಾರಿ ಮಾಡುವ ಸಂಬಂಧ ಸಾಫ್ಟ್ ವೇರ್ ಅಭಿವೃದ್ಧಿಪಡಿಸಲು ರಾಜ್ಯಾಧ್ಯಕ್ಷರಾದ ಷಡಾಕ್ಷರಿರವರ ಮನವಿಯಂತೆ ಇ-ಆಡಳಿತ ಇಲಾಖೆಯ ಕಾರ್ಯದರ್ಶಿ ಶ್ರೀ ವಿ.ಪೊನ್ನುರಾಜ್ ರವರ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಯಿತು. ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ (NHA) ಮೂಲಕ ಸಾಫ್ಟ್ ವೇರ್ ಅಭಿವೃದ್ಧಿಪಡಿಸಿ, ಕಾಲಮಿತಿಯೊಳಗೆ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನೂತನ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (KASS)ಶೀಘ್ರ ಜಾರಿಗೊಳಿಸಲು ನಿರ್ಣಯಿಸಲಾಯಿತು.