ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ಕಡ್ಡಾಯಗೊಳಿಸುವನಿಟ್ಟಿನಲ್ಲಿ ಉಲ್ಲೇಖ (1)ರನ್ವಯ ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ)ನಿಯಮಗಳು 2012ನ್ನು ರೂಪಿಸಲಾಗಿದೆ. ಸದರಿ ನಿಯಮಾವಳಿಗಳ ನಿಯಮ 1(3)ರಲ್ಲಿನಿರ್ದಿಷ್ಟಪಡಿಸಿರುವ ಹುದ್ದೆಗಳನ್ನು ಹೊರತುಪಡಿಸಿ ಉಳಿದಂತೆ ಎಲ್ಲಾ ಸರ್ಕಾರಿ ನೌಕರರುಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವುದನ್ನು ಕಡ್ಡಾಯಗೊಳಿಸಲಾಗಿದೆ.ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಸರ್ಕಾರ ಅಥವಾ ಅದು ಅನುಮೋದಿಸಿದ ಏಜೆನ್ಸಿಯುನಡೆಸತಕ್ಕದೆಂದು ನಿರ್ಧಿಷ್ಟಪಡಿಸಿದ್ದು, ಪ್ರಸ್ತುತ ಸರ್ಕಾರದಿಂದ ಅನುಮೋದಿಸಲ್ಪಟ್ಟ ಕಿಯೋನಿಕ್ಸ್ಸಂಸ್ಥೆಯ ಮೂಲಕ ನಡೆಸಲಾಗುತ್ತಿದೆ. ಈ ನಿಯಮಗಳು ನೇರ ನೇಮಕಾತಿ ಹೊಂದಿದ ಮತ್ತುಸೇವಾನಿರತ ಸರ್ಕಾರಿ ನೌಕರರಿಗೆ ಅನ್ವಯವಾಗುತ್ತವೆ.
ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನಿಗಧಿಪಡಿಸಿದ,ಕಾಲಮಿತಿಯನ್ನು ಹಲವುಕಾರಣಗಳಿಂದಾಗಿ ಕಾಲಕಾಲಕ್ಕೆ ವಿಸ್ತರಿಸಲಾಗಿದೆ. ಪ್ರಸ್ತುತ ಇರುವಂತೆ ಸೇವಾನಿರತ ಸರ್ಕಾರಿ ನೌಕರರುಉಲ್ಲೇಖಿತ (2)ರ ಅಧಿಸೂಚನೆಯನ್ವಯ ನಿಗಧಿಪಡಿಸಿರುವ ದಿನಾಂಕ: 31.12.2023ರೊಳಗೆ ಹಾಗೂ ನೇರನೇಮಕಾತಿ ಹೊಂದಿದ ನೌಕರರು ದಿನಾಂಕ:31,12,2023ರೊಳಗೆ ಅಥವಾ ತಮ್ಮ ಪರಿವೀಕ್ಷಣಾಅವಧಿಯೊಳಗೆ ಯಾವುದು ನಂತರವೋ ಅದರೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿಉತ್ತೀರ್ಣರಾಗುವುದು ಕಡ್ಡಾಯವಾಗಿರುತ್ತದೆ. ಸದರಿ ಅವಧಿಯೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಇತ್ಯಾದಿಗಳನ್ನು ಪಡೆಯಲು ಅನರ್ಹರಾಗುತ್ತಾರೆ. ಆದುದರಿಂದ, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದೆ ಇರುವ ಸರ್ಕಾರಿ ನೌಕರರು ಕೂಡಲೇ ಪರೀಕ್ಷೆ ತೆಗೆದುಕೊಂಡು ಉತ್ತೀರ್ಣರಾಗಲು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.