ಸರ್ಕಾರಿ ಅಧಿಕಾರಿಗಳು ಮತ್ತು ನೌಕರರುಗಳಿಗೆ ಕಂಪ್ಯೂಟರ್
ಸಾಕ್ಷರತಾ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಅನುಕೂಲ ಮಾಡಿಕೊಡಲು ಯೋಜಿಸಲಾಗಿದೆ.
ಒಟ್ಟು ಸುಮಾರು 5,40,000 ಸರ್ಕಾರಿ ಅಧಿಕಾರಿಗಳು ಮತ್ತು ನೌಕರರುಗಳು ಕಂಪ್ಯೂಟರ್
ಸಾಕ್ಷರತಾ ಪರೀಕ್ಷೆಯಲ್ಲಿ ಕಡ್ಡಾಯವಾಗಿ ತೇರ್ಗಡೆ ಹೊಂದುವಂತೆ ಸರ್ಕಾರವು ಆದೇಶ ನೀಡಿರುತ್ತದೆ.
ಅದರಂತೆ, ಈಗಾಗಲೇ 2,60,000ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ನೌಕರರುಗಳು ಕಂಪ್ಯೂಟರ್
ಸಾಕ್ಷರತಾ ಪರೀಕ್ಷೆಗಳನ್ನು ತೆಗೆದುಕೊಂಡಿದ್ದು, ಅದರಲ್ಲಿ 1,73,500 ಅಧಿಕಾರಿಗಳು ಮತ್ತು
ನೌಕರರುಗಳು ಉತ್ತೀರ್ಣರಾಗಿದ್ದು, ಉತ್ತೀರ್ಣರಾದ ಎಲ್ಲಾ ಅಧಿಕಾರಿಗಳು ಮತ್ತು ನೌಕರರುಗಳಿಗೆ
ಡಿಜಿಟಲ್ ಪ್ರಮಾಣ ಪತ್ರ ನೀಡಲಾಗಿರುತ್ತದೆ.
ಸುಮಾರು 3,50,000ಕ್ಕೂ ಹೆಚ್ಚು ಸರ್ಕಾರಿ ಅಧಿಕಾರಿಗಳು ಮತ್ತು ನೌಕರರುಗಳು ಕಂಪ್ಯೂಟರ್
ಸಾಕ್ಷರತಾ ಪರೀಕ್ಷೆ ತೆಗೆದುಕೊಳ್ಳಬೇಕಾಗಿರುವುದರಿಂದ, ಸರ್ಕಾರವು ದಿನಾಂಕ: 31-12-2022 ರವರೆಗೆ
ಸಮಯಾವಕಾಶ ವಿಸ್ತರಿಸಿ, ಆದೇಶ ಹೊರಡಿಸಿರುತ್ತದೆ. ಈ ಹಿನ್ನಲೆಯಲ್ಲಿ ನಿಗದಿಪಡಿಸಿರುವ
ದಿನಾಂಕದೊಳಗೆ ಉಳಿದಿರುವ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರುಗಳಿಗೆ ಕಂಪ್ಯೂಟರ್ ಸಾಕ್ಷರತಾ
ಪರೀಕ್ಷೆಗಳನ್ನು ನಡೆಸಲು ಅನುವು ಮಾಡಿಕೊಡಲು ತಮ್ಮ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸುತ್ತಿರುವ
ಸರ್ಕಾರಿ ಅಧಿಕಾರಿಗಳು ಮತ್ತು ನೌಕರರುಗಳಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ನಡೆಸಲು
ಅಧಿಕಾರಿ ಮತ್ತು ನೌಕರರುಗಳ ವಿವರಗಳನ್ನು ನೀಡಲು ಕೋರಲಾಗಿದೆ.
ಯಾವುದೇ ಸರ್ಕಾರಿ ಅಧಿಕಾರಿ/ನೌಕರನು ದಿನಾಂಕ: 31-12-2022 ರೊಳಗೆ ಕಂಪ್ಯೂಟರ್
ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣನಾಗದೇ ಇದ್ದಲ್ಲಿ ಮುಂಬಡ್ತಿ ಮತ್ತು ವಾರ್ಷಿಕ ವೇತನ
ಬಡ್ತಿಯನ್ನು ಹೊಂದಲು ಅರ್ಹನಾಗಿರುವುದಿಲ್ಲ ಮತ್ತು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು
ತೆಗೆದುಕೊಳ್ಳದಿರುವ ಅಧಿಕಾರಿ ಮತ್ತು ನೌಕರರುಗಳಿಗೆ ಆಯಾ ಇಲಾಖೆಯ ಮೇಲಾಧಿಕಾರಿಗಳು
ಮಾಹಿತಿ ನೀಡುವಂತೆ ಕೋರಲಾಗಿದೆ.