- ಮೆಡಿಕಲ್ , ಪ್ಯಾರಾ ಮೆಡಿಕಲ್, ಇತರ ವೈದ್ಯಕೀಯ ಸಂಸ್ಥೆಗಳು ಮತ್ತು ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಕೋವಿಡ್ ಲಕ್ಷಣಗಳು ಇರುವ ಬಗ್ಗೆ ಪ್ರತೀ ದಿನ ಸ್ಕ್ರೀನಿಂಗ್ ಮಾಡಿಸುವುದು ಮತ್ತು ಕೋವಿಡ್ ಲಕ್ಷಣಗಳು ಕಂಡು ಬಂದಲ್ಲಿ ಅಂತಹವರನ್ನು
ಈಗಾಗಲೇ ಹೊರಡಿಸಿದ ಮಾರ್ಗಸೂಚಿಯನ್ವಯ ಚಿಕಿತ್ಸೆಗೆ ಒಳಪಡಿಸಲು ಕ್ರಮ ವಹಿಸುವುದು.
- ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಕ್ರೀಡಾಕೂಟ , ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಂದಿನ ಆದೇಶದವರೆಗೆ ನಿಷೇಧಿಸಲಾಗಿದೆ.
- ಶಿಕ್ಷಣ ಸಂಸ್ಥೆಗಳಲ್ಲಿ
ಸಮ್ಮೇಳನಗಳು, ಸೆಮಿನಾರ್ ಗಳು , ಶೈಕ್ಷಣಿಕ ಕಾರ್ಯಕ್ರಮಗಳು ಇತ್ಯಾದಿಗಳನ್ನು
ಸಾಧ್ಯವಿರುವಲ್ಲಿ ಮುಂದೂಡುವುದು ಪರ್ಯಾಯವಾಗಿ ಇದನ್ನು virtual ಮೊಡ್ ನಲ್ಲಿ ನಡೆಸಬಹುದಾಗಿದೆ. - ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಕಾರ್ಯಕ್ರಮಗಳನ್ನು ಹೊರತುಪಡಿಸಿ ಇತರ ಯಾವುದೇ ಕಾರ್ಯಕ್ರಮಗಳನ್ನು ನಡೆಸಬೇಕಾದಲ್ಲಿ ಕಡ್ಡಾಯವಾಗಿ
ಜಿಲ್ಲಾಡಲಿತದಿಂದ
ಪೂರ್ವಾನುಮತಿಯನ್ನು ಪಡೆಯತಕ್ಕದ್ದು. - ಎಲ್ಲಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಕ್ಯಾಂಪಸ್ ನೊಳಗೆ ಕೋವಿಡ್ ಸಮುಚಿತ ವರ್ತನೆಗಳನ್ನು (CAB) ಖಚಿತ ಪಡಿಸಿಕೊಳ್ಳಲು ಹೆಚ್ಚಿನ ಕಾಳಜಿ ಯನ್ನು ತೆಗೆದುಕೊಳ್ಳುವುದು ಮತ್ತು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಿಸಲು ಅಗತ್ಯ
ಕ್ರಮಕೈಗೊಳ್ಳುವುದು. - ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಆರೋಗ್ಯ ವೃತ್ತಿಪರರು ಇತರ
ಕ್ಷೇತ್ರಗಳಲ್ಲಿನ ವೃತ್ತಿಪರರಿಗೆ ಸಮ್ಮೇಳನಗಳು , ಸೆಮಿನಾರ್ ಗಳು,CME ಸೆಷನ್ ಗಳು ಇತ್ಯಾದಿಗಳನ್ನು online ಮೂಲಕ ಸಂದೇಶವನ್ನು ಕಳುಹಿಸುವ ಬಗ್ಗೆ ಕ್ರಮ ಕೈಗೊಳ್ಳುವುದು. - ಎಲ್ಲಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಪಾಲಕರೊಂದಿಗೆ ಚರ್ಚಿಸಿ ಭೌತಿಕ/ online ತರಗತಿಗಳನ್ನು ನಡೆಸುವ ಬಗ್ಗೆ ಸೂಕ್ತ ಕ್ರಮ ವಹಿಸುವುದು.
- ಯಾವುದೇ ಶಿಕ್ಷಣ ಸಂಸ್ಥೆಗಳಲ್ಲಿ 5 ಖಚಿತ ಕೋವಿಡ್ -19 ಪ್ರಕರಣಗಳು ಕಂಡುಬಂದಲ್ಲಿ ಸಂಬಂಧ ಪಟ್ಟ ಶಿಕ್ಷಣ ಸಂಸ್ಥೆಯನ್ನು ಒಂದು ವಾರ ಕಡ್ಡಾಯವಾಗಿ ಮುಚ್ಚುವುದು ಮತ್ತು ಸದ್ರಿ ಶಿಕ್ಷಣ ಸಂಸ್ಥೆಯನ್ನು ಸಾನಿಟೈಸ್ ಮಾಡಿಸಿ ಶುಚಿಗೊಳಿಸುವುದು.
- ಎಲ್ಲಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ತಮ್ಮ ವಿದ್ಯಾರ್ಥಿಗಳು ಮತ್ತು ಸಿಬ್ಬಂಧಿಗಳಿಗೆ ಆದಷ್ಟು ಬೇಗ ವ್ಯಾಕ್ಸಿನೇಷನ್ ನನ್ನು ಪಡೆಯುವಂತೆ ನೋಡಿಕೊಳ್ಳುವುದು .
- ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೇ ಸಮಸ್ಯೆ ಇದ್ದಲ್ಲಿ ಅಥವಾ ಅವಶ್ಯ ಮಾಹಿತಿ ತಿಳಿದುಕೊಳ್ಳಲು ಉಪ ನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ , ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇವರು Helpline ಸಂಪರ್ಕ ಸೇವೆಯನ್ನು ಪ್ರಾರಂಭಿಸಿ ಎಲ್ಲಾ ಪ್ರಮುಖ ಸುದ್ಧಿ ಮಾಧ್ಯಮಗಳಲ್ಲಿ ಪ್ರಚರ ಪಡಿಸುವುದು.