ಫೆಬ್ರವರಿ 11 ಮತ್ತು 12 ರಂದು ನಡೆಯಲಿರುವ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ- ಶಿವಪ್ರಸಾದ್ ಶೆಟ್ಟಿ

ಕ್ರೀಡಾ ಕೂಟದಲ್ಲಿ ಭಾಗವಹಿಸುವ ನೌಕರರಿಗೆ ಅನ್ಯ ಕಾರ್ಯ ನಿಮಿತ್ತ ರಜಾ ಸೌಲಭ್ಯ
ದ.ಕ. ಜಿಲ್ಲಾ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ದಿನಾಂಕ 11-02-2021 ಹಾಗೂ 12-02-2021 ರಂದು ನಡೆಯಲಿದೆ.

 ಈ ಕುರಿತು ಉದ್ಘಾಟನಾ ಕಾರ್ಯಕ್ರಮದಲ್ಲಿ  ಬೆಳಿಗ್ಗೆ 9.00 ಗಂಟೆಯಿಂದ 11.00 ಗಂಟೆಯವರೆಗೆ  2 ಗಂಟೆಗಳ ಕಾಲ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು  ಪಾಲ್ಗೊಳ್ಳಲು ಅನುಮತಿ ನೀಡಿ ಮಾನ್ಯ ಜಿಲ್ಲಾಧಿಕಾರಿಯವರ ಕಛೇರಿಯಿಂದ ಎಲ್ಲಾ ಇಲಾಖೆಗಳಿಗೆ ಆದೇಶ ಹೊರಡಿಸಲಾಗಿದೆ.

ವಿವಿಧ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸುವ ನೌಕರರಿಗೆ ಎರಡು ದಿನಗಳ ಒಒಡಿ ಸೌಲಭ್ಯವಿದೆ.
ಎಲ್ಲಾ ಶಿಕ್ಷಕ ಬಂಧುಗಳು ಕ್ರೀಡಾ ಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಮೂಲಕ ಅವಕಾಶವನ್ನು ಬಳಸಿಕೊಳ್ಳುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಘಟಕ ದಕ್ಷಿಣ ಕನ್ನಡ ಇದರ ಅಧ್ಯಕ್ಷರಾದ ಶ್ರೀ ಶಿವಪ್ರಸಾದ್ ಶೆಟ್ಟಿ ಇವರು ಮನವಿ ಮಾಡಿಕೊಂಡಿದ್ದಾರೆ.


IMG 20210209 WA0030 min
Invitation

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ಪ್ರವೇಶ ಪತ್ರ ಕಡ್ಡಾಯ

ಸರಕಾರಿ ನೌಕರರ ದ.ಕ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಫೆಬ್ರವರಿ 11 ಹಾಗೂ 12 ರಂದು ನಡೆಯಲಿದೆ

  11 ರಂದು ಮಂಗಳಾ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಹಾಗೂ 12 ರಂದು ಮಂಗಳೂರು ಸರಕಾರಿ ನೌಕರರ ಸಂಘದ ಸಭಾ ಭವನದಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿರುವುದು.
ಕ್ರೀಡಾಕೂಟದಲ್ಲಿ  ಭಾಗವಹಿಸುವ ಎಲ್ಲ ಕ್ರೀಡಾಪಟುಗಳು ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ನೌಕರರು ಪ್ರವೇಶ ಪತ್ರವನ್ನು ಕಡ್ಡಾಯವಾಗಿ ತರುವಂತೆ ತಿಳಿಸಿರುತ್ತಾರೆ.ಶಿಕ್ಷಕರು ಶಾಲಾ ಮುಖ್ಯ ಗುರುಗಳ ಮೂಲಕ ದೃಢೀಕರಿಸಿ ತರುವಂತೆ ಸೂಚಿಸುತ್ತಾರೆ.
Sharing Is Caring:

Leave a Comment