ಪರಿಸರದ ಸುಸ್ಥಿರ ಬೆಳವಣಿಗೆಯಲ್ಲಿ ಶಾಲಾ ಮಕ್ಕಳ ಪಾತ್ರ ಪ್ರಮುಖವಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ ಹಂತದಲ್ಲಿ ಶಿಕ್ಷಕರು ಪರಿಸರ ಸಂರಕ್ಷಣೆ ಕುರಿತು ಮಕ್ಕಳಿಗೆ ಜಾಗೃತಿ ಮೂಡಿಸುವ ಚಟುವಟಿಕೆಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳನ್ನು ಪರಿಸರ ಸಂರಕ್ಷಣೆ ಮಾಡುವಂತೆ ಪ್ರೇರೆಪಿಸಲು ವಾರ್ಷಿಕ ಯೋಜನಾ ಅನುಮೋದನಾ ಮಂಡಳಿಯಿಂದ ಪ್ರಾಥಮಿಕ ಶಾಲಾ ವಿಭಾಗಕ್ಕೆ ಪ್ರತಿ ಶಾಲೆಗೆ ಘಟಕ ವೆಚ್ಚ 2000/- ರೂ 20475 ಶಾಲೆಗಳಿಗೆ ರೂ.409.50 ಲಕ್ಷಗಳ ಅನುದಾನ. ಹಿರಿಯ ಪ್ರಾಥಮಿಕ ಶಾಲಾ ವಿಭಾಗಕ್ಕೆ ಪ್ರತಿ ಶಾಲೆಗೆ ಘಟಕ ವೆಚ್ಚ ರೂ.5,000/- ಗಳಂತೆ 21660 ಶಾಲೆಗಳಿಗೆ ರೂ.1083.00 ಲಕ್ಷಗಳ ಅನುದಾನ ಹಾಗೂ ಪ್ರೌಢಶಾಲಾ ವಿಭಾಗಗಳಿಗೆ ಪ್ರತಿ ಶಾಲೆಗೆ ಘಟಕ ವೆಚ್ಚ ರೂ. 7500/- ರಂತೆ 5410 ಶಾಲೆಗಳಿಗೆ ರೂ.405.75 ಲಕ್ಷಗಳ ಅನುದಾನ ಅನುಮೋದನೆಯಾಗಿರುತ್ತದೆ.
ಉದ್ದೇಶಗಳು
- ವಿದ್ಯಾರ್ಥಿಗಳಲ್ಲಿ ಜೀವವೈವಿದ್ಯ, ಸಂರಕ್ಷಣೆ ಮತ್ತು ಸ್ಥಳೀಯ ಪರಿಸರ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವುದು.
- ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಸಂರಕ್ಷಣೆಯ ಜವಾಬ್ದಾರಿಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು.
- ವಿದ್ಯಾರ್ಥಿಗಳಲ್ಲಿ ಮರುಬಳಕೆ ಮತ್ತು ನವೀಕರಿಸಲಾಗದ ಸಂಪನ್ಮೂಲಗಳನ್ನು ಉಳಿಸುವಂತಹ ಪರಿಸರ ಸ್ನೇಹಿ ಅಭ್ಯಾಸಗಳನ್ನು ಬೆಳೆಸುವುದು.
- ಗಿಡ ಮರಗಳನ್ನು ಬೆಳೆಸುವುದರ ಮೂಲಕ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಹಸಿರು ಹಾಗೂ ಸ್ವಚ್ಛವಾಗಿಡಲು ವಿದ್ಯಾರ್ಥಿಗಳನ್ನು ಪ್ರೇರೇಪಿಸುವುದು.
ಇಕೋ ಕ್ಲಬ್ ಕಾರ್ಯಕ್ರಮದಡಿ ಶಿಕ್ಷಕರು ಶಾಲಾ ಹಂತದಲ್ಲಿ ಹಮ್ಮಿಕೊಳ್ಳಬೇಕಾದ ಚಟುವಟಿಕೆಗಳು:-
- ಪರಿಸರ ದಿನಾಚರಣೆಯ ಅಂಗವಾಗಿ ಶಾಲಾ ಆವರಣದಲ್ಲಿ ಸಸಿಗಳನ್ನು ನೆಟ್ಟು ಶಿಕ್ಷಕರು ಮಕ್ಕಳಿಗೆ ದತ್ತು ನೀಡಿ ಪೋಷಿಸುವುದರ ಮೂಲಕ ಶಾಲಾ ಆವರಣವನ್ನು ಹಸಿರು ವಾತಾವರಣವನ್ನು ನಿರ್ಮಿಸುವುದು.
- ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದು.
- ಶಾಲೆಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸುವುದು ಹಾಗೂ ಪ್ಲಾಸ್ಟಿಕ್ ಮುಕ್ತ ಶಾಲೆಯನ್ನಾಗಿ ಪರಿವರ್ತಿಸುವುದು.
- ಮಕ್ಕಳಲ್ಲಿ ಸಮತೋಲನ ಆಹಾರ ಬಳಕೆಯ ಅಭ್ಯಾಸಗಳನ್ನು ಬೆಳೆಸುವುದು.
- ಶಾಲೆಯಲ್ಲಿ ಅಡುಗೆ ಮನೆಯಿಂದ ಹೊರ ಹೋಗುವ ನೀರಿನಿಂದ ಶಾಲಾ ಕೈತೋಟವನ್ನು ಕಡ್ಡಾಯವಾಗಿ ನಿರ್ಮಿಸುವುದು.
- ಮಕ್ಕಳಿಗೆ ತ್ಯಾಜ್ಯದ ವಿಲೇವಾರಿ ಬಗ್ಗೆ ಜಾಗೃತಿ ಮೂಡಿಸಿ ಶಾಲಾ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು.
- ಶಿಕ್ಷಕರು ಪರಿಸರ ಮಾಲಿನಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು.
- ನೀರಿನ ಅನಿತ ಬಳಕೆ ಮತ್ತು ನೀರಿನ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸುವುದು.
- ಶಾಲಾ ಮಕ್ಕಳಿಂದ ಘೋಷಣೆಗಳೊಂದಿಗೆ ಜಾಥಾ ಕಾರ್ಯಕ್ರಮ ಹಮ್ಮಿಕೊಂಡು ಸಮುದಾಯದಲ್ಲಿ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವುದು.
- ಪರಿಸರ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ, ಚರ್ಚಾ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ, ಘೋಷವಾಕ್ಯಗಳು, ಕವನ ಹಾಗೂ ವ್ಯಂಗ್ಯ ಚಿತ್ರಗಳ ರಚನೆ ಕಿರು ನಾಟಕ ಹಾಗೂ ಚಿತ್ರಕಲೆ ಮುಂತಾದ ಸ್ಪರ್ಧೆಗಳನ್ನು ಹಮ್ಮಿಕೊಳ್ಳುವುದು.
- ಮರ ಗಿಡಗಳ ಎಲೆಗಳನ್ನು ಸಂಗ್ರಹಿಸಿ ಕಾಂಪೋಸ್ಟ್ ಗೊಬ್ಬರವನ್ನು ತಯಾರಿಸಿ ಶಾಲಾ ಕೈತೋಟಕ್ಕೆ ಬಳಸುವುದು.
- ಶಕ್ತಿ ಉಳಿತಾಯದ ಕುರಿತು ಮಕ್ಕಳಿಗೆ ಅರಿವು ಮೂಡಿಸುವುದು.
- ಸಂಪನ್ಮೂಲ ವ್ಯಕ್ತಿಗಳಿಂದ ಪರಿಸರ ಸಂರಕ್ಷಣೆ ಕುರಿತು ಉಪನ್ಯಾಸ ಒದಗಿಸುವುದು.
- ವನಭೇಟಿ ಹಾಗೂ ಪ್ರಕೃತಿ ನಡಿಗೆ ಹಮ್ಮಿಕೊಳ್ಳುವುದು.
ಅನುದಾನ ಬಳಕೆಯ ವಿವರ