ಸರ್ಕಾರಿ ನೌಕರರ ಮೇಲೆ ದೌರ್ಜನ್ಯ ಕ್ರಮಕ್ಕೆ ಗೃಹ ಸಚಿವರ ಸೂಚನೆ

ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳ ಮೇಲೆ ದೌರ್ಜನ್ಯ ಹಾಗೂ ಹಲ್ಲೆ ಪ್ರಕರಣಗಳು ನಡೆದರೆ ಅದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ. ರಾಜ್ಯದ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳ ಮೇಲೆ ಹಲ್ಲೆ ಹಾಗೂ ದೌರ್ಜನ್ಯ ಪ್ರಕರಣಗಳು ನಡೆಯುತ್ತಿರುವುದು ವರದಿಯಾಗುತ್ತಿದೆ. ಇಂತಹ ಕೃತ್ಯ ನಡೆಸುವವರ ಮೇಲೆ ಕಠಿಣ ಕ್ರಮವನ್ನು ಪೋಲಿಸ್ ಅಧಿಕಾರಿಗಳು ಕೈಗೊಳ್ಳಬೇಕು. ಈ ಬಗ್ಗೆ ತಾವುಗಳು ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ ಎಸ್. ಷಡಾಕ್ಷರಿ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ರಾಜ್ಯಾಧ್ಯಕ್ಷರ ಪತ್ರದ ಆಧಾರದ ಮೇಲೆ ಗೃಹ ಸಚಿವರು ಈ ಸೂಚನೆ ನೀಡಿದ್ದಾರೆ.

20220209 202517 min
Sharing Is Caring:

Leave a Comment