“ಗೃಹ ಜ್ಯೋತಿ” ಯೋಜನೆಯಡಿ ಉಚಿತ ವಿದ್ಯುತ್ ಸೌಕರ್ಯ ಒದಗಿಸುವ ಸಂಬಂಧ ಉಂಟಾಗಿರುವ ಗೊಂದಲಗಳಿಗೆ ಸ್ಪಷ್ಟಿಕರಣ ಎಲ್ಲಿದೆ

“ಗೃಹ ಜ್ಯೋತಿ” (gruha Jothi) ಯೋಜನೆಯಡಿ ಉಚಿತ ವಿದ್ಯುತ್ ಸೌಕರ್ಯ ಒದಗಿಸುವ ಸಂಬಂಧ ಉಂಟಾಗಿರುವ ಗೊಂದಲಗಳಿಗೆ ಸ್ಪಷ್ಟಿಕರಣ ಎಲ್ಲಿದೆ. ಹಾಗೂ ನಾವು ಇಲ್ಲಿ ನೀಡಿರುವ ಬಟನ್ ಮೇಲೆ ಕ್ಲಿಕ್ ಮಾಡಿ ನೀವು ನಿಮ್ಮ ಮೊಬೈಲ್ ನಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಇನ್ನೂ ಏನಾದರೂ ಪ್ರಶ್ನೆಗಳಿದ್ದರೆ ಕಾಮೆಂಟ್ ಮೂಲಕ ತಿಳಿಸಬಹುದು.

ಗೃಹ ಜ್ಯೋತಿ – ನಿಮ್ಮ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ

1. ಈ ಯೋಜನೆಯುಬಾಡಿಗೆ ಮನೆಗಳಲ್ಲಿವಾಸಿಸುತ್ತಿರುವ ವಿದ್ಯುತ್ ಬಳಕೆದಾರರಿಗೂ ಅನ್ವಯಿಸುವುದೆ?

  • ಗೃಹ ವಿದ್ಯುತ್ ಬಳಕೆದಾರರು ಬಾಡಿಗೆದಾರರಾಗಿದ್ದಲ್ಲಿ, ವಾಸದಮನೆಯ ವಿಳಾಸಕ್ಕೆ ಸಂಬಂಧಿಸಿದಂತೆ ಆಧಾರ್ ಸಂಖ್ಯೆಯನ್ನುಸೇವಾ ಸಿಂಧು ಪೋರ್ಟಲ್‌ನಲ್ಲಿ ಜೋಡಣೆ ಮಾಡಿನೊಂದಾಯಿಸುವ ಮೂಲಕ ಸದರಿ ಸೌಲಭ್ಯವನ್ನುಪಡೆಯುವುದು.

2. ಗೃಹ ಬಳಕೆದಾರರು /ಫಲಾನುಭವಿಗಳು ಯಾವುದಾದರು ಮಾಹೆಗಳಲ್ಲಿ ಮಾತ್ರ 200 ಯುನಿಟ್ ಮಿತಿ ದಾಟಿ ದರೂ ಸದರಿ ಯೋಜನೆಯಲ್ಲಿ ಮುಂದುವರಿಯುವವರೆ?

  • 200 ಯುನಿಟ್ ಗಳ ಬಳಕೆಯ ಮಿತಿಯನ್ನು ಯಾವುದಾದರು ಮಾಹೆಗಳಲ್ಲಿ ಮೀರಿದಲ್ಲಿ, ಆ ತಿಂಗಳ ಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಿ, ಸದರಿ ಯೋಜನೆಯಲ್ಲಿ ಮುಂದುವರಿಯುವುದು.

3. ಸರ್ಕಾರದ ಆದೇಶದ ನಂತರ ಹೊಸದಾಗಿ ಗೃಹಬಳಕೆಗಾಗಿ ವಿದ್ಯುತ್ ಸಂಪರ್ಕ ಪಡೆದ ಗ್ರಾಹಕರಿಗೆ / ಬಳಕೆದಾರರಿಗೆ ಈ ಯೋಜನೆಯು ಅನ್ವಯಿಸುತ್ತದೆಯೇ ?

  • ಹೊಸ ಸಂಪರ್ಕ ಪಡೆದ ಗ್ರಾಹಕರಿಗೆ ಬಳಕೆ ಇತಿಹಾಸ ಇಲ್ಲದಿರುವುದರಿಂದ ರಾಜ್ಯದ ಗೃಹ ಬಳಕೆದಾರರ ಸರಾಸರಿ ಬಳಕೆಯು ಮಾಸಿಕ 53 ಯೂನಿಟ್‌ಗಳಾಗಿರುವುದರಿಂದ 53 ಯೂನಿಟ್‌ಗಳನ್ನೇ ನಿರ್ಧರಿಸಿ ಈ ಯೋಜನೆಯಸೌಲಭ್ಯವನ್ನು ವಿಸ್ತರಿಸುವುದು.

4. 2022-23 ರಲ್ಲಿ ಒಂದು ವರ್ಷಕ್ಕಿಂತ ಕಡಿಮೆ ಅವಧಿಯ ಬಳಕೆ ದಾಖಲಾಗಿದ್ದಲ್ಲಿ ಅಂತಹ ಮನೆಗಳ ಕಡಿಮೆ ಅವಧಿಯ ಸರಾಸರಿ ಪರಿಗಣಿಸುವ ವಿಧಾನ ಹೇಗೆ? (Shifted Houses)

  • ಬಳಕೆ ಇತಿಹಾಸ ಇಲ್ಲದಿರುವುದರಿಂದ ರಾಜ್ಯದ ಗೃಹ ಬಳಕೆದಾರರ ಸರಾಸರಿ ಬಳಕೆಯು ಮಾಸಿಕ 53 ಯೂನಿಟ್‌ಗಳಾಗಿರುವುದರಿಂದ53 ಯೂನಿಟ್‌ಗಳನ್ನೇ ನಿರ್ಧರಿಸಿ ಈ ಯೋಜನೆಯ ಸೌಲಭ್ಯವನ್ನು ವಿಸ್ತರಿಸುವುದು.

5. Multi stored Apartment ಗಳಿಗೆ ಈ ಯೋಜನೆ ಅನ್ವಯಿಸುತ್ತದೆಯೇ?

  • ಯಾವ ಮನೆಗಳಿಗೆ ಪ್ರತ್ಯೇಕ ಮೀಟರ್ ಇದೆಯೋ ಹಾಗೂಮೀಟರ್ ರೀಡಿಂಗ್ ಮಾಡಲಾಗುತ್ತಿದೆಯೋ ಅಂತಹ ಎಲ್ಲಾಮನೆಗಳಿಗೆ ಈ ಯೋಜನೆ ಅನ್ವಯಿಸುತ್ತದೆ.
Sharing Is Caring:

Leave a Comment