---Advertisement---

2025-2026ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡುವ ಬಗ್ಗೆ ಮಾಹಿತಿ,

By kspstadk.com

Updated On:

Follow Us
---Advertisement---
WhatsApp Group Join Now
Telegram Group Join Now

2025-2026ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡುವ ಬಗ್ಗೆ ತಿಳಿಸಿದ್ದು ಅದರಲ್ಲಿ ಕ್ರಮ ಸಂಖ್ಯೆ (1)ರ ಆದೇಶದಲ್ಲಿ 2024-25 ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರುಗಳ ಹುದ್ದೆಗಳಿಗೆದುರಾಗಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 35000 ‘ಅತಿಥಿ ಶಿಕ್ಷಕರುಗಳನ್ನು ಮತ್ತು ಸರ್ಕಾರಿ ಪ್ರೌಢಶಾಲೆಗಳಿಗೆ 10,000 ಅತಿಥಿ ಶಿಕ್ಷಕರಗಳನ್ನು ಒಳಗೊಂಡಂತೆ ಒಟ್ಟು 45,000 (ನಲವತ್ತೈದು ಸಾವಿರ) ಅತಿಥಿ ಶಿಕ್ಷಕರುಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಶಿಕ್ಷಕರನ್ನು ಭರ್ತಿ ಮಾಡುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಎಂಬ ಷರತ್ತಿಗೊಳಪಟ್ಟು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರವು ಮಂಜೂರಾತಿ ನೀಡಿ ಆದೇಶಿಸಲಾಗಿರುತ್ತದೆ.

ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ನಿರ್ದೇಶಕರು (ಪ್ರಾಥಮಿಕ ಶಿಕ್ಷಣ), ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರ ಪತ್ರದಲ್ಲಿ 2025-26ನೇ ಶೈಕ್ಷಣಿಕ ವರ್ಷದ ಏಕ ರೂಪದ ಮಾರ್ಗಸೂಚಿಯನ್ನು ನಿಗಧಿಪಡಿಸಿ ದಿನಾಂಕ: 29.05.2025 ರಂದು ಶಾಲೆಗಳು ಪ್ರಾರಂಭವಾಗಲಿದ್ದು, ಅದರಂತೆ, 2025-26 ನೇ ಸಾಲಿನಲ್ಲಿ ಪೂರ್ವ ನಿಗದಿಯಂತೆ ಶಾಲಾ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಿ ನಿರ್ವಹಣೆ ಮಾಡಬೇಕಾಗಿದ್ದು, ಶಾಲಾ ಪ್ರಾರಂಭದ ದಿನವೇ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಯಾವುದು ಮೊದಲೂ ಅಲ್ಲಿಯವರೆಗೆ ಶಿಕ್ಷಕರ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವ ಅನಿವಾರ್ಯತ ಇದ್ದು, ಪ್ರಾಥಮಿಕ/ಪ್ರೌಢಶಾಲೆಗಳನ್ನು ಪ್ರಾರಂಭಿಸಿ, ಶೈಕ್ಷಣಿಕ ಚಟುವಟಿಕೆಗಳ ನಿರ್ವಹಣೆ ಮಾಡಬೇಕಾಗಿರುತ್ತದೆ ಎಂದು ವರದಿ ಮಾಡುತ್ತಾ, ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ • ಶಾಲೆಯಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆದುರಾಗಿ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲೇ ಅತಿಥಿ ಶಿಕ್ಷಕರನ್ನು ಶಾಲೆಗಳಿಗೆ ಲಭ್ಯಪಡಿಸಿದ್ದಲ್ಲಿ, ವಿದ್ಯಾರ್ಥಿಗಳ ಶೈಕ್ಷಣಿಕ ಬೋಧನಾ ಪುಕ್ರಿಯೆಗೆ ಅನುಕೂಲವಾಗುತ್ತದೆಂಬ ಅಂಶದೊಂದಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 45,000 ಹಾಗೂ ಪ್ರೌಢಶಾಲೆಗಳಿಗೆ 11,000 ಒಟ್ಟು 56,000 (ಐವತ್ತಾರು ಸಾವಿರ) ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಕೋರಿ ಸರ್ಕಾರಕ್ಕೆ ಪ್ರಸ್ತಾವನೆಯಲ್ಲಿ ಸಲ್ಲಿಸಿರುತ್ತಾರೆ.

ನಿರ್ದೇಶಕರು (ಪ್ರಾಥಮಿಕ ಶಿಕ್ಷಣ), ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಇವರ ಪಸ್ತಾವನೆಯನ್ನು ಪರಿಶೀಲಿಸಲಾಯಿತು. ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿಯಿರುವ ಬೋಧಕ ಹುದ್ದೆಗಳಿಗೆ ಹಾಗೂ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 2025-26 ನೇ ಶೈಕ್ಷಣಿಕ ಸಾಲಿಗೆ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಯಿತು.

ಅದರಂತೆ ಈ ಕೆಳಕಂಡಂತೆ ಆದೇಶ. ಸರ್ಕಾರದ ಆದೇಶ ಸಂಖ್ಯೆ: ಇಪಿ 138 ಎಸ್ಇಎಸ್ 2025, ದಿನಾಂಕ: 23/05/2025 ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರುಗಳ ಹುದ್ದೆಗಳಿಗೆದುರಾಗಿ ಶೈಕ್ಷಣಿಕ ಹಿತದೃಷ್ಟಿಯಿಂದ ಅತಿಥಿ ಶಿಕ್ಷಕರುಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಶಿಕ್ಷಕರನ್ನು ಭರ್ತಿ ಮಾಡುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಎಂಬ ಷರತ್ತಿಗೊಳಪಟ್ಟು ಈ ಕೆಳಕಂಡಂತೆ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಸರ್ಕಾರವು ಮಂಜೂರಾತಿ ನೀಡಿ ಆದೇಶಿಸಿದೆ.

1001436923

ತಾಲೂಕುವಾರು ಅತಿಥಿ ಶಿಕ್ಷಕರ ಹಂಚಿಕೆ 👇

WhatsApp Group Join Now
Telegram Group Join Now

Join WhatsApp

Join Now

Join Telegram

Join Now

Leave a Comment