---Advertisement---

ಶಾಲಾ ಶಿಕ್ಷಣ ಇಲಾಖೆ – ಅತಿಥಿ ಶಿಕ್ಷಕರ ನೇಮಕಾತಿ ಮಾರ್ಗಸೂಚಿಗಳು

By kspstadk.com

Published On:

Follow Us
Guest teachers allotment
---Advertisement---
WhatsApp Group Join Now
Telegram Group Join Now


ಮಂಜೂರಾದ ಖಾಲಿ ಇರುವ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವುದು.


ಪ್ರಾಥಮಿಕ ಶಾಲೆಗಳಿಗೆ ಸಂಬಂಧಿಸಿದಂತೆ ಅತಿಥಿ ಶಿಕ್ಷಕರ ಆಯ್ಕೆ ಜವಾಬ್ದಾರಿ ಸಂಬಂಧಪಟ್ಟ ಸರ್ಕಾರಿ ಶಾಲಾ ಮುಖ್ಯ ಶಿಕ್ಷಕರುಗಳ ಮೂಲಕವೇ ಮಾಡುವುದು.


ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರನ್ನು ಪ್ರಮುಖವಾಗಿ ಆದ್ಯತೆ ಮೇರೆಗೆ ಗ್ರಾಮೀಣ ಪ್ರದೇಶಗಳಲ್ಲಿನ ಖಾಲಿ ಹುದ್ದೆಗಳಿಗೆ ಹಾಗೂ ಶಿಕ್ಷಕ ರಹಿತ ಶಾಲೆಗಳಿಗೆ / ಹೆಚ್ಚು ವಿದ್ಯಾರ್ಥಿಗಳಿರುವ ಖಾಲಿ ಹುದ್ದೆಗಳಿಗೆ ಮೊದಲ ಆದ್ಯತೆ ನೀಡುವುದು.


ರಾಜ್ಯದಲ್ಲಿ ಶಾಲಾ ಶಿಕ್ಷಣ ಇಲಾಖೆಯಡಿ ವಿಶೇಷವಾಗಿ ಪ್ರಾರಂಭಿಸಿರುವ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಗಳು / ಬೆಂಗಳೂರು ಪಬ್ಲಿಕ್ ಶಾಲೆಗಳು / ದ್ವಿಭಾಷಾ (Bilingual – ಆಂಗ್ಲಭಾಷಾ) ಮಾಧ್ಯಮದ ತರಗತಿಗಳಿರುವ ಶಾಲೆಗಳು ಹಾಗೂ ಆದರ್ಶ ವಿದ್ಯಾಲಯಗಳಲ್ಲಿ ಅತಿಥಿ ಶಿಕ್ಷಕರನ್ನು ಆದ್ಯತೆ ಮೇರೆಗೆ ನೇಮಕಾತಿ ಮಾಡುವುದು.


ಅತಿಥಿ ಶಿಕ್ಷಕರನ್ನು ಆಯಾ ಹುದ್ದೆಗೆ ನಿಗದಿಪಡಿಸಿರುವ ಕನಿಷ್ಟ ವಿದ್ಯಾರ್ಹತೆಯನ್ನು ಪರಿಗಣಿಸಿ ಮೆರಿಟ್ ಆಧಾರದ ಮೇಲೆ ಮತ್ತು ಅನುಭವಕ್ಕೆ ಆದ್ಯತೆ ನೀಡಿ ಆಯ್ಕೆ ಮಾಡತಕ್ಕದ್ದು.


ಅತಿಥಿ ಶಿಕ್ಷಕರ ಹಾಜರಾತಿ ವಹಿಯನ್ನು ಪ್ರತ್ಯೇಕವಾಗಿ ನಿರ್ವಹಣೆ ಮಾಡುವುದು.


ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಗೌರವ ಸಂಭಾವನೆ ದರ ಮಾಹೆಯಾನ ರೂ. 12,000/- ಆಗಿರುತ್ತದೆ.


ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡ ಹುದ್ದೆಗಳಿಗೆ ವರ್ಗಾವಣೆ/ ನೇಮಕಾತಿ ಮುಖಾಂತರ ಖಾಯಂ ಶಿಕ್ಷಕರು ಸ್ಥಳನಿಯುಕ್ತಿಗೊಂಡಲ್ಲಿ, ಸದರಿ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅತಿಥಿ ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ, ತದನಂತರ ತಾಲ್ಲೂಕಿನಲ್ಲಿ ಅಗತ್ಯಾನುಸಾರ ವರ್ಗಾವಣೆಯಿಂದ ಅಥವಾ ಇತರೆ ಕಾರಣಗಳಿಂದ ತೆರವಾದ ಖಾಲಿ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು/ ಹುದ್ದೆಯನ್ನು ಸ್ಥಳೀಯವಾಗಿ ಹಂಚಿಕೆ ಮಾಡಿ ಕ್ರಮವಹಿಸುವುದು.


ಪ್ರಸ್ತುತ ವರ್ಗಾವಣೆ ತಂತ್ರಾಂಶದಲ್ಲಿದ್ದಂತೆ ಖಾಲಿ ಹುದ್ದೆಗಳನ್ನಾಧರಿಸಿ ತಾಲ್ಲೂಕುವಾರು ಅತಿಥಿ ಶಿಕ್ಷಕರ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದ್ದು, ಸದರಿ ಅತಿಥಿ ಶಿಕ್ಷಕರ ಹುದ್ದೆಗಳನ್ನು ತಾಲ್ಲೂಕು ಪಂಚಾಯಿತಿವಾರು ಮರುಹಂಚಿಕೆ ಮಾಡಿ ಅನುದಾನದ ವಿವರ ಈ ಕಛೇರಿಗೆ ಸಲ್ಲಿಸಿದ ನಂತರ ತಾಲ್ಲೂಕಿನಿಂದ ತಾಲ್ಲೂಕಿಗೆ (ಜಿಲ್ಲೆಯ ಒಳಗೆ) ಅತಿಥಿ ಶಿಕ್ಷಕರ ಮರುಹಂಚಿಕೆ ಮಾಡುವಂತಿಲ್ಲ.


ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವಾಗ ತೀವ್ರ ನಿಗಾವಹಿಸಿ ಉತ್ತಮ ಗುಣ ಮತ್ತು ನಡತೆ ಹೊಂದಿರುವ ಅಭ್ಯರ್ಥಿಗಳನ್ನು ಮಾತ್ರ ನೇಮಕಾತಿ ಮಾಡಿಕೊಳ್ಳುವುದು.

WhatsApp Group Join Now
Telegram Group Join Now

Join WhatsApp

Join Now

Join Telegram

Join Now

Leave a Comment