ಈ ಬಾರಿಯ ಬಜೆಟ್‌ನಲ್ಲಿ ಘೋಷಿಸಿರುವಂತೆ ಸರಕಾರಿ ಪ್ರಾಥಮಿಕ, ಪ್ರೌಢಶಾಲಾ ಅತಿಥಿ ಶಿಕ್ಷಕರು ಹಾಗೂ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ಮಾಸಿಕ ಗೌರವಧನವನ್ನು ತಲಾ 2 ಸಾವಿರ ರೂ ಹೆಚ್ಚಿಸಿ ಸರಕಾರ ಆದೇಶ ಹೊರಡಿಸಿದೆ. 2025-26ನೇ ಸಾಲಿನಲ್ಲಿ ನೇಮಕಗೊಳ್ಳುವ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಇದು ಅನ್ವಯ ಆಗಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಈ ಆದೇಶ ಹೊರಡಿಸಿದೆ.
ಪ್ರಸ್ತುತ ಪ್ರಾಥಮಿಕ ಶಾಲೆಗಳಲ್ಲಿ ಕೆಲಸ ಮಾಡುವ ಅತಿಥಿ ಶಿಕ್ಷಕರಿಗೆ ₹10 ಸಾವಿರ, ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ₹10,500 ಹಾಗೂ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ₹12 ಸಾವಿರ ನೀಡಲಾಗುತ್ತಿದೆ. 2025–26ನೇ ಶೈಕ್ಷಣಿಕ ಸಾಲಿನಿಂದ ಕ್ರಮವಾಗಿ ₹12 ಸಾವಿರ, ₹12,500 ಹಾಗೂ ₹14 ಸಾವಿರ ಪಡೆಯಲಿದ್ದಾರೆ.
