---Advertisement---

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನವರಿ ತಿಂಗಳಿನಲ್ಲಿ ನಿವೃತ್ತರಾದ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವಿವರ ಇಲ್ಲಿದೆ ಗುರುಭ್ಯೋ ನಮಃ

By kspstadk.com

Published On:

Follow Us
Gurubhyo namaha january2026
---Advertisement---
WhatsApp Group Join Now
Telegram Group Join Now

ಗುರುಭ್ಯೋ ನಮಃ

ದಶಕಗಳ ಕಾಲ ಸಾರ್ಥಕ ಸೇವೆಗೈದು ಅನೇಕ ವಿದ್ಯಾರ್ಥಿಗಳ ಬಾಳಿನಲ್ಲಿ ಅಕ್ಷರ ದೀಪವ ಬೆಳಗಿ ಈ ತಿಂಗಳು ಸೇವೆಯಿಂದ ನಿವೃತ್ತರಾಗುತ್ತಿರುವ ಜಿಲ್ಲೆಯ ಶಿಕ್ಷಕರ ಪರಿಚಯವನ್ನು ತಮ್ಮ ಮುಂದಿಡಲು ಹೆಮ್ಮೆ ಪಡುತ್ತಿದ್ದೇವೆ.

ಶ್ರೀಮತಿ ಸಂಧ್ಯಾ ರಾಣಿ ಕೆ
ಸ.ಕಿ.ಪ್ರಾ.ಶಾಲೆ ನೆಕ್ಕಿಲು


ಪುತ್ತೂರು ಕೊಯಿಲ ಶ್ರೀ ಶ್ರೀಧರ ರಾವ್ ಹಾಗೂ ಶ್ರೀಮತಿ ಸುಭದ್ರ ದಂಪತಿಗಳ ಪುತ್ರಿಯಾಗಿ ದಿನಾಂಕ 31.01.1966 ರಂದು ಜನಿಸಿದ ಇವರು ಪ್ರಾಥಮಿಕ ಶಿಕ್ಷಣವನ್ನು ಸ.ಹಿ.ಪ್ರಾ.ಶಾಲೆ ಕೊಯಿಲ ಪುತ್ತೂರು ಇಲ್ಲಿ ಪೂರೈಸಿ ಪ್ರೌಢ ಶಿಕ್ಷಣವನ್ನು ರಾಮಕುಂಜೇಶ್ವರ ಪ್ರೌಢಶಾಲೆ ಇಲ್ಲಿ ಪೂರೈಸಿ ಶಿಕ್ಷಕ ತರಬೇತಿಯನ್ನು ರೋಸಾ ಮಿಸ್ತಿಕಾ ಕಿನ್ನಿಕಂಬಳ ಇಲ್ಲಿ ಪೂರೈಸಿ ದಿನಾಂಕ 11.11.1998 ರಂದು ಸ.ಮಾ.ಹಿ.ಪ್ರಾ.ಶಾಲೆ ಕಾಟಿಪಳ್ಳ ಇಲ್ಲಿ ಸೇವೆಗೆ ಸೇರಿದ ಇವರು ಇಲ್ಲಿ ಸೇವೆ ಸಲ್ಲಿಸಿ ನಂತರ ಸ.ಕಿ.ಪ್ರಾ.ಶಾಲೆ ಕಲ್ವೆರೆಗುರಿ ಬಜಾಲ್ ಇಲ್ಲಿಗೆ ವರ್ಗಾವಣೆ ಗೊಂಡು ಇಲ್ಲಿ ಸೇವೆ ಸಲ್ಲಿಸಿ ನಂತರ ದಿನಾಂಕ 01.11.2019 ರಂದು ಸ.ಕಿ.ಪ್ರಾ.ಶಾಲೆ ನೆಕ್ಕಿಲು ಇಲ್ಲಿಗೆ ವರ್ಗಾವಣೆ ಗೊಂಡು ಇಲ್ಲಿ ಸೇವೆ ಸಲ್ಲಿಸಿದ ಇವರು ಈ ತಿಂಗಳು ಸೇವೆಯಿಂದ ನಿವೃತ್ತರಾಗುತ್ತಿದ್ದಾರೆ.ಇವರಿಗೆ ನಿವೃತ್ತ ಜೀವನದ ಶುಭಾಶಯಗಳು.

ಶ್ರೀಮತಿ ಫಿಲೋಮಿನಾ ಸಿ ಜೆ
ಮುಖ್ಯ ಶಿಕ್ಷಕರು.
ಸ.ಹಿ.ಪ್ರಾ.ಶಾಲೆ ಕೊಡಿಯಾಲ್ ಬೈಲು ಬೆಳ್ತಂಗಡಿ

ಗಂಡಿಬಾಗಿಲು ನೆರಿಯ ಗ್ರಾಮದ ಶ್ರೀಯುತ ಜೋಸೆಫ್ ಹಾಗೂ ಶ್ರೀಮತಿ ಮೇರಿ ದಂಪತಿಗಳ ಪುತ್ರಿಯಾಗಿ ಜನಿಸಿದ ಇವರು ಪ್ರಾಥಮಿಕ ಶಿಕ್ಷಣವನ್ನು ಸ.ಹಿ.ಪ್ರಾ.ಶಾಲೆ ಗಂಡಿಬಾಗಿಲು ಇಲ್ಲಿ ಪೂರೈಸಿ ಪ್ರೌಢ ಶಿಕ್ಷಣವನ್ನು ಸೈಂಟ್ ತೆರೆಸಾ ಬೆಳ್ತಂಗಡಿ ಇಲ್ಲಿ ಪೂರೈಸಿ ಪದವಿ ಪೂರ್ವ ಶಿಕ್ಷಣವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಪೂರೈಸಿ ಶಿಕ್ಷಕ ತರಬೇತಿಯನ್ನು ಶಿಕ್ಷಕ ತರಬೇತಿ ಸಂಸ್ಥೆ ಕಪಿತಾನಿಯೋ ಇಲ್ಲಿ ಪೂರೈಸಿ ದಿನಾಂಕ 29.11.1988 ರಲ್ಲಿ ಸ.ಹಿ.ಪ್ರಾ.ಶಾಲೆ ನೆರಿಯ ಇಲ್ಲಿ ಸೇವೆಗೆ ಸೇರಿದ ಇವರು ಇಲ್ಲಿ ಸೇವೆ ಸಲ್ಲಿಸಿ ನಂತರ ಸ.ಹಿ.ಪ್ರಾ.ಶಾಲೆ ಬಾಯಾಲು ಇಲ್ಲಿಗೆ ವರ್ಗಾವಣೆ ಗೊಂಡು ಇಲ್ಲಿ ಸೇವೆ ಸಲ್ಲಿಸಿ ನಂತರ ಸ.ಹಿ.ಪ್ರಾ.ಶಾಲೆ ಕೊಡಿಯಾಲ್ ಬೈಲ್ ಇಲ್ಲಿ ಸೇವೆ ಸಲ್ಲಿಸಿದ ಇವರು 2001-2002 ರಲ್ಲಿ ಜನ ಮೆಚ್ಚಿದ ಶಿಕ್ಷಕಿ ಪ್ರಶಸ್ತಿಯನ್ನು ಪಡೆದ ಇವರು ಈ ತಿಂಗಳು ಸೇವೆಯಿಂದ ನಿವೃತ್ತರಾಗುತ್ತಿದ್ದಾರೆ.ಇವರಿಗೆ ನಿವೃತ್ತ ಜೀವನದ ಶುಭಾಶಯಗಳು.

ಶ್ರೀಮತಿ ಶಾರದಾ ಬಿ
ಸ.ಉ.ಪ್ರಾ.ಶಾಲೆ ಕನ್ಯಾಡಿ-2
ಬೆಳ್ತಂಗಡಿ ತಾಲೂಕು


ದಿನಾಂಕ 29.11.1996 ರಲ್ಲಿ ಸೇವೆಗೆ ಸೇರಿದ ಇವರು 30 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿ ಈ ತಿಂಗಳು ಸೇವೆಯಿಂದ ನಿವೃತ್ತರಾಗುತ್ತಿದ್ದಾರೆ.ಇವರಿಗೆ ನಿವೃತ್ತ ಜೀವನದ ಶುಭಾಶಯಗಳು.

ಶ್ರೀಮತಿ ಭಾಗೀರಥಿ
ಮುಖ್ಯ ಶಿಕ್ಷಕರು.
ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಕೇಪು


ದಿನಾಂಕ 10.01.1966 ರಂದು ಜನಿಸಿದ ಇವರು ದಿನಾಂಕ 01.06.1993 ರಂದು ಸೇವೆಗೆ ಸೇರಿದ ಇವರು ಸುಮಾರು 32 ವರ್ಷಗಳ ಕಾಲ ಸೇವೆ ಸಲ್ಲಿಸಿದ ಇವರು ಈ ತಿಂಗಳು ಸೇವೆಯಿಂದ ನಿವೃತ್ತರಾಗುತ್ತಿದ್ದಾರೆ.ಇವರಿಗೆ ನಿವೃತ್ತ ಜೀವನದ ಶುಭಾಶಯಗಳು.

ಶ್ರೀಮತಿ ಉಮಾವತಿ ವಿ ಎಸ್
ಸಹ ಶಿಕ್ಷಕರು
ದ.ಕ.ಜಿ.ಪಂ.ಹಿ.ಪ್ರಾ.ಶಾಲೆ
ನಲ್ಕೆಮಾರ್ ಬಂಟ್ವಾಳ ತಾಲೂಕು.


ದಿನಾಂಕ 27.01.1966 ರಂದು ಜನಿಸಿದ ಇವರು,ದಿನಾಂಕ 18.02.1999 ರಂದು ಸೇವೆಗೆ ಸೇರಿದ ಇವರು ಸುಮಾರು 27 ವರ್ಷಗಳ ಕಾಲ ಸೇವೆ ಸಲ್ಲಿಸಿ ಈ ತಿಂಗಳು ಸೇವೆಯಿಂದ ನಿವೃತ್ತರಾಗುತ್ತಿದ್ದಾರೆ.ಇವರಿಗೆ ನಿವೃತ್ತ ಜೀವನದ ಶುಭಾಶಯಗಳು.

ಶ್ರೀಮತಿ ಶೋಭಾ ಎನ್
ಸಹ ಶಿಕ್ಷಕರು
ಸ.ಹಿ.ಪ್ರಾ.ಶಾಲೆ ಸುರಿಬೈಲು


ಶ್ರೀ ನಾರಾಯಣ ರೈ ಹಾಗೂ ಶ್ರೀಮತಿ ದೇವಕಿ ದಂಪತಿಗಳ ಪುತ್ರಿಯಾಗಿ ದಿನಾಂಕ 20.01.1966 ರಂದು ಜನಿಸಿದ ಇವರು ದಿನಾಂಕ 08.01.2001 ರಲ್ಲಿ ಸ.ಹಿ.ಪ್ರಾ.ಶಾಲೆ ದರಸಗುಪ್ಪೆ ಮಂಡ್ಯ ಜಿಲ್ಲೆ ಇಲ್ಲಿ ಸೇವೆಗೆ ಸೇರಿದ ಇವರು ಇಲ್ಲಿ ಸೇವೆ ಸಲ್ಲಿಸಿ ನಂತರ ದಿನಾಂಕ 22.07.2005 ರಂದು ಸ.ಹಿ.ಪ್ರಾ.ಶಾಲೆ ಸೆರ್ಕಳ ಬಂಟ್ವಾಳ ತಾಲೂಕು ಇಲ್ಲಿಗೆ ವರ್ಗಾವಣೆ ಗೊಂಡು ಇಲ್ಲಿ ಸೇವೆ ಸಲ್ಲಿಸಿ ನಂತರ ದಿನಾಂಕ 01.08.2010 ರಂದು ಸ.ಹಿ.ಪ್ರಾ.ಶಾಲೆ ಬೋಳಂತೂರು ಬಂಟ್ವಾಳ ತಾಲೂಕು ಇಲ್ಲಿಗೆ ವರ್ಗಾವಣೆ ಗೊಂಡು ಇಲ್ಲಿ ಸೇವೆ ಸಲ್ಲಿಸಿ ನಂತರ ದಿನಾಂಕ ಸ.ಹಿ.ಪ್ರಾ.ಶಾಲೆ ಬಂಟ್ವಾಳ ಇಲ್ಲಿಗೆ ವರ್ಗಾವಣೆ ಗೊಂಡು ಇಲ್ಲಿ ಸೇವೆ ಸಲ್ಲಿಸಿ ನಂತರ ದಿನಾಂಕ 02.12.2022 ರಂದು ಸ.ಹಿ.ಪ್ರಾ.ಶಾಲೆ ಸುರಿಬೈಲು ಇಲ್ಲಿಗೆ ವರ್ಗಾವಣೆ ಗೊಂಡು ಇಲ್ಲಿ ಸೇವೆ ಸಲ್ಲಿಸಿದ ಇವರು ಈ ತಿಂಗಳು ಸೇವೆಯಿಂದ ನಿವೃತ್ತರಾಗುತ್ತಿದ್ದಾರೆ.ಇವರಿಗೆ ನಿವೃತ್ತ ಜೀವನದ ಶುಭಾಶಯಗಳು.

ಶ್ರೀ ಸುರೇಶ್ ಶೆಟ್ಟಿ ಎಚ್
ದೈಹಿಕ ಶಿಕ್ಷಕರು
ಚಂದಳಿಕೆ ಶಾಲೆ


ಶ್ರೀ ಮುತ್ತಣ್ಣ ಶೆಟ್ಟಿ ಹಾಗೂ ಶ್ರೀಮತಿ ಕಮಲ ದಂಪತಿಗಳ ಪುತ್ರನಾಗಿ ದಿನಾಂಕ 22.01.1966 ರಂದು ಜನಿಸಿದ ಇವರು ಪ್ರಾಥಮಿಕ ಶಿಕ್ಷಣವನ್ನು ದ.ಉ.ಜಿ.ಪಂ.ಹಿ.ಪ್ರಾ.ಶಾಲೆ ಚೆನ್ನೈತ್ತೋಡಿ ಇಲ್ಲಿ ಪೂರೈಸಿ ಪ್ರೌಢ ಶಿಕ್ಷಣ ಹಾಗೂ ಪದವಿಪೂರ್ವ ಶಿಕ್ಷಣವನ್ನು ಸರಕಾರಿ ಜ್ಯೂನಿಯರ್ ಕಾಲೇಜು ವಾಮದಪದವು ಇಲ್ಲಿ ಪೂರೈಸಿ ದೈಹಿಕ ಶಿಕ್ಷಣ ತರಬೇತಿಯನ್ನು ಎಮ್ ಕೆ ಅನಂತರಾಜ್ ದೈಹಿಕ ಶಿಕ್ಷಣ ತರಬೇತಿ ಕಾಲೇಜು ಮೂಡುಬಿದಿರೆ ಇಲ್ಲಿ ಪೂರೈಸಿ ದಿನಾಂಕ 08.08.1988 ರಲ್ಲಿ ಜ್ಯೂನಿಯರ್ ಕಾಲೇಜು ವಾಮದಪದವು ಇಲ್ಲಿ ಸೇವೆಗೆ ಸೇರಿದ ಇವರು ಇಲ್ಲಿ ಸೇವೆ ಸಲ್ಲಿಸಿ ನಂತರ ದಿನಾಂಕ 30.07.1994 ರಂದು ಸ.ಹಿ.ಪ್ರಾ.ಶಾಲೆ ಕೇಪು ಬಂಟ್ವಾಳ ತಾಲೂಕು ಇಲ್ಲಿಗೆ ವರ್ಗಾವಣೆ ಗೊಂಡು ಇಲ್ಲಿ ಸೇವೆ ಸಲ್ಲಿಸಿ ನಂತರ ದಿನಾಂಕ 06.06.2019 ರಂದು ಸ.ಹಿ.ಪ್ರಾ.ಶಾಲೆ ದಡ್ಡಲಕಾಡು ಇಲ್ಲಿಗೆ ವರ್ಗಾವಣೆ ಗೊಂಡು ಇಲ್ಲಿ ಸೇವೆ ಸಲ್ಲಿಸಿ ನಂತರ ದಿನಾಂಕ 30.10.2019 ರಂದು ಗಾಂಧಿನಗರ ಶಾಲೆ ಮಂಗಳೂರು ಇಲ್ಲಿಗೆ ವರ್ಗಾವಣೆ ಗೊಂಡು ಇಲ್ಲಿ ಸೇವೆ ಸಲ್ಲಿಸಿ ನಂತರ ದಿನಾಂಕ 20.07.2023 ರಂದು ಚಂದಳಿಕೆ ಶಾಲೆಗೆ ವರ್ಗಾವಣೆ ಗೊಂಡು ಇಲ್ಲಿ ಸೇವೆ ಸಲ್ಲಿಸಿದ ಇವರು ಈ ತಿಂಗಳು ಸೇವೆಯಿಂದ ನಿವೃತ್ತರಾಗುತ್ತಿದ್ದಾರೆ.ಇವರಿಗೆ ನಿವೃತ್ತ ಜೀವನದ ಶುಭಾಶಯಗಳು.

ಶ್ರೀಯುತ ವೆಂಕಟೇಶ್ ಎನ್
ಸ.ಮಾ.ಹಿ.ಪ್ರಾ.ಶಾಲೆ ಬೆಳುವಾಯಿ ಚರ್ಚ್


ಮಂಗಳೂರು ತಾಲೂಕಿನ ನಾರಳ ಗಂಜಿಮಠ ನಿವಾಸದ ಶ್ರೀ ಎನ್ ಲಕ್ಷ್ಮಿನಾರಾಯಣ ಆಚಾರ್ಯ ದಂಪತಿಗಳ ಪುತ್ರನಾಗಿ ದಿನಾಂಕ 19.01.1966 ರಂದು ಜನಿಸಿದ ಇವರು ಪ್ರಾಥಮಿಕ ಶಿಕ್ಷಣವನ್ನು ಮಳಲಿ ಶಾಲೆಯಲ್ಲಿ ಪೂರೈಸಿ ಪ್ರೌಢ ಶಿಕ್ಷಣವನ್ನು ರೋಸಾಮಿಸ್ತಿಕಾ ಕಿನ್ನಿಕಂಬಳ ಇಲ್ಲಿ ಪೂರೈಸಿ ಶಿಕ್ಷಕ ತರಬೇತಿಯನ್ನು ಜಿಲ್ಲಾ ಶಿಕ್ಷಕ ತರಬೇತಿ ಸಂಸ್ಥೆ ಕೊಡಿಯಾಲ್ ಬೈಲ್ ಇಲ್ಲಿ ಪೂರೈಸಿ ದಿನಾಂಕ 26.07.1994 ರಂದು ಸ.ಹಿ.ಪ್ರಾ.ಶಾಲೆ ಬಾರ್ಯ ಇಲ್ಲಿ ಸೇವೆಗೆ ಸೇರಿದ ಇವರು ಇಲ್ಲಿ ಸೇವೆ ಸಲ್ಲಿಸಿ ನಂತರ ಸ.ಹಿ.ಪ್ರಾ.ಶಾಲೆ ಕೊರಂಜ ಗೇರುಕಟ್ಟೆ ಇಲ್ಲಿಗೆ ವರ್ಗಾವಣೆ ಗೊಂಡು ಇಲ್ಲಿ ಸೇವೆ ಸಲ್ಲಿಸಿ ನಂತರ ಸ.ಹಿ.ಪ್ರಾ.ಶಾಲೆ ಪೆರಿಂಜೆ ಇಲ್ಲಿಗೆ ವರ್ಗಾವಣೆ ಗೊಂಡು ಇಲ್ಲಿ ಸೇವೆ ಸಲ್ಲಿಸಿದ ಇವರು ದಿನಾಂಕ 12.05.2022 ರಂದು ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿ ಸ.ಉ.ಪ್ರಾ.ಶಾಲೆ ಹೊಸಂಗಡಿ ಇಲ್ಲಿ ಸೇವೆ ಸಲ್ಲಿಸಿದ ಇವರು ನಂತರ ಸ ಮಾ.ಹಿ.ಪ್ರಾ.ಶಾಲೆ ಬೆಳುವಾಯಿ ಚರ್ಚ್ ಇಲ್ಲಿಗೆ ವರ್ಗಾವಣೆ ಗೊಂಡು ಇಲ್ಲಿ ಸೇವೆ ಸಲ್ಲಿಸಿದ ಇವರು ಈ ತಿಂಗಳು ಸೇವೆಯಿಂದ ನಿವೃತ್ತರಾಗುತ್ತಿದ್ದಾರೆ.ಇವರಿಗೆ ನಿವೃತ್ತ ಜೀವನದ ಶುಭಾಶಯಗಳು.

ಶ್ರೀಮತಿ ಹೀರಾ ಕೃಷ್ಣ ನಾಯ್ಕ
ಸ.ಕಿ.ಪ್ರಾ.ಶಾಲೆ ಹಳೆಯಂಗಡಿ ಮಂಗಳೂರು


ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿ ನಂತರ ಸ.ಕಿ.ಪ್ರಾ.ಶಾಲೆ ಹಳೆಯಂಗಡಿ ಮಂಗಳೂರು ಇಲ್ಲಿಗೆ ವರ್ಗಾವಣೆ ಗೊಂಡು ಇಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿದ ಇವರು ಈ ತಿಂಗಳು ಸೇವೆಯಿಂದ ನಿವೃತ್ತರಾಗುತ್ತಿದ್ದಾರೆ.ಇವರಿಗೆ ನಿವೃತ್ತ ಜೀವನದ ಶುಭಾಶಯಗಳು.

ಶ್ರೀಮತಿ ಅನ್ನಪೂರ್ಣೇಶ್ವರಿ ಕೆ
ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಕಾನಕಟ್ಲ.


ದಿನಾಂಕ 11.11.1998 ರಂದು ಸ.ಕಿ.ಪ್ರಾ.ಶಾಲೆ ಕವತ್ತಾರು ಇಲ್ಲಿ ಸೇವೆಗೆ ಸೇರಿದ ಇವರು ಇಲ್ಲಿ ಸೇವೆ ಸಲ್ಲಿಸಿ ನಂತರ ಸ.ಹಿ.ಪ್ರಾ.ಶಾಲೆ ಪದ್ಮನೂರು ಇಲ್ಲಿಗೆ ವರ್ಗಾವಣೆ ಗೊಂಡು ಇಲ್ಲಿ ಸೇವೆ ಸಲ್ಲಿಸಿ ನಂತರ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಪಡುಪಣಂಬೂರು ಇಲ್ಲಿಗೆ ವರ್ಗಾವಣೆ ಗೊಂಡು ಇಲ್ಲಿ ಸೇವೆ ಸಲ್ಲಿಸಿ ನಂತರ ದ.ಕ.ಜಿ.ಪಂಹಿ.ಪ್ರಾ.ಶಾಲೆ ಕಾನಕಟ್ಲ ಇಲ್ಲಿಗೆ ವರ್ಗಾವಣೆ ಗೊಂಡು ಇಲ್ಲಿ ಸೇವೆ ಸಲ್ಲಿಸಿದ ಇವರು ಈ ತಿಂಗಳು ಸೇವೆಯಿಂದ ನಿವೃತ್ತರಾಗುತ್ತಿದ್ದಾರೆ.ಇವರಿಗೆ ನಿವೃತ್ತ ಜೀವನದ ಶುಭಾಶಯಗಳು.

ಶ್ರೀಮತಿ ಡೋರಾ ಗ್ಲಾಡಿಸ್ ಸಿಕ್ವೇರಾ
ಪ್ರಭಾರ ಮುಖ್ಯ ಶಿಕ್ಷಕರು.
ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಕಾನಕಟ್ಲಾ.


ದಿನಾಂಕ 13.01.1996 ರಂದು ಸೇವೆಗೆ ಸೇರಿದ ಇವರು 30 ವರ್ಷಗಳ ಕಾಲ ಸೇವೆ ಸಲ್ಲಿಸಿದ ಇವರು ಈ ತಿಂಗಳು ಸೇವೆಯಿಂದ ನಿವೃತ್ತರಾಗುತ್ತಿದ್ದಾರೆ.ಇವರಿಗೆ ನಿವೃತ್ತ ಜೀವನದ ಶುಭಾಶಯಗಳು.

ಶ್ರೀಮತಿ ಇವೆಲಿನ್ ಲೋಬೋ
ಸ ಹಿ ಪ್ರಾ ಶಾಲೆ ಕುತ್ತೆತ್ತೂರು ಮಂಗಳೂರು ಉತ್ತರ


ಇವರು ಈ ತಿಂಗಳು ಸೇವೆಯಿಂದ ನಿವೃತ್ತಿ ಹೊಂದುತ್ತಿದ್ದಾರೆ. ಇವರಿಗೆ ನಿವೃತ್ತ ಜೀವನದ ಶುಭಾಶಯಗಳು.

ಶ್ರೀಮತಿ ಸಿಂತಿಯಾ ರೀಟಾ ಡಿಕೊಸ್ತಾ
ಸಹ ಶಿಕ್ಷಕರು
ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಹೊಸಬೆಟ್ಟು ಮಂಗಳೂರು ಉತ್ತರ.


ಶಿಕ್ಷಕರಾಗಿ ಸೇವೆ ಸಲ್ಲಿಸಿದ ಇವರು ಈ ತಿಂಗಳು ಸೇವೆಯಿಂದ ನಿವೃತ್ತರಾಗುತ್ತಿದ್ದಾರೆ.ಇವರಿಗೆ ನಿವೃತ್ತ ಜೀವನದ ಶುಭಾಶಯಗಳು.

ಶ್ರೀ ಸೀತಾರಾಮ ಕೆ ಜಿ
ಮುಖ್ಯ ಶಿಕ್ಷಕರು
ಸ ಹಿ.ಪ್ರಾ.ಶಾಲೆ ಪಳ್ಳತ್ತಾರು.


ಸುಳ್ಯ ತಾಲೂಕು ಮುರುಳ್ಯ ಗ್ರಾಮದ ಕಳತ್ತಜೆ ಕೆ ಗೋಪಣ್ಣ ಗೌಡ ಹಾಗೂ ಶ್ರೀಮತಿ ಪದ್ಮಾವತಿ ದಂಪತಿಗಳ ಪುತ್ರನಾಗಿ ದಿನಾಂಕ 25.01.1966 ರಂದು ಜನಿಸಿದ ಇವರು ದಿನಾಂಕ 28.07.1994 ರಂದು ಸ.ಹಿ.ಪ್ರಾ.ಶಾಲೆ ವೀರಮಂಗಲ ಇಲ್ಲಿ ಸೇವೆಗೆ ಸೇರಿದ ಇವರು ಇಲ್ಲಿ ಸೇವೆ ಸಲ್ಲಿಸಿ ನಂತರ ಸ.ಉ.ಪ್ರಾ.ಶಾಲೆ ಕುದ್ಮಾರು ಇಲ್ಲಿಗೆ ವರ್ಗಾವಣೆ ಗೊಂಡು ಇಲ್ಲಿ ಸೇವೆ ಸಲ್ಲಿಸಿ ನಂತರ ಸ.ಹಿ.ಪ್ರಾ.ಶಾಲೆ ನಾಣಿಲ ಇಲ್ಲಿಗೆ ವರ್ಗಾವಣೆ ಗೊಂಡು ಇಲ್ಲಿ ಸೇವೆ ಸಲ್ಲಿಸಿ ನಂತರ ಸ.ಉ.ಪ್ರಾ.ಶಾಲೆ ಕುದ್ಮಾರು ಇಲ್ಲಿಗೆ ವರ್ಗಾವಣೆ ಗೊಂಡು ಇಲ್ಲಿ ಸೇವೆ ಸಲ್ಲಿಸಿದ ಇವರು ದಿನಾಂಕ 09.05.2022 ರಲ್ಲಿ ಸ.ಹಿ.ಪ್ರಾ.ಶಾಲೆ ಪಳ್ಳತ್ತಾರು ಇಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಇವರು ಈ ತಿಂಗಳು ಸೇವೆಯಿಂದ ನಿವೃತ್ತರಾಗುತ್ತಿದ್ದಾರೆ.ಇವರಿಗೆ ನಿವೃತ್ತ ಜೀವನದ ಶುಭಾಶಯಗಳು.

ಶ್ರೀಯುತ ದಾಮೋದರ

ಸುಳ್ಯ ತಾಲೂಕು ಎಡಮಂಗಲ


ಗ್ರಾಮದ ಕಂಟಾಜೆ ಶ್ರೀ ಜೋಗಪ್ಪ ಗೌಡ ಹಾಗೂ ಶ್ರೀಮತಿ ಗಂಗಮ್ಮ ದಂಪತಿಗಳ ಪುತ್ರನಾಗಿ ದಿನಾಂಕ 20.01.1966 ರಂದು ಜನಿಸಿದ ಇವರು, ಪ್ರಾಥಮಿಕ ಶಿಕ್ಷಣವನ್ನು ಸ.ಹಿ.ಪ್ರಾ.ಶಾಲೆ ಎಡಮಂಗಲ ಇಲ್ಲಿ ಪೂರೈಸಿ ಪ್ರೌಢ ಶಿಕ್ಷಣವನ್ನು ಸ.ಪ್ರೌಢ ಶಾಲೆ ಪಂಜ ಇಲ್ಲಿ ಪೂರೈಸಿ, ಪದವಿ ಪೂರ್ವ ಶಿಕ್ಷಣವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಪಂಜ ಇಲ್ಲಿ ಪೂರೈಸಿ ಪದವಿ ಶಿಕ್ಷಣವನ್ನು ಸಂತ ಫಿಲೋಮಿನಾ ಕಾಲೇಜು ಪುತ್ತೂರು ಇಲ್ಲಿ ಪೂರೈಸಿ ಶಿಕ್ಷಕ ತರಬೇತಿಯನ್ನು ಶಿಕ್ಷಕ ತರಬೇತಿ ಸಂಸ್ಥೆ ಕೊಡಿಯಾಲ್ ಬೈಲ್ ಮಂಗಳೂರು ಇಲ್ಲಿ ಪೂರೈಸಿ ದಿನಾಂಕ 17.01.1996 ರಂದು ಸ.ಹಿ.ಪ್ರಾ.ಶಾಲೆ ಗಂಡಿಬಾಗಿಲು ಇಲ್ಲಿ ಸೇವೆಗೆ ಸೇರಿದ ಇವರು ಇಲ್ಲಿ ಸೇವೆ ಸಲ್ಲಿಸಿ ನಂತರ ಸ.ಹಿ.ಪ್ರಾ.ಶಾಲೆ ಬೆಳಂದೂರು ಇಲ್ಲಿಗೆ ವರ್ಗಾವಣೆ ಗೊಂಡು ಇಲ್ಲಿ ಸೇವೆ ಸಲ್ಲಿಸಿ ನಂತರ ಸ.ಹಿ.ಪ್ರಾ.ಶಾಲೆ ಪಳ್ಳತ್ತಾರು ಇಲ್ಲಿಗೆ ವರ್ಗಾವಣೆ ಗೊಂಡು ಇಲ್ಲಿ ಸೇವೆ ಸಲ್ಲಿಸಿ ನಂತರ ದಿನಾಂಕ 08.04.2004 ರಂದು
ಇಲ್ಲಿಗೆ ವರ್ಗಾವಣೆ ಗೊಂಡು ಇಲ್ಲಿ ಸೇವೆ ಸಲ್ಲಿಸಿದ ಇವರು ಈ ತಿಂಗಳು ಸೇವೆಯಿಂದ ನಿವೃತ್ತರಾಗುತ್ತಿದ್ದಾರೆ.ಇವರಿಗೆ ನಿವೃತ್ತ ಜೀವನದ ಶುಭಾಶಯಗಳು.

ಶ್ರೀಮತಿ ರಾಮಕ್ಕ
ಪ್ರಭಾರ ಮುಖ್ಯ ಶಿಕ್ಷಕರು
ಸ.ಹಿ.ಪ್ರಾ.ಶಾಲೆ ಅಮೈಮಡಿಯಾರು.


ಶಿಕ್ಷಕರಾಗಿ ಸೇವೆ ಸಲ್ಲಿಸಿದ ಇವರು ಈ ತಿಂಗಳು ಸೇವೆಯಿಂದ ನಿವೃತ್ತರಾಗುತ್ತಿದ್ದಾರೆ.ಇವರಿಗೆ ನಿವೃತ್ತ ಜೀವನದ ಶುಭಾಶಯಗಳು.

ಶ್ರೀಮತಿ ಲಲಿತಾ ಕುಮಾರಿ ಎಸ್
ಸಹ ಶಿಕ್ಷಕರು
ಸ.ಕಿ.ಪ್ರಾ.ಶಾಲೆ ಬೆಂಡೋಡಿ ಕೊಲ್ಲಮೊಗ್ರು ಸುಳ್ಯ ತಾಲೂಕು.


ಪುತ್ತೂರು ತಾಲೂಕಿನ ಕೊಯಿಲ ಗ್ರಾಮದ ಸಬಳೂರು ಶ್ರೀ ಕುಕ್ಕಪ್ಪ ಗೌಡ ಹಾಗೂ ಶ್ರೀಮತಿ ಲಿಂಗಮ್ಮ ದಂಪತಿಗಳ ಪುತ್ರಿಯಾಗಿ ದಿನಾಂಕ 01.02.1966 ರಂದು ಜನಿಸಿದ ಇವರು ಪ್ರಾಥಮಿಕ ಶಿಕ್ಷಣವನ್ನು ಸ.ಕಿ.ಪ್ರಾ.ಶಾಲೆ ಸಬಳೂರು ಹಾಗೂ ಸ.ಹಿ.ಪ್ರಾ.ಶಾಲೆ ಆತೂರು ಇಲ್ಲಿ ಪೂರೈಸಿ ಪ್ರೌಢ ಶಿಕ್ಷಣವನ್ನು ರಾಮಕುಂಜೇಶ್ವರ ಪ್ರೌಢಶಾಲೆ ಇಲ್ಲಿ ಪೂರೈಸಿ ಶಿಕ್ಷಕ ತರಬೇತಿಯನ್ನು ರೋಸಾ ಮಿಸ್ತಿಕಾ ಮಹಿಳಾ ಶಿಕ್ಷಕ ತರಬೇತಿ ಸಂಸ್ಥೆ ಮಂಗಳೂರು ಇಲ್ಲಿ ಪೂರೈಸಿ ದಿನಾಂಕ 06.08.1994 ರಂದು ಸ.ಹಿ.ಪ್ರಾ.ಶಾಲೆ ಕಂದ್ರಪ್ಪಾಡಿ ಇಲ್ಲಿ ಸೇವೆಗೆ ಸೇರಿದ ಇವರು ಇಲ್ಲಿ ಸೇವೆ ಸಲ್ಲಿಸಿ ನಂತರ ದಿನಾಂಕ 22.06.1995 ರಂದು ಸ.ಹಿ.ಪ್ರಾ.ಶಾಲೆ ಬಂಗ್ಲೆ ಗುಡ್ಡೆ ಕೊಲ್ಲಮೊಗ್ರು ಇಲ್ಲಿಗೆ ವರ್ಗಾವಣೆ ಗೊಂಡು ಇಲ್ಲಿ ಸೇವೆ ಸಲ್ಲಿಸಿ ನಂತರ ಸ.ಕಿ.ಪ್ರಾ.ಶಾಲೆ ಬೆಂಡೋಡಿ ಇಲ್ಲಿಗೆ ವರ್ಗಾವಣೆ ಗೊಂಡು ಇಲ್ಲಿ ಸೇವೆ ಸಲ್ಲಿಸಿದ ಇವರು ಈ ತಿಂಗಳು ಸೇವೆಯಿಂದ ನಿವೃತ್ತರಾಗುತ್ತಿದ್ದಾರೆ.ಇವರಿಗೆ ನಿವೃತ್ತ ಜೀವನದ ಶುಭಾಶಯಗಳು.

ನಿರಂತರ ಸೇವೆಯ ಮೂಲಕ ಅನೇಕ ವಿದ್ಯಾರ್ಥಿಗಳ ಬಾಳಿನಲ್ಲಿ ಗೌರವದ ಸ್ಥಾನ ಪಡೆದ ತಮ್ಮೆಲ್ಲರ ನಿವೃತ್ತ ಜೀವನ ಸುಖಮಯವಾಗಿರಲಿ ದೇವರು ಆಯುರಾರೋಗ್ಯ ಐಶ್ವರ್ಯ ನೆಮ್ಮದಿ ಕರುಣಿಸಲಿ ಎಂದು ಜಿಲ್ಲೆಯ ಸಮಸ್ತ ಶಿಕ್ಷಕರ ಪರವಾಗಿ ಹಾರೈಸುತ್ತಿದ್ದೇವೆ.

WhatsApp Group Join Now
Telegram Group Join Now

Join WhatsApp

Join Now

Join Telegram

Join Now

Leave a Comment