ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ನಿವೃತ್ತರಾದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವಿವರ ಇಲ್ಲಿದೆ ಗುರುಭ್ಯೋ ನಮಃ

WhatsApp Group Join Now
Telegram Group Join Now

ನಿಮ್ಮ ನಿವೃತ್ತಿ ಜೀವನ ಸುಖಕರವಾಗಲಿ

ದಶಕಗಳ ಕಾಲ ಸಾರ್ಥಕ ಸೇವೆಗೈದು ಅನೇಕ ವಿದ್ಯಾರ್ಥಿಗಳ ಬಾಳಿನಲ್ಲಿ ಅಕ್ಷರ ದೀಪವ ಬೆಳಗಿ ಈ ತಿಂಗಳು ಸೇವೆಯಿಂದ ನಿವೃತ್ತರಾಗುತ್ತಿರುವ ಜಿಲ್ಲೆಯ ಶಿಕ್ಷಕರ ಪರಿಚಯವನ್ನು ತಮ್ಮ ಮುಂದಿಡಲು ಹೆಮ್ಮೆ ಪಡುತ್ತಿದ್ದೇವೆ.

IMG 20230930 WA0088

ಶ್ರೀ ಶೇಷಪ್ಪ ಗೌಡ
ಮುಖ್ಯ ಶಿಕ್ಷಕರು.
ಸ.ಹಿ.ಪ್ರಾ.ಶಾಲೆ ಹರಿಹರ ಪಲ್ಲತ್ತಡ್ಕ.
ಸುಳ್ಯ ತಾಲೂಕು

ಕಡಬ ತಾಲೂಕು ಏನೆಕಲ್ಲು ಗ್ರಾಮದ ಗೋವಿಂದ ಗೌಡ ಹಾಗೂ ಶ್ರೀಮತಿ ಜಾಕಮ್ಮ ದಂಪತಿಗಳ ತೃತೀಯ ಪುತ್ರನಾಗಿ ದಿನಾಂಕ 04.09.1963 ರಲ್ಲಿ ಜನಿಸಿದ ಇವರು ಪ್ರಾಥಮಿಕ ಶಿಕ್ಷಣವನ್ನು ಸ.ಹಿ.ಪ್ರಾ.ಶಾಲೆ ಏನೆಕಲ್ಲು ಹಾಗೂ ಪ್ರೌಢ ಶಿಕ್ಷಣವನ್ನು ಸುಬ್ರಹ್ಮಣ್ಯದಲ್ಲಿ ಪೂರೈಸಿ ಶಿಕ್ಷಕ ತರಬೇತಿಯನ್ನು ಶಿಕ್ಷಕ ತರಬೇತಿ ಸಂಸ್ಥೆ ಕೊಡಿಯಾಲ್ ಬೈಲ್ ಮಂಗಳೂರು ಇಲ್ಲಿ ಪೂರೈಸಿ ದಿನಾಂಕ 08.02.1990 ರಲ್ಲಿ ಸ.ಕಿ.ಪ್ರಾ.ಶಾಲೆ ಕನ್ಯಾನ ಮಂಡೆಕೋಲು ಸುಳ್ಯ ತಾಲೂಕು ಇಲ್ಲಿ ಸೇವೆಗೆ ಸೇರಿದ ಇವರು ಇಲ್ಲಿ ಸೇವೆ ಸಲ್ಲಿಸಿ ನಂತರ ಮೆಟ್ಟಿನಡ್ಕ, ಮಂಡೆಕೋಲು,ನೇಲ್ಯಡ್ಕ,ಬಾನಡ್ಕ, ಹಾಗೂ ಸ.ಕಿ.ಪ್ರಾ.ಶಾಲೆ ಕಮಿಲ ಇಲ್ಲಿ ಸೇವೆ ಸಲ್ಲಿಸಿದ ಇವರು ದಿನಾಂಕ 02.10.2014 ರಲ್ಲಿ ಪದೋನ್ನತಿ ಗೊಂಡು ಮುಖ್ಯ ಶಿಕ್ಷಕರಾಗಿ ಸ.ಹಿ.ಪ್ರಾ.ಶಾಲೆ ಹರಿಹರ ಪಲ್ಲತ್ತಡ್ಕ ಇಲ್ಲಿ ಸೇವೆ ಸಲ್ಲಿಸಿದ ಇವರು ಈ ತಿಂಗಳು ಸೇವೆಯಿಂದ ನಿವೃತ್ತರಾಗುತ್ತಿದ್ದಾರೆ.ಇವರಿಗೆ ನಿವೃತ್ತ ಜೀವನದ ಶುಭಾಶಯಗಳು.

IMG 20230930 WA0012

ಶ್ರೀಮತಿ ಕೃಷ್ಣವೇಣಿ
ದ.ಕ.ಜಿ.ಪಂ.ಮಾ.ಹಿ.ಪ್ರಾ.ಶಾಲೆ ಚೇಳ್ಯಾರು
ಮಂಗಳೂರು ಉತ್ತರ

ದಿನಾಂಕ 26.11.1988 ರಲ್ಲಿ ಸೈಂಟ್ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆ ಹುಣ್ಸೂರು ಮೈಸೂರು, ಇಲ್ಲಿ ಸೇವೆಗೆ ಸೇರಿದ ಇವರು 7 ವರ್ಷಗಳ ಕಾಲ ಸೇವೆ ಸಲ್ಲಿಸಿ ನಂತರ ವರ್ಗಾವಣೆ ಗೊಂಡು ಸ.ಕಿ.ಪ್ರಾ.ಶಾಲೆ ಕೊಡಪಾಡಿ ಕುಂದಾಪುರ ಇಲ್ಲಿ 5 ವರ್ಷಗಳ ಕಾಲ ಸೇವೆ ಸಲ್ಲಿಸಿ ನಂತರ ದ.ಕ.ಜಿ.ಪಂ.ಸ.ಮಾ.ಹಿ.ಪ್ರಾ.ಶಾಲೆ ಚೇಳ್ಯಾರು ಇಲ್ಲಿಗೆ ವರ್ಗಾವಣೆ ಗೊಂಡು ಇಲ್ಲಿ ಸುಮಾರು 30 ವರ್ಷಗಳ ಕಾಲ ಸೇವೆ ಸಲ್ಲಿಸಿ ಈ ತಿಂಗಳು ಸೇವೆಯಿಂದ ನಿವೃತ್ತರಾಗುತ್ತಿದ್ದಾರೆ.ಇವರಿಗೆ ನಿವೃತ್ತ ಜೀವನದ ಶುಭಾಶಯಗಳು.

IMG 20230930 WA0010

ಶ್ರೀಮತಿ ಶಕುಂತಲಾ ದೇವಿ ಕೆ
ಸಹ ಶಿಕ್ಷಕರು
ಕರ್ನಾಟಕ ಪಬ್ಲಿಕ್ ಸ್ಕೂಲ್ ಕನ್ಯಾನ
ಬಂಟ್ವಾಳ ತಾಲೂಕು.

ಮಂಗಳೂರು ತಾಲೂಕಿನ ಕೊಂಚಾಡಿ ದೇರೆಬೈಲು ಇಲ್ಲಿಯ ಪುಟ್ಟಣ್ಣ ಭಟ್ ಕೆ. ಮತ್ತು ಶ್ರೀಮತಿ ರಮಾದೇವಿ ದಂಪತಿಗಳ ಪುತ್ರಿಯಾಗಿ ಜನಿಸಿದ ಇವರು ಪ್ರಾಥಮಿಕ ಶಿಕ್ಷಣವನ್ನು ಶ್ರೀ ರಾಮ ಆಶ್ರಮ ಶಾಲೆ ಕೊಂಚಾಡಿ ಹಾಗೂ ಪ್ರೌಢ ಶಿಕ್ಷಣವನ್ನು ಬೆಸೆಂಟ್ ರಾಷ್ಟ್ರೀಯ ಪ್ರೌಢ ಶಾಲೆ ಮಂಗಳೂರು ಇಲ್ಲಿ ಪೂರೈಸಿ ಶಿಕ್ಷಕ ತರಬೇತಿಯನ್ನು ಸರಕಾರಿ ಶಿಕ್ಷಕರ ತರಬೇತಿ ಸಂಸ್ಥೆ ಬಲ್ಮಠ ಮಂಗಳೂರು ಇಲ್ಲಿ ಪೂರೈಸಿ, ಹಿಂದಿ ಭಾಷೆಯಲ್ಲಿ ಹಿಂದಿ ಪ್ರವೀಣ ಪದವಿಯನ್ನು ಪಡೆದ ಇವರು, ದಿನಾಂಕ 12.01.1996 ರಲ್ಲಿ ಸ.ಹಿ.ಪ್ರಾ.ಶಾಲೆ ಅಳಿಕೆ ಮೂಡುಪೆರಾರಿ ಮಂಗಳೂರು ಇಲ್ಲಿ ಸೇವೆಗೆ ಸೇರಿ ನಂತರ ದಿನಾಂಕ 15.10.1999 ರಲ್ಲಿ ವರ್ಗಾವಣೆ ಗೊಂಡು ಕರ್ನಾಟಕ ಪಬ್ಲಿಕ್ ಸ್ಕೂಲ್ ಕನ್ಯಾನ ಇಲ್ಲಿ ಸೇವೆ ಸಲ್ಲಿಸಿ ಈ ತಿಂಗಳು ಸೇವೆಯಿಂದ ನಿವೃತ್ತರಾಗುತ್ತಿದ್ದಾರೆ. ಇವರಿಗೆ ನಿವೃತ್ತ ಜೀವನದ ಶುಭಾಶಯಗಳು.

IMG 20230930 WA0089

ಶ್ರೀಮತಿ ಜಯಲಕ್ಷ್ಮಿ ಕೆ
ಮುಖ್ಯೋಪಾಧ್ಯಾಯರು
ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಮಣಿನಾಲ್ಕೂರು
ಬಂಟ್ವಾಳ ತಾಲೂಕು

ಕಾಸರಗೋಡು ಜಿಲ್ಲೆಯ ಪ್ರಸಿದ್ಧ ಚೆಂಡೆ ವಾದಕರಾದ ಶ್ರೀ ವೆಂಕಟರಮಣ ಮದ್ಲೆಗಾರ ಮತ್ತು ಶ್ರೀಮತಿ ಕಮಲ ದಂಪತಿಗಳ ಪುತ್ರಿಯಾಗಿ ದಿನಾಂಕ 07.09.1963 ರಲ್ಲಿ ಜನಿಸಿದ ಇವರು ಪ್ರಾಥಮಿಕ ಶಿಕ್ಷಣವನ್ನು ಗಜಾನನ ಹಿರಿಯ ಪ್ರಾಥಮಿಕ ಶಾಲೆ ಈಶ್ವರ ಮಂಗಲ ಹಾಗೂ ಪ್ರೌಢ ಶಿಕ್ಷಣವನ್ನು ಪಂಚಲಿಂಗೇಶ್ವರ ಪ್ರೌಢ ಶಾಲೆ ಈಶ್ವರ ಮಂಗಲ ಇಲ್ಲಿ ಪೂರೈಸಿ ಶಿಕ್ಷಕ ತರಬೇತಿಯನ್ನು ರೋಸಾ ಮಿಸ್ತಿಕಾ ಶಿಕ್ಷಕಿಯರ ತರಬೇತಿ ಸಂಸ್ಥೆ ಮಂಗಳೂರು ಇಲ್ಲಿ ಪೂರೈಸಿ ದಿನಾಂಕ 29.07.1993 ರಂದು ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಆಲಂಪುರಿ ಬಂಟ್ವಾಳ ತಾಲೂಕು ಇಲ್ಲಿ ಸೇವೆಗೆ ಸೇರಿದ ಇವರು ನಂತರ ವರ್ಗಾವಣೆ ಗೊಂಡು ದಿನಾಂಕ 16.03.2006 ರಿಂದ ದಿನಾಂಕ 12.05.2022 ರವರೆಗೆ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ದೇವಸ್ಯ ಮೂಡೂರು ಇಲ್ಲಿ ಸೇವೆ ಸಲ್ಲಿಸಿ ನಂತರ ಮುಖ್ಯ ಶಿಕ್ಷಕಿಯಾಗಿ ಭಡ್ತಿ ಹೊಂದಿ ದಿನಾಂಕ 13.05.2022 ರಿಂದ ದಿನಾಂಕ 30.09.2023 ರವರೆಗೆ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಮಣಿನಾಲ್ಕೂರು ಇಲ್ಲಿ ಸೇವೆ ಸಲ್ಲಿಸಿದ ಇವರು 2002-2003 ನೇ ಸಾಲಿನಲ್ಲಿ ಜನ ಮೆಚ್ಚಿದ ಶಿಕ್ಷಕಿ ಪ್ರಶಸ್ತಿ ಪಡೆದ ಇವರು ಈ ತಿಂಗಳು ಸೇವೆಯಿಂದ ನಿವೃತ್ತರಾಗುತ್ತಿದ್ದಾರೆ. ಇವರಿಗೆ ನಿವೃತ್ತ ಜೀವನದ ಶುಭಾಶಯಗಳು.

ನಿರಂತರ ಸೇವೆಯ ಮೂಲಕ ಅನೇಕ ವಿದ್ಯಾರ್ಥಿಗಳ ಬಾಳಿನಲ್ಲಿ ಗೌರವದ ಸ್ಥಾನ ಪಡೆದ ತಮ್ಮೆಲ್ಲರ ನಿವೃತ್ತ ಜೀವನ ಸುಖಮಯವಾಗಿರಲಿ ದೇವರು ಆಯುರಾರೋಗ್ಯ ಐಶ್ವರ್ಯ ನೆಮ್ಮದಿ ಕರುಣಿಸಲಿ ಎಂದು ಜಿಲ್ಲೆಯ ಸಮಸ್ತ ಶಿಕ್ಷಕರ ಪರವಾಗಿ ಹಾರೈಸುತ್ತಿದ್ದೇವೆ.

WhatsApp Group Join Now
Telegram Group Join Now
Sharing Is Caring:

Leave a Comment