ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯು ರಾಜ್ಯ ಸರ್ಕಾರಿ ನೌಕರರಿಗಾಗಿ ಉಚಿತ ಚಿಕಿತ್ಸೆಯನ್ನುನೀಡಲು ಜ್ಯೋತಿ ಸಂಜೀವಿನಿ ಎಂಬಯೋಜನೆಯನ್ನು ಜಾರಿಗೆ ತಂದಿದೆ. ಜ್ಯೋತಿ ಸಂಜೀವಿನಿ ಯೋಜನೆಯಲ್ಲಿ ಒಂದು ರೂಪಾಯಿ ಕೂಡ ಖರ್ಚು ಆಗದು, ಇದು ಸಂಪೂರ್ಣ ಉಚಿತ. ಈ ಯೋಜನೆ ರಾಜ್ಯ ಸರ್ಕಾರದ ಅತ್ಯುತ್ತಮವಾದ ಯೋಜನೆಗಳಲ್ಲಿ ಒಂದು. ಗಂಭೀರ ಹಾಗೂ ಮಾರಾಣಾಂತಿಕ ಕಾಯಿಲೆಗಳಿಗೆ ತುತ್ತಾದ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಸದಸ್ಯರಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಉತ್ತಮ ಗುಣಮಟ್ಟದ ವೈದ್ಯಕೀಯ ನೆರವನ್ನು ಒದಗಿಸುವುದು ಜ್ಯೋತಿ ಸಂಜೀವಿನಿ ಯೋಜನೆಯ ಮುಖ್ಯ ಉದ್ದೇಶವಾಗಿದೆ. ರಾಜ್ಯದ ಎಲ್ಲ ಸಮುದಾಯ ಆರೋಗ ಕೇಂದ್ರಗಳು,ತಾಲ್ಲೂಕಿ ಸಾರ್ವಜನಿಕ ಆಸ್ಪತ್ರೆಗಳು, ಜಿಲ್ಲಾ ಆಸ್ಪತ್ರೆಗಳು ಹಾಗೂ ನೋಂದಾಯಿತ ಸೂಪರ್
ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ (ನೆಟ್ ವರ್ಕ್ ಆಸ್ಪತ್ರೆಗಳು) ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನ ಆರೋಗ್ಯ ಮಿತ್ರರು ಕಾರ್ಯ ನಿರ್ವಹಿಸಿ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಅವಲಂಭಿತ ಸದಸ್ಯರಿಗೆ ಉಚಿತ ಚಿಕಿತ್ಸೆ ಪಡೆದುಕೊಳ್ಳಲು ಅನುಕೂಲವಾಗುವಂತೆ ಸೂಕ್ತ ಮಾರ್ಗದರ್ಶನ ಹಾಗೂ ಸಹಾಯ ನೀಡುತ್ತಿದ್ದಾರೆ.
ಜ್ಯೋತಿ ಸಂಜೀವಿನಿ ಯೋಜನೆಯ ವಿಡಿಯೋ ಮಾಹಿತಿ.
ಆತ್ಮೀಯರೇ, ಸರಕಾರದ ಮಹತ್ವಾಕಾಂಕ್ಷೆಯ ಆರೋಗ್ಯ ಯೋಜನೆಗಳಾದ ” ಆಯುಷ್ಮಾನ್ ಭಾರತ– ಆರೋಗ್ಯ ಕರ್ನಾಟಕ” ಮತ್ತು ಸರಕಾರಿ ನೌಕರರ ” ಜ್ಯೋತಿ ಸಂಜೀವಿನಿ ಆರೋಗ್ಯ ಯೋಜನೆಯ” ನೆಟ್ವರ್ಕ್ ಆಸ್ಪತ್ರೆಗಳ ಪಟ್ಟಿ” : ದಿ:20/01/2021 ರಲ್ಲಿದ್ದಂತೆ ಲೇಟೆಸ್ಟ್ ಅಪ್ಡೇಟ್ಸ್