ರಾಜ್ಯದ ಪದವಿಪೂರ್ವ ಕಾಲೇಜು ಉಪನ್ಯಾಸಕರುಗಳ ಹುದ್ದೆಗೆ ಬಡ್ತಿ ಹೊಂದಲು ಪ್ರೌಢಶಾಲಾ ಶಿಕ್ಷಕರಿಗೆ ಸ್ನಾತಕೋತ್ತರ ಪದವಿಯಲ್ಲಿ ಶೇ.55 ರಷ್ಟು ಅಂಕಗಳನ್ನು ನಿಗದಿಪಡಿಸಿರುವುದನ್ನು ಪರಿಷ್ಕರಿಸಿ ಕನಿಷ್ಟ ಶೇ.50 ರಷ್ಟು ಅಂಕಗಳನ್ನು ನಿಗದಿಪಡಿಸಲು ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಥವಾ ಕೇಂದ್ರೀಕೃತ ದಾಖಲಾತಿ ಘಟಕ ಅಥವಾ ಕರ್ನಾಟಕ ಲೋಕಸೇವಾ ಆಯೋಗಗಳನ್ನು ಉಪನ್ಯಾಸಕರ ವೃಂದದ ಆಯ್ಕೆ ಪ್ರಾಧಿಕಾರ ಎಂದು ನಿಗದಿಪಡಿಸಲು ಉಪನ್ಯಾಸಕ ವೃಂದದ ನೇರ ನೇಮಕಾತಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ಮಾತ್ರ ಕನಿಷ್ಟ ಶೇಕಡಾ 50 ರಷ್ಟು ಅಂಕಗಳನ್ನು ನಿಗದಿಪಡಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಸ್ತಾವನೆಯನ್ನು ಸಚಿವ ಸಂಪುಟವು ಒಪ್ಪಿದೆ ಎಂದು ಸಚಿವ ಎಚ್.ಕೆ. ಪಾಟೇಲ್ ತಿಳಿಸಿದರು.