---Advertisement---

ಜುಲೈ 10ರ CITU ಮುಷ್ಕರ: ಸರ್ಕಾರಿ ಶಾಲೆಗಳ ಮಧ್ಯಾಹ್ನ ಉಪಾಹಾರ ಯೋಜನೆಗೆ ವ್ಯತ್ಯಯ ಸಾಧ್ಯ – ಶಿಕ್ಷಣ ಇಲಾಖೆ ಮುನ್ನೆಚ್ಚರಿಕೆ ಸೂಚನೆ

By kspstadk.com

Published On:

Follow Us
July 10 CITU Strike
---Advertisement---
WhatsApp Group Join Now
Telegram Group Join Now

ಬೆಂಗಳೂರು, ಜುಲೈ 9: ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (CITU) ವತಿಯಿಂದ ಜುಲೈ 10, 2026ರಂದು ರಾಜ್ಯಾದ್ಯಂತ ಕರೆ ನೀಡಲಾಗಿರುವ ಪ್ರತಿಭಟನೆ ಹಾಗೂ ಮುಷ್ಕರದ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಧ್ಯಾಹ್ನ ಉಪಾಹಾರ (MDM/PM POSHAN) ಯೋಜನೆಗೆ ವ್ಯತ್ಯಯ ಉಂಟಾಗುವ ಸಾಧ್ಯತೆ ಇರುವುದರಿಂದ ಶಿಕ್ಷಣ ಇಲಾಖೆ ಮಹತ್ವದ ಸೂಚನೆಗಳನ್ನು ಹೊರಡಿಸಿದೆ.

ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಹೊರಡಿಸಿರುವ ಆದೇಶದ ಪ್ರಕಾರ, ಯಾವುದೇ ವಿದ್ಯಾರ್ಥಿ ಮಧ್ಯಾಹ್ನದ ಊಟದಿಂದ ವಂಚಿತರಾಗದಂತೆ ಎಲ್ಲಾ ಜಿಲ್ಲಾಧಿಕಾರಿಗಳು, ಉಪನಿರ್ದೇಶಕರು ಹಾಗೂ ಶಾಲಾ ಮುಖ್ಯ ಶಿಕ್ಷಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

ಜಿಲ್ಲಾ ಮಟ್ಟದ ಅಧಿಕಾರಿಗಳು ಮುಷ್ಕರದ ದಿನ ಕೈಗೊಂಡ ಕ್ರಮಗಳು ಹಾಗೂ ಮಧ್ಯಾಹ್ನ ಉಪಾಹಾರ ಯೋಜನೆಯ ಸ್ಥಿತಿಗತಿಗಳ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ನಿರ್ದೇಶಿಸಲಾಗಿದೆ.

ಈ ಆದೇಶವು ಜುಲೈ 10ರಂದು ಯಾವುದೇ ವಿದ್ಯಾರ್ಥಿ ಮಧ್ಯಾಹ್ನದ ಊಟದಿಂದ ವಂಚಿತರಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಹೊರಡಿಸಲಾಗಿದ್ದು, ಎಲ್ಲಾ ಶಾಲೆಗಳು ಹಾಗೂ ಸಂಬಂಧಿತ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.

Google Drive PDF Viewer

WhatsApp Group Join Now
Telegram Group Join Now

Join WhatsApp

Join Now

Join Telegram

Join Now

Related Posts

Leave a Comment