ಸಾಹಿತ್ಯ ಪರಿಷತ್ ONLINE ಮೂಲಕ ಸದಸ್ಯರಾಗಿ

WhatsApp Group Join Now
Telegram Group Join Now

ಸಾಹಿತ್ಯ ಪರಿಷತ್ತಿಗೆ ನೀವೂ ಸದಸ್ಯರಾಗಿ

ಅಜೀವ ಸದಸ್ಯತ್ವ: 250/

ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿ ಮಾಡುವ ಸದುದ್ದೇಶದಿಂದಲೂ, ವಿಶ್ವದ್ಯಾಂತ ಕನ್ನಡವನ್ನು ಒಗ್ಗೂಡಿಸಲು ಹೊರರಾಜ್ಯ, ಕೇಂದ್ರಾಡಳಿತ ಪ್ರದೇಶ ಮತ್ತು ಹೊರದೇಶ ಘಟಕಗಳನ್ನು ಸ್ಥಾಪಿಸುವ ದೃಷ್ಟಿಯಿಂದಲೂ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಪರಿಷತ್ತಿಗೆ ಪ್ರಸ್ತುತ ಐದು ವರ್ಷಗಳ ಈ ಅವಧಿಯಲ್ಲಿ ಒಂದು ಕೋಟಿ ಸದಸ್ಯತ್ವವನ್ನು ಹೊಂದುವ ದೃಷ್ಟಿಯಿಂದ ಶ್ರೀಸಾಮಾನ್ಯನೂ ಸಹ ಸದಸ್ಯತ್ವ ಪಡೆಯಲು ಅನುಕೂಲವಾಗುವಂತೆ ರೂ.500-00 ಗಳಿದ್ದ ಸದಸ್ಯತ್ವ ಶುಲ್ಕವನ್ನು ರೂ. 250-00 ಗಳಿಗೆ ಇಳಿಸಲಾಗಿದೆ. ಜೊತೆಗೆ ಸಾಧಾರಣ ಗುರುತಿನ ಚೀಟಿ ನೀಡಲಾಗುತ್ತಿದ್ದನ್ನು ಬದಲಾಯಿಸಿ, ರೂ. 150-00 ಗಳಿಗೆ ಅತ್ಯಾಧುನಿಕ ತಂತ್ರಾಂಶದ ಚಿಪ್ ವುಳ್ಳ ಸ್ಮಾರ್ಟ್ ಕಾರ್ಡ್ ಅನ್ನು ಗುರುತಿನ ಚೀಟಿಯಾಗಿ ಹೊಸದಾಗಿ ನೋಂದಾಯಿಸುವ ಸದಸ್ಯರಿಗೆ ವಿತರಿಸಲಾಗುತ್ತಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಲು ಇದುವರೆಗೆ ಪರಿಷತ್ತಿನ ಕಚೇರಿಗೆ ಬರಬೇಕಿದ್ದ ಕನ್ನಡಿಗರು, ಇನ್ನುಮುಂದೆ ಮನೆಯಲ್ಲಿಯೇ ಕುಳಿತು, ಸುಲಭವಾಗಿ ಆನ್ಲೈನ್ ಮೂಲಕ ಸದಸ್ಯತ್ವವನ್ನು ಪಡೆಯಲು ಸರಳವಾದ, ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆಧುನಿಕ ಮೊಬೈಲ್ ಆ್ಯಪ್ ಅನ್ನು ಇದೀಗ ಸಿದ್ಧಪಡಿಸಿ, ಮಾನ್ಯ ಮುಖ್ಯಮಂತ್ರಿಗಳಿಂದ ಲೋಕಾರ್ಪಣೆಗೊಳಿಸಲಾಗಿದೆ.

ಈ ಆ್ಯಪ್ ಅನ್ನು ತಮ್ಮ ಮೊಬೈಲಿನಲ್ಲಿ ಅನುಸ್ಥಾಪಿಸಲು https://play.google.com/store/apps/details?id=com.knobly.kasapa ಈ ಕೊಂಡಿಯನ್ನು ಒತ್ತಿ.

ಜಾಲತಾಣದ ಮೂಲಕವೂ ಸದಸ್ಯತ್ವ ಪಡೆಯಲು https://kannadasahithyaparishattu.in/app ಈ ಲಿಂಕ್ ಬಳಸಿ

WhatsApp Group Join Now
Telegram Group Join Now
Sharing Is Caring:

Leave a Comment