ಕರ್ನಾಟಕ ಸಂಭ್ರಮ ೫೦

WhatsApp Group Join Now
Telegram Group Join Now

ಸನ್ಮಾನ್ಯ ಮುಖ್ಯಮಂತ್ರಿರವರು 2023-24ನೇ ಸಾಲಿನ ಆಯವ್ಯಯದಲ್ಲಿ ಮೈಸೂರು ರಾಜ್ಯವು
ಕರ್ನಾಟಕ ಎಂದು ಮರುನಾಮಕರಣವಾಗಿ 1ನೇ ನವೆಂಬರ್ – 2023ಕ್ಕೆ 50 ವರ್ಷ ಪೂರ್ಣಗೊಳ್ಳಲಿದೆ. ಈ
ಶುಭ ಸಂದರ್ಭದಲ್ಲಿ “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಎಂಬ ಹೆಸರಿನಲ್ಲಿ ಇಡೀ ವರ್ಷ
ಕರ್ನಾಟಕ ಇತಿಹಾಸ ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬಂಧಿಸಿದಂತೆ ಮತ್ತು ಯುವ
ಜನತೆಯಲ್ಲಿ ಕನ್ನಡ – ಕನ್ನಡಿಗ ಕರ್ನಾಟಕದ ಅರಿವು ಮೂಡಿಸುವ ಯೋಜನೆಗಳನ್ನು
ಹಮ್ಮಿಕೊಳ್ಳಲಾಗುವುದು’ ಎಂದು ಘೋಷಣೆ ಮಾಡಿರುತ್ತಾರೆ.

ಈ ಹಿನ್ನೆಲೆಯಲ್ಲಿ, ಕರ್ನಾಟಕ ಸಂಭ್ರಮ-೫೦ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ
ಅಭಿಯಾನದ ನಿಮಿತ್ತವಾಗಿ 2023 ನವೆಂಬರ್ 01 ರಿಂದ 2024 ನವೆಂಬರ್ ವರೆಗೆ ರಾಜ್ಯಾದ್ಯಂತ
ವರ್ಷಪೂರ್ತಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ದಿನಾಂಕ:04.10.2023ರಂದು ಮಾನ್ಯ
ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿರುತ್ತದೆ

 1. ದಿನಾಂಕ: 17.10.2023ರಂದು ಕರ್ನಾಟಕ ಸಂಭ್ರಮ-50ರ ಅಭಿಯಾನದ ಲಾಂಛನವನ್ನು ಮಾನ್ಯ
  ಮುಖ್ಯಮಂತ್ರಿಯವರು ಬಿಡುಗಡೆಗೊಳಿಸಿದ್ದು, ಸದರಿ ಲಾಂಛನವನ್ನು ಎಲ್ಲಾ ಸರ್ಕಾರಿ / ಅರೆ ಸರ್ಕಾರಿ
  ಕಾರ್ಯಕ್ರಮದ ಆಮಂತ್ರಣ ಪತ್ರಿಕೆ, ಬ್ಯಾನರ್‌ ಹಾಗೂ ಪತ್ರಗಳ ಮೇಲೆ ಮುದ್ರಿಸಿ ಉಪಯೋಗಿಸುವಂತೆ
  ತಿಳಿಸಲಾಗಿದೆ.
 2. ನವೆಂಬರ್ 01 ರಂದು ರಾಜ್ಯದೆಲ್ಲೆಡೆ ಆಚರಿಸುವ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ
  ಸಂಭ್ರಮ-೫೦ ಅಭಿಯಾನದ ಅಂಗವಾಗಿ ಆಯ್ಕೆಮಾಡಿರುವ ನಾಡಿನ ಹೆಸರಾಂತ ಕವಿಗಳ 05 ಕನ್ನಡ
  ಗೀತೆಗಳನ್ನು ಹಾಡುವ ಮೂಲಕ ಸಮಸ್ತ ಕನ್ನಡಿಗರು ಕನ್ನಡಾಂಬೆಗೆ ನುಡಿ ನಮನ (ಗೀತ ಗಾಯನ)
  ಸಲ್ಲಿಸುವುದು ಸರ್ಕಾರದ ಉದ್ದೇಶವಾಗಿರುತ್ತದೆ.

ಆದ್ದರಿಂದ, ರಾಜ್ಯದ ಎಲ್ಲಾ ಜಿಲ್ಲಾಮಟ್ಟ, ತಾಲ್ಲೂಕು ಮಟ್ಟ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ
ನವೆಂಬರ್ 01 ರಂದು ಆಚರಿಸುವ ರಾಜ್ಯೋತ್ಸವ ಕಾರ್ಯಕ್ರಮ ವೇಳಾಪಟ್ಟಿಯಲ್ಲಿರುವಂತೆ
ಧ್ವಜಾರೋಹಣ, ರಾಷ್ಟ್ರಗೀತೆ, ನಾಡಗೀತೆ, ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಯಾದ ನಂತರ
ಕ್ರಮವಾಗಿ ಈ ಕೆಳಗಿನ 05 ಕನ್ನಡ ಗೀತೆಗಳನ್ನು ಕಡ್ಡಾಯವಾಗಿ ಹಾಡುವ ಮೂಲಕ ನುಡಿ ನಮನ
ಸಲ್ಲಿಸುವುದು.

 1. ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು – ಹುಯಿಲಗೋಳ ನಾರಾಯಣರಾಯರು
 2. ಎಲ್ಲಾದರು ಇರು ಎಂತಾದರು ಇರು. ಕುವೆಂಪು
 3. ಒಂದೇ ಒಂದೇ ಕರ್ನಾಟಕ ಒಂದೇ…..ದ.ರಾ. ಬೇಂದ್ರ
 4. ಹೊತ್ತಿತೋ ಹೊತ್ತಿತು ಕನ್ನಡದ ದೀಪ..ಸಿದ್ಧಯ್ಯ ಪುರಾಣಿಕ
 5. ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ… – ಚನ್ನವೀರ ಕಣವಿ

ಮುಂದುವರೆದು, ಶಾಲಾ ಕಾಲೇಜು, ವಿಶ್ವವಿದ್ಯಾಲಯಗಳು, ಸರ್ಕಾರಿ, ಅರೆಸರ್ಕಾರಿ, ನಿಗಮ
ಮಂಡಳಿಗಳ ಕಚೇರಿಗಳು, ಬ್ಯಾಂಕ್‌ಗಳು ಹಾಗೂ ಸಂಘ ಸಂಸ್ಥೆಗಳು ಆಚರಿಸುವ ರಾಜ್ಯೋತ್ಸವ
ಕಾರ್ಯಕ್ರಮಗಳ ವೇಳಾಪಟ್ಟಿಯಲ್ಲಿ ಅಳವಡಿಸಿಕೊಂಡು ಕಡ್ಡಾಯವಾಗಿ ಮೇಲಿನ ಹಾಡುಗಳನ್ನು ಹಾಡುವ
ಮೂಲಕ ಕನ್ನಡಾಂಬೆಗೆ ನುಡಿ ನಮನ (ಗೀತ ಗಾಯನ) ಸಲ್ಲಿಸುವಂತೆ ತಿಳಿಸಲಾಗಿದೆ.

IMG 20231029 WA0119
IMG 20231029 WA0120
IMG 20231029 WA0121
IMG 20231029 WA0118
IMG 20231029 WA0122
WhatsApp Group Join Now
Telegram Group Join Now
Sharing Is Caring:

Leave a Comment