ಐತಿಹಾಸಿಕ ಕೋಟಿ ಕಂಠ ಗಾಯನ ಸ್ಪರ್ಧೆಯಲ್ಲಿ ಭಾಗವಹಿಸಲು ಇಲ್ಲಿ ಕ್ಲಿಕ್ ಮಾಡಿ

ಕಾರ್ಯಕ್ರಮದಲ್ಲಿ ಭಾಗವಹಿಸಲು 24/10/22 ರ ಒಳಗಾಗಿ ಕೆಳಗಿನ ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಿ

ಕೋಟಿ ಕಂಠ ಗಾಯನದಲ್ಲಿ ನೋಂದಣಿ ಮಾಡಲು ಹೊಸ ಲಿಂಕ್ ಇಲ್ಲಿದೆ

IMG 20221020 WA0031

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ರಾಜ್ಯದಲ್ಲಿ ವಿನೂತನವಾದ ಕೋಟಿ ಕಂಠ ಗಾಯನ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಅಕ್ಟೋಬರ್‌ 28ರಂದು ನಾಡಿನಾದ್ಯಂತ ಏಕಕಾಲದಲ್ಲಿ ಕನ್ನಡದ ಕವಿಗಳ ಜನಪ್ರಿಯ ಗೀತೆಗಳನ್ನು ಕೋಟಿ ಕಂಠಗಳಲ್ಲಿ ಪ್ರಸ್ತುತಪಡಿಸಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕ್ರತಿ ಹಾಗೂ ಇಂಧನ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯದ ಸರಕಾರಿ ನೌಕರರು ಭಾಗವಹಿಸುವಂತೆ ಸಚಿವರು ಕೋರಿರುತ್ತಾರೆ

ಅಕ್ಟೋಬರ್‌ 28ರಂದು ಬೆಳಗ್ಗೆ ನಡೆಯುವ ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ “ಜಯ ಭಾರತ ಜನನಿಯ ತನುಜಾತೆ’ , ಡಾ.ಚನ್ನವೀರ ಕಣವಿ ಅವರ ‘ವಿಶ್ವ ವಿನೂತನ ವಿದ್ಯಾ ಚೇತನ ಸರ್ವ ಹೃದಯ ಸಂಸ್ಕಾರಿ “, ಕುವೆಂಪು ಅವರ “ಬಾರಿಸು ಕನ್ನಡ ಡಿಂಡಿಮವಾ“, ಡಾ.ಡಿ.ಎಸ್.ಕರ್ಕಿಯವರ “ಹಚ್ಚೇವು ಕನ್ನಡದ ದೀಪ “ ಹಾಗೂ ಡಾ. ಹಂಸಲೇಖ ಅವರ “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು“ ಎಂಬ ಐದು ಗೀತೆಗಳನ್ನು ಕೋಟಿ ಕಂಠಗಳಲ್ಲಿ ಹಾಡಲಾಗುತ್ತದೆ. ಇದನ್ನು ಹೊರತುಪಡಿಸಿಯೂ ಆಸಕ್ತರು ಬೇರೆ ಕನ್ನಡ ಗೀತೆಗಳನ್ನು ಸಮಯದ ಮಿತಿ ಆಧರಿಸಿ ಪ್ರಸ್ತುಪಡಿಸಬಹುದಾಗಿದೆ.

IMG 20221006 WA0115 2
Sharing Is Caring:

Leave a Comment