ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ರಾಷ್ಟ್ರೀಯ ಹಾಗೂ ನಾಡಹಬ್ಬಗಳಂದು ಬಿಸಿಯೂಟ ಒದಗಿಸುವ ಬಗ್ಗೆ
ಪ್ರತಿ ವರ್ಷದಂತೆ ಪಿ ಎಂ ಪೋಷಣ್ (ಮಧ್ಯಾಹ್ನ ಬಿಸಿಯೂಟ ಯೋಜನೆ) ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಪ್ರತಿ ಶೈಕ್ಷಣಿಕ ವರ್ಷದ ಕೆಲಸದ ದಿನಗಳನ್ನು ಲೆಕ್ಕಿಸುವ ಸಂದರ್ಭದಲ್ಲಿ ರಾಷ್ಟ್ರೀಯ ಹಾಗೂ ನಾಡಹಬ್ಬಗಳನ್ನು (ಕನ್ನಡ ರಾಜ್ಯೋತ್ಸವ) ಶಾಲಾ ಕೆಲಸದ ದಿನಗಳೆಂದು ಪರಿಗಣಿಸಲಾಗಿರುತ್ತದೆ ಹಾಗೂ ಪಿ ಎಂ ಪೋಷಣ್ ಯೋಜನೆ ಅಡಿಯಲ್ಲಿ ಬಿಸಿಯೂಟ ಯೋಜನೆಯನ್ನು ಅನುಷ್ಠಾನ ಮಾಡಲು (ಯೋಜನಾ ಅನುಮೋದನಾ ಮಂಡಳಿ) ಪಿಎಬಿ ಯಿಂದ ಅನುಮೋದನೆಯನ್ನು ಪಡೆಯಲಾಗಿರುತ್ತದೆ. ಆದ್ದರಿಂದ ಎಲ್ಲಾ ರಾಷ್ಟ್ರೀಯ ಹಾಗೂ ನಾಡಹಬ್ಬಗಳಂದು ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಕ್ಕಳಿಗೆ ಕಡ್ಡಾಯವಾಗಿ ಬಿಸಿಯೂಟ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಸೂಚಿಸಲಾಗಿರುತ್ತದೆ. ಆದ್ದರಿಂದ 2025 ಜನವರಿ 26 ಗಣರಾಜ್ಯೋತ್ಸವ ದಿನದಂದು ಎಲ್ಲಾ ಶಾಲೆಗಳಲ್ಲಿ ಪಿ ಎಂ ಪೋಷಣ್ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ತಿಳಿಸಿದೆ.