1 ರಿಂದ 5 ನೇ ತರಗತಿ ಆರಂಭದ ಬಗ್ಗೆ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ

ರಾಜ್ಯದಲ್ಲಿ 6 ರಿಂದ 10 ನೇ ತರಗತಿ ಆರಂಭವಾಗಿವೆ. ಪಿಯುಸಿ ತರಗತಿಗಳು ಕೂಡ ನಡೆಯುತ್ತಿವೆ. ಆದರೆ, ಒಂದರಿಂದ ಐದನೇ ತರಗತಿಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿರುವಾಗಲೇ ಕೊರೊನಾ ಸೋಂಕು ಮತ್ತೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಒಂದರಿಂದ ಐದನೇ ತರಗತಿ ಆರಂಭಕ್ಕೆ ಆರೋಗ್ಯ ಇಲಾಖೆ ಸಲಹೆ ಪಡೆದ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಮಾರ್ಚ್ 1ರಿಂದ ಒಂದರಿಂದ ಐದನೇ ತರಗತಿಗಳನ್ನು ಆರಂಭಿಸಬೇಕಿತ್ತು. ಆದರೆ, ಕೆಲವು ಕಡೆ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ತರಗತಿಗಳನ್ನು ಆರಂಭಿಸಿಲ್ಲ.

ಕೊರೊನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Sharing Is Caring:

Leave a Comment