ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ 1ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ವಿದ್ಯಾರ್ಥಿ ವೇತನದ ಪೋರ್ಟಲ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತೆ
- ವಿದ್ಯಾರ್ಥಿಯು ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಜನಾಂಗಕ್ಕೆ ಸೇರಿದವರಾಗಬೇಕು.
- ವಿದ್ಯಾರ್ಥಿಯು ಕರ್ನಾಟಕದ ನಿವಾಸಿಯಾಗಿರಬೇಕು.
- ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದಲೂ ಒಂದು ಲಕ್ಷ ಮೀರಿರಬಾರದು.
ಸೂಚನೆ
- 2024-25ನೇ ಸಾಲಿನಲ್ಲಿ ಅನುಮೋದನೆಗೊಂಡ ಅರ್ಜಿಗಳು ಹಾಗೂ ವಿದ್ಯಾರ್ಥಿವೇತನ ಮಂಜೂರಾದ ವಿದ್ಯಾರ್ಥಿಗಳ ಅರ್ಜಿಗಳನ್ನು auto renewal ಎಂದು ಪರಿಗಣಿಸುವುದರಿಂದ ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
- 2024-25 ನೇ ಸಾಲಿನಲ್ಲಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನ ಮಂಜೂರಾಗದೆ ಇದ್ದಲ್ಲಿ ಅಂತಹ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸತಕ್ಕದ್ದು.
- ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು.
- ಸದರಿ ಯೋಜನೆಯ ಪ್ರಯೋಜನ ಪಡೆಯಲು ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್, npci mapping active ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು.
- ಸದರಿ ಯೋಜನೆಯ ಪ್ರಕ್ರಿಯೆಯು ಸರಕಾರದಿಂದ ಕಾಲಕಾಲಕ್ಕೆ ಹೊರಡಿಸಲಾಗುವ ಆದೇಶಗಳಿಗೆ ಒಳಪಟ್ಟಿರುತ್ತದೆ.
