---Advertisement---

ಸರ್ಕಾರಿ ನೌಕರರಿಗೆ ಹೊಸ ನಿಯಮ: ಡಿಸೆಂಬರ್ 1ರಿಂದ ‘ಕರ್ತವ್ಯ’ ಆ್ಯಪ್‌ನಲ್ಲೇ ಚಲನವಲನ ಮತ್ತು ನಗದು ಘೋಷಣೆ ಕಡ್ಡಾಯ

By kspstadk.com

Published On:

Follow Us
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಆಡಳಿತಾತ್ಮಕ ಕಾರ್ಯವೈಖರಿಯಲ್ಲಿ ಮತ್ತೊಂದು ಮಹತ್ವದ ಬದಲಾವಣೆಗೆ ಸರ್ಕಾರ ಮುಂದಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳು, ನಿಗಮಗಳು ಹಾಗೂ ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ಇನ್ನು ಮುಂದೆ ಚಲನವಲನ ವಹಿ (Movement Register) ಹಾಗೂ ನಗದು ಘೋಷಣಾ ವಹಿ (Cash Declaration Register) ವಿವರಗಳನ್ನು ‘ಕರ್ತವ್ಯ’ (KAAMS) ಮೊಬೈಲ್ ಆ್ಯಪ್‌ನಲ್ಲಿಯೇ ಕಡ್ಡಾಯವಾಗಿ ದಾಖಲಿಸಬೇಕು ಎಂದು ಸರ್ಕಾರ ಆದೇಶಿಸಿದೆ.

ಈ ನಿಯಮವು 2026ರ ಡಿಸೆಂಬರ್ 1ರಿಂದ ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ವ್ಯವಸ್ಥೆಯ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಆಯಾ ಇಲಾಖೆಗಳ ನೋಡಲ್ ಅಧಿಕಾರಿಗಳು ಕಾಲಕಾಲಕ್ಕೆ ಪರಿಶೀಲನೆ ನಡೆಸಲಿದ್ದಾರೆ. ನೌಕರರು ಕಡ್ಡಾಯವಾಗಿ ದಾಖಲಾತಿಗಳನ್ನು ನಿರ್ವಹಿಸುತ್ತಿರುವ ಬಗ್ಗೆ ಮೇಲ್ವಿಚಾರಣೆ ವಹಿಸುವ ಜವಾಬ್ದಾರಿಯನ್ನು ನೋಡಲ್ ಅಧಿಕಾರಿಗಳಿಗೆ ವಹಿಸಲಾಗಿದೆ.

ಸರ್ಕಾರಿ ಆಡಳಿತದಲ್ಲಿ ಡಿಜಿಟಲೀಕರಣ, ಪಾರದರ್ಶಕತೆ ಹಾಗೂ ಕರ್ತವ್ಯ ನಿರ್ವಹಣೆಯ ಮೇಲ್ವಿಚಾರಣೆಯನ್ನು ಬಲಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ರಾಜ್ಯದ ಎಲ್ಲಾ ಸರ್ಕಾರಿ ನೌಕರರು ಹೊಸ ನಿಯಮವನ್ನು ಗಮನದಲ್ಲಿಟ್ಟುಕೊಂಡು ಅನುಸರಿಸುವಂತೆ ಸೂಚಿಸಲಾಗಿದೆ.

Click here to open the file
WhatsApp Group Join Now
Telegram Group Join Now

Join WhatsApp

Join Now

Join Telegram

Join Now

Leave a Comment