ಫೆಬ್ರವರಿ 28, 2024 ರಂದು ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ಬೆಳಿಗ್ಗೆ 11:00 ಗಂಟೆಗೆ ರಾಜ್ಯದ ಎಲ್ಲಾ ಪ್ರಾಥಮಿಕ/ಪ್ರೌಢಶಾಲೆಗಳಲ್ಲಿ ಏಕಕಾಲಕ್ಕೆ ವೈಜ್ಞಾನಿಕ ಮನೋಭಾವನೆ ಹಾಗೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಲು ಪ್ರತಿಜ್ಞಾ ವಿಧಿಯನ್ನು ಎಲ್ಲಾ ವಿದ್ಯಾರ್ಥಿಗಳು ಸ್ವೀಕರಿಸುವಂತೆ ಕ್ರಮಕೈಗೊಳ್ಳುವುದು, ಈ ಪತ್ರದೊಂದಿಗೆ ಪ್ರತಿಜ್ಞಾ ವಿಧಿಯನ್ನು ಲಗತ್ತಿಸಿದೆ.
ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರಯುಕ್ತ ವೈಚಾರಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವ ಪ್ರತಿಜ್ಞಾ ವಿಧಿ
…….. . . . .ಆದ ನಾನು ಭಾರತೀಯ ಸಂವಿಧಾನದ ಮೂಲಭೂತ ಕರ್ತವ್ಯಗಳಲ್ಲೊಂದಾದ 51 (ಎಚ್) ವಿಧಿಯ ಅನ್ವಯ ವೈಜ್ಞಾನಿಕ ಮನೋಭಾವನೆ ಮತ್ತು ವೈಚಾರಿಕತೆಯನ್ನು ಬೆಳೆಸಿಕೊಳ್ಳುತ್ತೇನೆ, ನಾನು ಪ್ರಶ್ನೆ ಮಾಡದೇ ಯಾವುದೇ ತರ್ಕ ಒಪ್ಪುವುದಿಲ್ಲ. ಸಂವಿಧಾನದ ಮೂಲಭೂತ ಕರ್ತವ್ಯದ ಆಶಯದಂತೆ ಮೌಢ್ಯತೆ ಮತ್ತು ಅಂಧಕಾರವನ್ನು ನಿರ್ಮೂಲನೆ ಮಾಡಿ ಸಮಾಜಕ್ಕೆ ಪೂರಕವಾದ ಬದುಕನ್ನು ರೂಪಿಸಿಕೊಳ್ಳುತ್ತೇನೆಂದು ಈ ಮೂಲಕ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ದಿನದಂದು ಪ್ರತಿಜ್ಞೆ ಮಾಡುತ್ತೇನೆ.ಜೈ ಹಿಂದ್, ಜೈ ಕರ್ನಾಟಕ, ಜೈ ವಿಜ್ಞಾನ