ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯ ವಿದ್ಯಾ ಕೇಂದ್ರಗಳನ್ನಾಗಿ ರೂಪಿಸಲು “ನಾವು ಮನುಜರು” ಎಂಬ ಹೆಸರಿನಲ್ಲಿ ಎಲ್ಲಾ ಶಾಲಾ ಕಾಲೇಜುಗಳಲ್ಲಿ ವಾರಕ್ಕೆ ಎರಡು ಗಂಟೆಗಳ ವಿಚಾರ ವಿಮರ್ಶೆ ಮತ್ತು ಸಂವಾದ ಚಟುವಟಿಕೆಗಳನ್ನು ಒಳಗೊಂಡ ತರಗತಿಗಳನ್ನು ನಡೆಸಲಾಗುವುದು ಎಂದು 2024-25 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಲಾಗಿರುತ್ತದೆ.
ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ವಾರಕ್ಕೆ ಎರಡು ಗಂಟೆಗಳ( 120 ನಿಮಿಷ, 40 ನಿಮಿಷಗಳ ಮೂರು ಅವಧಿಗಳು) ವಿಚಾರ ವಿಮರ್ಶೆ ಮತ್ತು ಸಂವಾದ ಚಟುವಟಿಕೆಗಳನ್ನು ಒಳಗೊಂಡ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಸರ್ಕಾರದ ಆದೇಶದಲ್ಲಿ ನಿರ್ದೇಶಿಸಲಾಗಿದೆ .
ಶಾಲಾ ವೇಳಾಪಟ್ಟಿಯಲ್ಲಿ ಮೌಲ್ಯ ಶಿಕ್ಷಣದ ಒಂದು ಅವಧಿ ಸಾ.ಉ.ಉ.ಕಾ. ದ ಎರಡು ಅವಧಿ ಗಳನ್ನು ಹೊಂದಾಣಿಕೆ ಮಾಡಿಕೊಂಡು ಕಡ್ಡಾಯವಾಗಿ ಶಾಲೆಗಳಲ್ಲಿ ಅನುಷ್ಠಾನ ಮಾಡಲು ತಿಳಿಸಿದೆ. ಮೇಲುಸ್ತುವಾರಿ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸದರಿ ಕಾರ್ಯಕ್ರಮದ ಅನುಷ್ಠಾನದ ಬಗ್ಗೆ ಕಾತರಿಪಡಿಸಿಕೊಂಡು ಸೂಕ್ತ ಮಾರ್ಗದರ್ಶನ ನೀಡುವುದು
ಜಿಲ್ಲಾ ಹಂತದಲ್ಲಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಿ ಸದರಿ ಕಾರ್ಯಕ್ರಮದ ಯಶಸ್ವಿ ಅನುಷ್ಠಾನದ ಬಗ್ಗೆ ಉಪನಿರ್ದೇಶಕರು ಆಡಳಿತ ಮತ್ತು ಉಪನಿರ್ದೇಶಕರು ಅಭಿವೃದ್ಧಿ ಇವರು ಜಂಟಿಯಾಗಿ ವರದಿಯನ್ನು ಸಿದ್ಧಪಡಿಸಿಕೊಂಡು DSERT ಕಚೇರಿಗೆ ಸಲ್ಲಿಸಲು ತಿಳಿಸಿದೆ.