1ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆಯನ್ನು ತಗ್ಗಿಸುವ ಕುರಿತು

ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹೊರಯಲ್ಲದೇ ಸಂತಸದಾಯಕವಾಗಿ ಕಲಿಯುವವಾತವರಣವನ್ನು ರೂಪಿಸುವ ಸಲುವಾಗಿ Centre for Child and Law, NLSUTI Benga|uruರವರ ಸಹಯೋಗದೊಂದಿಗೆ ಡಿ.ಎಸ್.ಇ.ಆರ್.ಟಿ ರವರು ಒಂದು ಅಧ್ಯಯನ ನಡೆಸಿ ವರದಿ ಸರ್ಕಾರಕ್ಕೆ ಸಲ್ಲಿಸಿರುತ್ತಾರೆ. ವರದಿಯಲ್ಲಿ ವಿದ್ಯಾರ್ಥಿಗಳು ಅವರ ದೇಹದ ತೂಕದ ಶೇಕಡ 10 ರಿಂದ 15ರಷ್ಟು ತೂಕದ ಶಾಲಾ ಬ್ಯಾಗ್‌ಗಳನ್ನು ತೆಗೆದುಕೊಂಡು ಹೋಗಬಹುದಾಗಿ ಮೂಳೆ ತಜ್ಞರು ಶಿಪಾರಸ್ಸು ಮಾಡಿರುತ್ತಾರೆ. ಈ ಕುರಿತು ಉಲ್ಲೇಖ 2ರ ಸರ್ಕಾರಿ) ಆದೇಶದಲ್ಲಿ ಕ್ರಮವಹಿಸಲು ಸೂಚಿಸಲಾಗಿದೆ. ಈಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಎಲ್ಲಾ ಶಾಲೆಗಳಲ್ಲಿ 1ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರ ಕಡಿಮೆ ಮಾಡಲು ಕೆಳಕಂಡ ಅಂಶ್ಗಳಿಗೆ ಅನುಗುಣವಾಗಿ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ.

1) ವಿದ್ಯಾರ್ಥಿಯ ಶಾಲಾಬ್ಯಾಗ್‌ನ ತೂಕವು ಈ ಕೆಳಕಂಡಂತಿ ನಿಗದಿಪಡಿಸಲಾಗಿದ್ದು, ಕಡ್ಡಾಯವಾಗಿ ಪಾಲಿಸುವುದು.

2) ಕ್ರ.ಸಂ. ತರಗತಿ. ಶಾಲಾ ಬ್ಯಾಗ್‌ನ ತೂಕ

5) 1. 6) 1-2 7) 1.5 ರಿಂದ 2 ಕಿ. ಗ್ರಾಂ

8 )2. 9). 3-5 10) 2 ರಿಂದ 3 ಕಿ.ಗ್ರಾಂ

11)3. 12). 6 – 8 13) 3 ರಿಂದ 4 ಕಿ.ಗ್ರಾಂ

14) 4. 15) 9-10 16) 4 ರಿಂದ 5 ಕಿ.ಗ್ರಾಂ

IMG 20230621 WA0026

2. 1 ಮತ್ತು 2ನೇ ತರಗತಿ ಬೋಧನೆಯು ಬುನಾದಿ ಹಂತದ ಶಿಕ್ಷಣವಾಗಿದ್ದು ವಿದ್ಯಾರ್ಥಿಗಳು ಸಂತಸಮತ್ತು ಸಕ್ರಿಯವಾಗಿ ಶಾಲೆಗಳಲ್ಲಿಯೇ ಚಟುವಟಿಕೆ ಮೂಲಕ ಕಲಿಯಲು ಆದ್ಯತೆ ನೀಡುವುದು ಈವಿದ್ಯಾರ್ಥಿಗಳಿಗೆ ಕಲಿಕೆಯ ಪುನರ್ಬಲನಕ್ಕಾಗಿ ಯಾವುದೇ ರೀತಿಯ ಗೃಹಪಾಠ ಅಥವಾಮನೆಗೆಲಸವನ್ನು ನೀಡದಂತೆ ಕ್ರಮವಹಿಸುವುದು.

3. 1 ರಿಂದ 05ನೇ ತರಗತಿಗಳ ವಿದ್ಯಾರ್ಥಿಗಳಿಗೆ ಭಾಷೆ, ಗಣಿತ ಹಾಗೂ ಪರಿಸರ ವಿಜ್ಞಾನ ವಿಷಯಹೊರತುಪಡಿಸಿ ಇನ್ಯಾವುದೇ ಪಠ್ಯಕ್ರಮವನ್ನು ನಿಗದಿಪಡಿಸದಂತೆ ಕ್ರಮವಹಿಸುವುದು.

4. 3 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಕಲಿಕಾ ಬಲವರ್ಧನ ಚಟುವಟಿಕೆಗಳನ್ನು ಶಾಲೆಗಳಲ್ಲಿಯೇ ನಿರ್ವಹಿಸುವುದು ಅತ್ಯಂತ ಅಗತ್ಯವಿರುವ ಹಾಗೂ ಪೂರಕವಾಗಿರುವಂತಹಚಟುವಟಿಕೆಗಳಿಗೆ ಸೀಮಿತ ಪ್ರಮಾಣದಲ್ಲಿ ಮನೆಗೆಲಸ ನೀಡುವಂತೆ ಕ್ರಮವಹಿಸುವುದು.

IMG 20230621 WA0029

5 . ವಿದ್ಯಾರ್ಥಿಗಳು ಕಲಿಕೆಯ ಎಲ್ಲಾ ಪಠ್ಯ ಪುಸ್ತಕಗಳು / ನೋಟ್ ಪುಸ್ತಕಗಳು ಮತ್ತು ಅಭ್ಯಾಸಪುಸ್ತಕಗಳನ್ನು ಪ್ರತಿ ದಿನವು ತರುವುದನ್ನು ಕಪ್ಪಿಸಲು ವಿದ್ಯಾರ್ಥಿಗಳಿಗೆ ಮುಂಚಿತವಾಗಿಯೇ ಆಯದಿವಸದ ವೇಳಾಪಟ್ಟಿಗೆ ಅನುಗುಣವಾಗಿ ಅಗತ್ಯವಿರುವ ಪುಸ್ತಕಗಳನ್ನು ಮಾತ್ರ ಶಾಲೆಗೆ ತರಲು ಸೂಚನೆ ನೀಡುವುದು.

6. ಅಭ್ಯಾಸ ಚಟುವಟಿಕೆಗಳನ್ನು ಹಾಳೆಗಳಲ್ಲಿ ಮಾಡಿಸಿ ಫೈಲ್ ಮಾಡಿಸುವುದು, ಅವಶ್ಯಕತೆ ಇದ್ದಾಗ ಪರಾಮರ್ಶಿಸಲು ಇವುಗಳನ್ನು ಶಾಲೆಗಳಲ್ಲಿಯೇ ಸಂಗ್ರಹಿಸಿಡಲು ಪ್ರೇರೇಪಿಸುವುದು ಅಥವಾ ಅಭ್ಯಾಸಪುಸ್ತಕಗಳನ್ನು ಬಳಸಿದಲ್ಲಿ ಇವುಗಳನ್ನು ಶಾಲೆಗಳಲ್ಲಿಯೇ ಸಂಗ್ರಹಿಸಿಡತಕ್ಕದ್ದು.

7 . ವಿದ್ಯಾರ್ಥಿಯು ಮನೆಯಿಂದ ಶಾಲೆಗೆ, ಶಾಲೆಯಿಂದ ಮನೆಗೆ ತೆಗೆದುಕೊಂಡು ಹೋಗುವ ಪಠ್ಯ ಪುಸ್ತಕಗಳು, ಕೋಟೆ ಮಸ್ತಕಗಳು, ಲೇಖನ ಸಾಮಗ್ರಿಗಳು, ಕಲಿಕಾ ಉಪಕರಣಗಳು ಹಾಗೂಇನ್ನಿತರ ವಸ್ತುಗಳನ್ನು ತರಗತಿ ಒಳಗೆ ಶೇಖರಿಸುವಂತೆ ಅಗತ್ಯ ಅನುಕೂಲತೆಗಳನ್ನು ಕಲಿಸತಕ್ಕದ್ದು

ಶಾಲಾ ಗಂಥಾಲಯಗಳಲ್ಲಿ ಶಬ್ದಕೋಶ, ಸಮಾನಾರ್ಥಕ ಪದಕೋಶ, ಅಜ್ಞಾನ, ಜ್ಞಾನ ವಿಜ್ಞಾನಕೋಶಗಳಂತಹ ಪರಾಮರ್ಶನ ಸಾಮಗ್ರಿಗಳು ಸಾಕಷ್ಟು ಸಂಖ್ಯೆಯಲ್ಲಿ ಲಭ್ಯವಾಗುವಂತೆ ಹಾಗೂಮಕ್ಕಳು ಇವುಗಳನ್ನು ಅವಶ್ಯಕತೆ ಇದ್ದಾಗ ಬಳಸಿಕೊಳ್ಳುವಂತೆ ವ್ಯವಸ್ಥೆ ಮಾಡುವುದು

9 .100 ರಿಂದ 200 ಪಟ ಮೀರದ ನೋಟ ಪುಸ್ತಕಗಳನ್ನು ಬಳಸುವಂತೆ ಕ್ರಮವಹಿಸುವುದು.

10. ಕಡಿಮೆ ಖರ್ಚಿನ ಹಗುರವಾದ ಹಾಗೂ ದೀರ್ಘ ಕಾಲ ಬಾಳಿಕೆ ಬರುವಂತಹ ಶಾಲಾಬ್ಯಾಗ್ ಹಾಗೂಇತರೆ ಸಾಮಗ್ರಿಗಳನ್ನು ಬಳಸಲು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವುದು.

11. ಮಕ್ಕಳು ಶಾಲೆಗಳಿಗೆ ಕುಡಿಯುವ ನೀರನ್ನು ಕೊಂಡೊಯ್ಯುವುದನ್ನು ತಪ್ಪಿಸಲು ಕುಡಿಯುವ ನೀರಿನವ್ಯವಸ್ಥೆಯನ್ನು ಶಾಲೆಯಲ್ಲಿಯೇ ಕಲಿಸತಕ್ಕದ್ದು.

12 ಅತಿಯಾದ ಹೊರೆ ಇರುವ ಶಾಲಾಬ್ಯಾಗ್‌ನಿಂದ ಉಂಟಾಗಬಹುದಾದ ದುಷ್ಪರಿಣಾಮಗಳ ಬಗ್ಗೆಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡುವುದು,ಎಸ್.ಎಂ.ಸಿ / ಎಸ್.ಡಿ.ಎಂ.ಸಿ ಹಾಗೂ ಶಾಲಾಮುಖ್ಯಸ್ಥರು ಮೇಲ್ಕಂಡ ಕ್ರಮಗಳನ್ನುಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು.1 ರಿಂದ 5ನೇ ತರಗತಿವರೆಗೆ ಎನ್.ಸಿ.ಇ.ಆರ್.ಟಿ ನಿಗದಿಪಡಿಸಿರುವ ಪಠ್ಯಕ್ರಮವನ್ನು ಹೊರತುಪಡಿಸಿಇನ್ಯಾವುದೇ ಪಠ್ಯಕ್ರಮವನ್ನು ನಿಗದಿಪಡಿಸಿ ಬೋಧಿಸಿದರೆ ಶಾಲೆಗಳ ಮಾನ್ಯತೆಯನ್ನುರದ್ದುಪಡಿಸತಕ್ಕದ್ದು ಹಾಗೂ ಈ ಬಗ್ಗೆ ನಿಗಾವಹಿಸಲು ಶಾಲೆಗಳಿಗೆ ಭೇಟಿ ನೀಡಿ ತಪಾಸಣೆ ಮಾಡಲು ತಂಡವನ್ನು ರಚಿಸತಕ್ಕದ್ದು.ಕಸ್ಟರ್ ಹಂತದಲ್ಲಿ ಸಿ.ಆರ್, ಸಿ ಮತ್ತು ಇ.ಸಿ.ಒಗಳು ಬ್ಲಾಕ್ ಹಂತದಲ್ಲಿ ಬಿ.ಆರ್.ಸಿ ಮತ್ತು ಬಿ.ಇ.ಒ ರ ವರನ್ನು ಜಿಲ್ಲಾ ಹಂತದಲ್ಲಿ ಉಪನಿರ್ದೇಶಕರು (ಆಡಳಿತ) ಮತ್ತು ಪ್ರಾಂಶುಪಾಲರು ಡಯಟ್’ ರವರು ಶಾಲಾ ಹೊರೆ ಕಡಿತಗೊಳಿಸುವ ಕ್ರಮಗಳನ್ನು ಅನುಷ್ಠಾನಗೊಳಿಸಿರುವ ಬಗ್ಗೆ ಶಾಲಾ ಭೇಟಿ ಮತ್ತು ಪರಿಶೀಲನೆ ಮಾಡುವುದರ ಮೂಲಕ ಖಾತ್ರಿಪಡಿಸಿಕೊಳ್ಳಲು ತಿಳಿಸಿದೆ.

IMG 20230609 WA0166
IMG 20230609 WA0166
IMG 20230607 WA0065
Sharing Is Caring:

Leave a Comment