2024-25ನೇ ಸಾಲಿಗೆ ಮೆಟ್ರಿಕ್ ಪೂರ್ವ 1ರಿಂದ 8ನೇ ತರಗತಿ) ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಿಸಲಾಗಿದೆ.
2024-25ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ (1ರಿಂದ 8ನೇ ತರಗತಿ) ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯಡೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕ ವಿಸ್ತರಿಸಲಾಗಿದೆ.
ಅರ್ಹತೆ:
- ವಿದ್ಯಾರ್ಥಿಗಳು ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು.
- ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
- ಎಲ್ಲಾ ಮೂಲಗಳಿಂದ ವಿದ್ಯಾರ್ಥಿಯ/ಪಾಲಕರ/ಪೋಷಕರ ವಾರ್ಷಿಕ ಆದಾಯವು ರೂ.1.00. ಲಕ್ಷಗಳನ್ನು ಮೀರಿರಬಾರದು.
https://ssp.postmatric.karnataka.gov.i n/ ಮೂಲಕ ಅರ್ಜಿ ಸಲ್ಲಿಸಬೇಕು.
ವಿಸ್ತರಿಸಲಾದ ಕೊನೆಯ ದಿನಾಂಕ : 31-01-2025
ಅರ್ಹತೆ :
ವಿಶೇಷ ಸೂಚನೆ
- ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು.
- ಕಳೆದ ವರ್ಷದಲ್ಲಿ ವಿದ್ಯಾರ್ಥಿವೇತನ ಮಂಜೂರಾದ ವಿದ್ಯಾರ್ಥಿಗಳ ಅರ್ಜಿಗಳನ್ನು Auto Renewal ಎಂದು ಪರಿಗಣಿಸಲಾಗುವುದರಿಂದ ಸದರಿ ವಿದ್ಯಾರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ.
- ಹಿಂದಿನ ವರ್ಷ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಮಂಜೂರಾಗದೇ ಇದ್ದಲ್ಲಿ ಅಂತಹ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸತಕ್ಕದ್ದು.
- ಸದರಿ ಯೋಜನೆಯ ಪ್ರಯೋಜನ ಪಡೆಯಲು ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರುವ ಬಗ್ಗೆ ಹಾಗೂ NPCI Mapping Active ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು.
- ಸದರಿ ಯೋಜನೆಯ ಪ್ರಕ್ರಿಯೆಯು ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಲಾಗುವ ಸರ್ಕಾರದ ಆದೇಶಗಳು ಹಾಗೂ ಮಾರ್ಗಸೂಚಿಗಳಿಗೆ ಒಳಪಟ್ಟಿರುತ್ತದೆ.