ರಾಜ್ಯದ 262 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕತರಗತಿಗಳನ್ನು ಪ್ರಾರಂಭಿಸಲು ಈ ಕೆಳಗಿನ ವಿವರವಾದ ಸೂಚನೆಗಳನ್ನು ನೀಡಲಾಗಿದೆ.
1. 2023-24ನೇ ಸಾಲಿನ ಪೂರ್ವ ಪ್ರಾಥಮಿಕ ತರಗತಿಗಳನ್ನು ಎಲ್ಲ ಪೂರ್ವ ಸಿದ್ಧತೆಗಳನ್ನುಮಾಡಿಕೊಂಡು ಆಗಸ್ಟ್ ತಿಂಗಳಿನಿಂದ ಪ್ರಾರಂಭಿಸುವುದು.
2. ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸುವ ಕುರಿತು ಸರ್ಕಾರಿ ಪ್ರಾಥಮಿಕ ಶಾಲೆಗಳಎಸ್.ಡಿ.ಎಂ.ಸಿಯವರು ಮತ್ತು ಶಿಕ್ಷಕರು ಸ್ಥಳೀಯ ಮಟ್ಟದಲ್ಲಿ ಪ್ರಚಾರವನ್ನು ಸರ್ಕಾರಿಪ್ರಾಥಮಿಕ ಶಾಲೆಗಳ ಎಸ್.ಡಿ.ಎಂ.ಸಿಯವರು ಮತ್ತು ಶಿಕ್ಷಕರು ಮಾಡುವುದು
3. 2023-24ನೇ ಸಾಲಿನ ಪೂರ್ವ ಪ್ರಾಥಮಿಕ LKG ಯ ಒಂದು ವಿಭಾಗವನ್ನು ಮಾತ್ರಪ್ರಾರಂಭಿಸುವುದು, ಈ LKG ತರಗತಿಗೆ 4 ವರ್ಷದಿಂದ 5 ವರ್ಷದ ವಯೋಮಿತಿಯಒಳಗಿನ ಮಕ್ಕಳನ್ನು ದಾಖಲುಮಾಡಿಕೊಳ್ಳುವುದು. ಈ ವಿಭಾಗ ಪ್ರಾರಂಭಿಸಲು 4ವರ್ಷದಿಂದ 5 ವರ್ಷದ ವಯೋಮಾನದ ಕನಿಷ್ಠ 20 ಮಕ್ಕಳು ಪ್ರವೇಶಪಡೆಯುವಂತಿರಬೇಕು ಹಾಗೂ ಗರಿಷ್ಠ 30 ಮಕ್ಕಳನ್ನು ಮಾತ್ರ ದಾಖಲಿಸುವುದು.
4. ಪೂರ್ವಪ್ರಾಥಮಿಕ ತರಗತಿಯನ್ನು ಪ್ರಾರಂಭಿಸಲು ಒಂದು ಕೊಠಡಿಯನ್ನುಗುರುತಿಸಿಕೊಳ್ಳುವುದು ಹಾಗೂ ಕೊಠಡಿ ಸಜ್ಜುಗೊಳಿಸುವುದು ಅವಶ್ಯ ಸಾಧನಸಾಮಗ್ರಿಗಳನ್ನು ನಿಯಮಾನುಸಾರ ಖರೀದಿಸುವುದು, ಕೊಠಡಿ ಸಜ್ಜುಗೊಳಿಸಲು ಸ್ಥಳಿಯಚಿತ್ರಕಲಾ ಶಿಕ್ಷಕರನ್ನು / ಚಿತ್ರಕಲಾ ಪರಿಣಿತರನ್ನು ಬಳಸಿಕೊಂಡು ಮಕ್ಕಳಿಗೆ ಆಕರ್ಷಕವಾದಚಿತ್ರಗಳ ರಚನೆ, ಗೋಡೆ ಮೇಲೆ ನೆಲ ಮಟ್ಟದಿಂದ 2 ಅಡಿಯವರೆಗೆ ಮಕ್ಕಳು ಬರೆಯಲು/ಚಿತ್ರ ರಚಿಸಲು ಸಾಧ್ಯವಾಗುವಂತೆ ಗ್ರೀನ್ ಬೋರ್ಡ/ಕರಿಹಲಗೆ ರಚನೆ ಮುಂತಾದಕಾರ್ಯಗಳನ್ನು ಮಾಡುವುದು. ಖರೀದಿಸಬೇಕಾದ ಸಾಧನ ಸಾಮಗ್ರಿಗಳ ಪಟ್ಟಿಯನ್ನುಹಾಗೂ ಕೆಲವು ಕೊಠಡಿಯ ವಿನ್ಯಾಸದ ಕೆಲವು ಮಾದರಿ ಉದಾಹರಣೆಗಳನ್ನು ಕೂಡಲೇಒದಗಿಸಲಾಗುವುದು.
5. ಪ್ರತಿ ಪೂರ್ವ ಪ್ರಾಥಮಿಕ ತರಗತಿಗೆ ಒಬ್ಬ ಶಿಕ್ಷಕಿ/ಶಿಕ್ಷಕ ಮತ್ತು ಒಬ್ಬರು ಆಯಾ ರವರನ್ನುಶಾಲಾ ಎಸ್.ಡಿ.ಎಂ.ಸಿ ವತಿಯಿಂದ ತಾತ್ಕಾಲಿಕವಾಗಿ 10 ತಿಂಗಳುಗಳ ಅವಧಿಗೆ ಈ ಕೆಳಕಂಡಮಾನದಂಡದಂತೆ ನೇಮಕ ಮಾಡಿಕೊಳ್ಳುವುದು ಪೂರ್ವ ಪ್ರಾಥಮಿಕ ತರಗತಿ ಶಿಕ್ಷಕಿ/ಶಿಕ್ಷಕರಿಗೆಪ್ರಸ್ತುತ ಅತಿಥಿ ಶಿಕ್ಷಕರಿಗೆ ನೀಡುತ್ತಿರುವ ಸಂಭಾವನೆಯಂತೆಯೇ ಮಾಸಿಕ ರೂ. 7500.00ಮತ್ತು ಆಯಾ ಇವರಿಗೆ ಮಾಸಿಕ ರೂ. 5000.00 ಸಂಭಾವನೆಯನ್ನು ನಿಗದಿಪಡಿಸಲಾಗಿದೆ.ವೇತನ ಅನುದಾನವನ್ನು ಆಯಾ ಎಸ್.ಡಿ.ಎಂ.ಸಿ. ಖಾತೆಗೆ ಸಮಗ್ರ ಶಿಕ್ಷಣ ಕರ್ನಾಟಕ ಕಛೇರಿಯಿಂದ ಬಿಡುಗಡೆ ಮಾಡಲಾಗುವುದು.