ಎಲ್ಲ ನೌಕರರ ಆದ್ಯ ಗಮನಕ್ಕೆ
2022-23 ನೇ ಸಾಲಿನ ಆಯ-ವ್ಯಯ ಮಂಡನೆ ಪೂರ್ವಭಾವಿ ಸಭೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಸನ್ಮಾನ್ಯ ಮುಖ್ಯ ಮಂತ್ರಿಗಳಾದ ಮಾನ್ಯ ಶ್ರೀ ಬಸವರಾಜ. ಬೊಮ್ಮಾಯಿ ರವರ* ನೇತೃತ್ವದಲ್ಲಿ ಜರಗಿತು.ಈ ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿ ರವರು ಹಾಗೂ ಕೇಂದ್ರ ಸಂಘದ ಎಲ್ಲ ಪದಾಧಿಕಾರಿಗಳು ಈ ಕೆಳಕಂಡ ಬೇಡಿಕೆಗಳು ಈಡೇರಿಸುವಂತೆ ಮನವಿ ಸಮರ್ಪಿಸಿದರು.
ಈ ಸಭೆಯಲ್ಲಿ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀ ಐ.ಎನ್.ಪ್ರಸಾದ ,ಮಖ್ಯ ಮಂತ್ತಿಗಳ ಪ್ರಧಾನ ಕಾರ್ಯದರ್ಶಿಗಳು ಶ್ರೀ ಮಂಜುನಾಥ.ಪ್ರಸಾದ್ ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀ ಪಿ.ಸಿ.ಜಾಫರ್ ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಯವರಾದ ಶ್ರೀಮತಿ ಪಿ.ಹೇಮಲತ ರವರು ಉಪಸ್ಥಿತರಿದ್ದರು.