---Advertisement---

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ಆನ್‌ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

By kspstadk.com

Published On:

Follow Us
WhatsApp Group Join Now
Telegram Group Join Now

ಬೆಂಗಳೂರು, ಸೆಪ್ಟೆಂಬರ್ 24: ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಪದವೀಧರ ಪ್ರಾಥಮಿಕ ಶಿಕ್ಷಕರ (6ರಿಂದ 8ನೇ ತರಗತಿ) ಹಾಗೂ ಗಣಿತ–ವಿಜ್ಞಾನ ಶಿಕ್ಷಕರ (1ರಿಂದ 8ನೇ ತರಗತಿ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ.

ಈ ಕುರಿತು 11.08.2026ರಂದು ಹೊರಡಿಸಲಾಗಿದ್ದ ನೇಮಕಾತಿ ಅಧಿಸೂಚನೆಗೆ ತಿದ್ದುಪಡಿ/ಪೂರಕ ಅಂಶಗಳನ್ನು ಸೇರ್ಪಡೆಗೊಳಿಸಿ, ಶಾಲಾ ಶಿಕ್ಷಣ ಇಲಾಖೆ, ಆಯುಕ್ತರ ಕಚೇರಿ, ಬೆಂಗಳೂರು ವಿಭಾಗದಿಂದ 24.09.2026ರಂದು ಸೇವಾ ಅಧಿಸೂಚನೆ ಹೊರಡಿಸಲಾಗಿದೆ.

ವಿವರ ಹೊಸ ಕೊನೆಯ ದಿನಾಂಕ

ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸಲು 26.10.2026
ಅರ್ಜಿಯ ಶುಲ್ಕ ಪಾವತಿಸಲು 28.10.2026

ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿರುವ ಹಿನ್ನೆಲೆಯಲ್ಲಿ, ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದ್ದ ಪರೀಕ್ಷೆಗಳ ದಿನಾಂಕಗಳನ್ನು ಮುಂದೂಡಲಾಗಿದೆ.

2026ರ ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಉದ್ದೇಶಿಸಲಾಗಿದ್ದು, ಪರೀಕ್ಷಾ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಇಲಾಖೆಯ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಮುಖ್ಯವಾಗಿ: ಅಭ್ಯರ್ಥಿಗಳು ಪರಿಷ್ಕೃತ ಗಡುವಿನೊಳಗೆ ಆನ್‌ಲೈನ್ ಅರ್ಜಿ ಸಲ್ಲಿಸಿ, ನಿಗದಿತ ಅವಧಿಯೊಳಗೆ ಶುಲ್ಕ ಪಾವತಿಸುವಂತೆ ಸೂಚಿಸಲಾಗಿದೆ.

WhatsApp Group Join Now
Telegram Group Join Now

Join WhatsApp

Join Now

Join Telegram

Join Now

Leave a Comment