2024-25 ನೇ ಸಾಲಿನ ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಸಂಬಂಧ ರಾಜ್ಯ ಕಛೇರಿಯಿಂದ ಸುತ್ತೋಲೆಯನ್ನು ನೀಡಲಾಗಿತ್ತು. ಅದರಂತೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಶಾಲಾ ಹಂತದ ರಸಪ್ರಶ್ನೆ ಸ್ಪರ್ಧೆಯನ್ನು ನಡೆಸಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದು ವಿಜೇತರಾದ ವಿದ್ಯಾರ್ಥಿಗಳ ಮಾಹಿತಿಯನ್ನು ವಿದ್ಯಾವಾಹಿನಿ ವೆಬ್ ಪೋರ್ಟಲ್ ನಲ್ಲಿ ಅಫ್‌ಲೋಡ್ ಮಾಡಲು 29/01/2025 ಕೊನೆಯ ದಿನಾಂಕವಾಗಿರುತ್ತದೆ. ಯಾವುದಾದರು ಶಾಲೆಗಳಲ್ಲಿ ಶಾಲಾ ಹಂತದ ರಸಪ್ರಶ್ನೆ ಸ್ಪರ್ಧೆಯನ್ನು ನಡೆಸದಿದ್ದರೆ ರಸಪ್ರಶ್ನೆ ಸ್ಪರ್ಧೆಯನ್ನು ನಡೆಸಿ ವಿಜೇತರಾದ ವಿದ್ಯಾರ್ಥಿಗಳ ಮಾಹಿತಿಯನ್ನು ವಿದ್ಯಾವಾಹಿನಿ ವೆಬ್ ಪೋರ್ಟಲ್ ನಲ್ಲಿ ಅಫ್‌ಲೋಡ್ ಮಾಡಲು ಕ್ರಮ ಕೈಗೊಳ್ಳಲು ಸೂಚಿಸಿದೆ.
ಉದ್ದೇಶಗಳು:
- ವಿದ್ಯಾರ್ಥಿಗಳಲ್ಲಿ ವಿಜ್ಞಾನ, ಗಣಿತ ಹಾಗೂ ತಂತ್ರಜ್ಞಾನ ವಿಷಯಗಳ ಕಲಿಕೆಯಲ್ಲಿ ಆಸಕ್ತಿಯನ್ನು ಬೆಳೆಸುವುದು.
- ವಿದ್ಯಾರ್ಥಿಗಳಲ್ಲಿ ಹೊಸ ವಿಷಯಗಳ ಬಗ್ಗೆ ತಿಳಿಯುವ ಕುತೂಹಲ ಹಾಗೂ ಸಾಮಾನ್ಯ ಜ್ಞಾನವನ್ನು ಬೆಳೆಸುವುದು.
- ವಿದ್ಯಾರ್ಥಿಗಳಲ್ಲಿ ಚಿಂತಿಸುವ, ವಿಶ್ಲೇಷಿಸುವ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವುದು.
- ಭಾರತವು ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿರುವ ಸಾಧನೆಯ ಬಗ್ಗೆ, ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು.
- ವಿದ್ಯಾರ್ಥಿಗಳನ್ನು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸಿ, ಅವರಲ್ಲಿ ಸ್ಪರ್ಧಾಮನೋಭಾವನೆಯನ್ನು ಬೆಳೆಸುವುದು.
