ನಿರಂತರ ಸೇವೆಯ ಮೂಲಕ ಅನೇಕ ವಿದ್ಯಾರ್ಥಿಗಳ ಬಾಳಿನಲ್ಲಿ ಗೌರವದ ಸ್ಥಾನ ಪಡೆದ ತಮ್ಮೆಲ್ಲರ ನಿವೃತ್ತ ಜೀವನ ಸುಖಮಯವಾಗಿರಲಿ ದೇವರು ಆಯುರಾರೋಗ್ಯ ಐಶ್ವರ್ಯ ನೆಮ್ಮದಿ ಕರುಣಿಸಲಿ ಎಂದು ಜಿಲ್ಲೆಯ ಸಮಸ್ತ ಶಿಕ್ಷಕರ ಪರವಾಗಿ ಹಾರೈಸುತ್ತಿದ್ದೇವೆ.
ಶ್ರೀಮತಿ ರೆಮಿಲ್ಡಾ ಜೆಸಿಂತಾ ಡಿ ಕುನ್ಹಾ
ಸಹ ಶಿಕ್ಷಕಿ
ದ.ಕ.ಜಿ.ಪಂ.ಕಿ.ಪ್ರಾ.ಶಾಲೆ ಆಲಂಪುರಿ ಬಂಟ್ವಾಳ ತಾಲೂಕು.
ದಿನಾಂಕ 01.08.1998 ರಲ್ಲಿ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಮೂರ್ಜೆ ಇಲ್ಲಿ ಸೇವೆಗೆ ಸೇರಿದ ಇವರು ಇಲ್ಲಿ ಸೇವೆ ಸಲ್ಲಿಸಿ ನಂತರ ಕಿ.ಪ್ರಾ.ಶಾಲೆ ಕೊಳಲಬಾಕಿಮಾರು ಇಲ್ಲಿಗೆ ವರ್ಗಾವಣೆಗೊಂಡು ಇಲ್ಲಿ ಸೇವೆ ಸಲ್ಲಿಸಿ ನಂತರ ದ.ಕ.ಜಿ.ಪಂ.ಕಿ.ಪ್ರಾ.ಶಾಲೆ ಆಲಂಪುರಿ ಇಲ್ಲಿಗೆ ವರ್ಗಾವಣೆ ಗೊಂಡು ಇಲ್ಲಿ ಸೇವೆ ಸಲ್ಲಿಸಿದ ಇವರು ಈ ತಿಂಗಳು ಸೇವೆಯಿಂದ ನಿವೃತ್ತರಾಗುತ್ತಿದ್ದಾರೆ. ಇವರಿಗೆ ನಿವೃತ್ತ ಜೀವನದ ಶುಭಾಶಯಗಳು.
ಶ್ರೀಮತಿ ದಮಯಂತಿ ಕೆ
ಕರ್ನಾಟಕ ಪಬ್ಲಿಕ್ ಶಾಲೆ ಗಾಂಧಿ ನಗರ. ಸುಳ್ಯ ತಾಲೂಕು
ಪುತ್ತೂರು ತಾಲೂಕಿನ ಇಚ್ಲಂಪಾಡಿ ಗ್ರಾಮದ ಕೂರಮೇರು ಶ್ರೀಯುತ ಮೇದಪ್ಪ ಗೌಡ ಹಾಗೂ ಶ್ರೀಮತಿ ಪಾರ್ವತಿ ದಂಪತಿಗಳ ಪುತ್ರಿಯಾಗಿ ದಿನಾಂಕ 20.09.1964 ರಂದು ಜನಿಸಿದ ಇವರು ಪ್ರಾಥಮಿಕ ಶಿಕ್ಷಣವನ್ನು ಸ.ಹಿ.ಪ್ರಾ.ಶಾಲೆ ಇಚ್ಲಂಪಾಡಿ ಹಾಗೂ ಪ್ರೌಢ ಶಿಕ್ಷಣವನ್ನು ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಪುತ್ತೂರು ಇಲ್ಲಿ ಪೂರೈಸಿ ಶಿಕ್ಷಕ ತರಬೇತಿಯನ್ನು ಬಿ.ಎಸ್.ಟಿ ತರಬೇತಿ ಸಂಸ್ಥೆ ಜಯನಗರ ಬೆಂಗಳೂರು ಇಲ್ಲಿ ಪೂರೈಸಿ ದಿನಾಂಕ 29.01.1986 ರಂದು ಸ.ಹಿ.ಪ್ರಾ.ಶಾಲೆ ಐವರ್ನಾಡು ಇಲ್ಲಿ ಸೇವೆಗೆ ಸೇರಿದ ಇವರು ಇಲ್ಲಿ ಸುಮಾರು 11 ವರ್ಷಗಳ ಕಾಲ ಸೇವೆ ಸಲ್ಲಿಸಿ ನಂತರ ದಿನಾಂಕ 27.07.1997 ರಂದು ಕರ್ನಾಟಕ ಪಬ್ಲಿಕ್ ಶಾಲೆ ಗಾಂಧಿ ನಗರ ಇಲ್ಲಿಗೆ ವರ್ಗಾವಣೆ ಗೊಂಡು ಇಲ್ಲಿ ಸೇವೆ ಸಲ್ಲಿಸಿ ಈ ತಿಂಗಳು ಸೇವೆಯಿಂದ ನಿವೃತ್ತರಾಗುತ್ತಿದ್ದಾರೆ.ಇವರಿಗೆ ನಿವೃತ್ತ ಜೀವನದ ಶುಭಾಶಯಗಳು.
ಶ್ರೀಮತಿ ಆಶಾಲತಾ ಎಂ
ಸಹ ಶಿಕ್ಷಕರು
ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ರಾಜಗುಡ್ಡೆ ಹರೇಕಳ, ಉಳ್ಳಾಲ ತಾಲೂಕು.
ಶ್ರೀಯುತ ವಿಠಲ ಸಾಲಿಯಾನ್ ಹಾಗೂ ಶ್ರೀಮತಿ ನಳಿನಿ ವಿ.ಸಾಲಿಯಾನ್ ದಂಪತಿಗಳ ಪುತ್ರಿಯಾಗಿ ಜನಿಸಿದ ಇವರು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಲೂಡ್ಸ್ ಶಾಲೆಯಲ್ಲಿ ಪೂರೈಸಿ ಪದವಿಪೂರ್ವ ಶಿಕ್ಷಣವನ್ನು ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಪೂರೈಸಿ ಶಿಕ್ಷಕ ತರಬೇತಿಯನ್ನು ಬಲ್ಮಠ ಮಹಿಳಾ ಸರಕಾರಿ ಶಿಕ್ಷಣ ಸಂಸ್ಥೆಯಲ್ಲಿ ಪೂರೈಸಿ, ದಿನಾಂಕ 16.12.1999 ರಂದು ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ರಾಜಗುಡ್ಡೆ ಇಲ್ಲಿ ಸೇವೆಗೆ ಸೇರಿದ ಇವರು ಸುದೀರ್ಘ 25 ವರ್ಷಗಳ ಕಾಲ ಒಂದೇ ಶಾಲೆಯಲ್ಲಿ ಸೇವೆ ಸಲ್ಲಿಸಿ ಈ ತಿಂಗಳು ಸೇವೆಯಿಂದ ನಿವೃತ್ತರಾಗುತ್ತಿದ್ದಾರೆ.ಇವರಿಗೆ ನಿವೃತ್ತ ಜೀವನದ ಶುಭಾಶಯಗಳು.
ಶ್ರೀಮತಿ ಚಂದ್ರಿಕಾ
ಪ್ರಭಾರ ಮುಖ್ಯ ಶಿಕ್ಷಕಿ
ಸ.ಕಿ.ಪ್ರಾ.ಶಾಲೆ ಕುಂಟಾಲಗುಳಿ
ಮಂಗಳೂರು ದಕ್ಷಿಣ
ಇವರು ಶಿಕ್ಷಕರಾಗಿ ಸುದೀರ್ಘ ಸೇವೆ ಸಲ್ಲಿಸಿ ಈ ತಿಂಗಳು ಸೇವೆಯಿಂದ ನಿವೃತ್ತರಾಗುತ್ತಿದ್ದಾರೆ. ಇವರಿಗೆ ನಿವೃತ್ತ ಜೀವನದ ಶುಭಾಶಯಗಳು.
ಸೇವೆಯಿಂದ ನಿವೃತ್ತರಾದರೂ ಪ್ರವೃತ್ತಿಯಿಂದ ನಿವೃತ್ತರಾಗದೆ ಸಮಾಜಕ್ಕೆ ತಮ್ಮಿಂದ ಇನ್ನಷ್ಟು ಸೇವೆಗಳು ಲಭಿಸಲಿ. ದೇವರು ತಮಗೆ ಆಯುರಾರೋಗ್ಯ ಐಶ್ವರ್ಯ ನೆಮ್ಮದಿ ಕರುಣಿಸಲಿ. ನಿಮ್ಮ ನಿವೃತ್ತ ಜೀವನ ಸುಖಮಯವಾಗಿರಲಿ ಎಂದು ಜಿಲ್ಲೆಯ ಸಮಸ್ತ ಶಿಕ್ಷಕರ ಪರವಾಗಿ ಹಾರೈಸುತಿದ್ದೇವೆ.