ಕರ್ನಾಟಕ ರಾಜ್ಯ ಸರ್ಕಾರವು ಅತ್ಯುನ್ನತ ಸೇವೆಗೈದ ಸಾಧನೆಗೈದ ರಾಜ್ಯ ಸರ್ಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡುವ ಬಗ್ಗೆ ಸರಕಾರದ ನಿರ್ದೇಶನದಂತೆ ಮೌಲ್ಯಮಾಪನ ಸಮಿತಿಯನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದು ಒಳಾಡಳಿತ ಇಲಾಖೆ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಸಮವಸ್ತ್ರ ಅಧಿಕಾರಿ ಸಿಬ್ಬಂದಿಯನ್ನು ಹೊರತುಪಡಿಸಿ ಹಾಗೂ ಶಿಕ್ಷಣ ಇಲಾಖೆಯ ಬೋಧಕ ಸಿಬ್ಬಂದಿಯನ್ನು ಹೊರತುಪಡಿಸಿ ಸರ್ವೋತ್ತಮ ಪ್ರಶಸ್ತಿ ಪುರಸ್ಕಾರ ಪ್ರಕ್ರಿಯೆಯನ್ನು ನಡೆಸುವ ಬಗ್ಗೆ ಸರ್ಕಾರದ ಸುತ್ತೋಲೆ 2022 ದಿನಾಂಕ 18.03.2022 ರಂತೆ ನಿರ್ದೇಶನ ನೀಡಲಾಗಿರುತ್ತದೆ.
ದಿನಾಂಕ 18.04.2022 ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆಸರ್ವೋತ್ತಮ ಸೇವಾ ಪ್ರಶಸ್ತಿ ನೀಡುವ ಬಗ್ಗೆ ಸಮಿತಿ ನಡೆಸಿದ ಸಭೆಯಲ್ಲಿ ಸರಕಾರದ ಆದೇಶ 2022 ದಿನಾಂಕ 18.03.2022 ರಂತೆ ಕರ್ನಾಟಕ ರಾಜ್ಯ ಸರ್ಕಾರವು ಅತ್ಯುನ್ನತ ಸೇವೆಗೈದ / ಸಾಧನೆಗೈದ ರಾಜ್ಯ ಸರ್ಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡುವ ಬಗ್ಗೆ ಈ ಕೆಳಕಂಡ ಅಧಿಕಾರಿ /ನೌಕರರನ್ನು ಹೆಸರನ್ನು ಅಂತಿಮಗೊಳಿಸಿ ತೀರ್ಮಾನಿಸಲಾಗಿದೆ.